Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದರೆ ಪ್ರತಿಭಟನೆ, ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಕೆ, ಖರ್ಗೆ ಜತೆಗಿನ ಕಪನೂರು ಚಿತ್ರ ಬಿಡುಗಡೆ ಮಾಡಿದ ಬಿಜೆಪಿ
Team Udayavani, Dec 30, 2024, 9:07 PM IST
ಬೆಂಗಳೂರು: ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಆತ್ಮಹತ್ಯೆ ಪ್ರಕರಣ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಬೇಕು. ಇಲ್ಲದಿದ್ದರೆ ಜ.4ರಂದು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಬಿಜೆಪಿ ಎಚ್ಚರಿಕೆ ನೀಡಿದೆ.
ಸೋಮವಾರ ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರಕರಣ ಸಿಬಿಐಗೆ ವಹಿಸಲು ರಾಜ್ಯ ಸರಕಾರ ವಿಫಲವಾದಲ್ಲಿ ಜ.4 ರಂದು ಕಲಬುರಗಿಯಲ್ಲಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೂ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮ ಕೈಗೊಂಡರೆ ದಿಲ್ಲಿಯಿಂದ ನಿಮಗೆ ಕರೆ ಬರುತ್ತದೆ ಮತ್ತು ನಿಮ್ಮ ಕುರ್ಚಿಗೆ ಕುತ್ತು ಬರುತ್ತದೆ ಎಂದು ಹೆದರಬೇಡಿ. ಯಾವುದಕ್ಕೂ ಹೆದರಬೇಡಿ ಮತ್ತು ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಿ. ಹಿಂದುಳಿದ ವರ್ಗಗಳ ಚಾಂಪಿಯನ್ ಆಗಿರುವುದಾಗಿ ನೀವೆ ಹೇಳಿಕೊಂಡಿದ್ದೀರಿ. ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ’ ಎಂದರು.
‘ಆಂದೋಲನದ ಸಿದ್ಧಲಿಂಗ ಸ್ವಾಮೀಜಿ ಮತ್ತು ಬಿಜೆಪಿ ನಾಯಕರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಸೋಲಾಪುರದ ಹಂತಕರ ನೇಮಿಸಲಾಗಿದೆ ಎಂದು ಗುತ್ತಿಗೆದಾರ ಸಚಿನ್ ತಮ್ಮ ಡೆತ್ ನೋಟ್‌ನಲ್ಲಿ ತಿಳಿಸಿದ್ದಾರೆ. ಇದು ಗಂಭೀರ ವಿಷಯವಾಗಿದ್ದು, ರಾಜ್ಯ ಬಿಜೆಪಿ ಜ. 3ರವರೆಗೆ ಕಾಯಲಿದೆ. ಪ್ರಕರಣವನ್ನು ಸಿಬಿಐಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೇವರು ಬುದ್ಧಿ ನೀಡಲಿ’ ಎಂದು ಹೇಳಿದರು.
ಫೋಟೋ ಬಿಡುಗಡೆಗೊಳಿಸಿದ ವಿಜಯೇಂದ್ರ:
‘ಸಂತ್ರಸ್ತನಿಗೆ ಬೆದರಿಕೆ ಹಾಕಿರುವ ಆರೋಪಿ ರಾಜು ಕಾಪನೂರ ಪ್ರಿಯಾಂಕ್ ಖರ್ಗೆ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆಪ್ತ. ಆರೋಪಿ ಸಾಮಾನ್ಯ ವ್ಯಕ್ತಿಯಲ್ಲ ಮತ್ತು ಹೆಚ್ಚು ಪ್ರಭಾವಶಾಲಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕರಣ ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿದರು. ರಾಜು ಕಾಪನೂರ ಪ್ರಿಯಾಂಕ್ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇರುವ ಫೋಟೊಗಳ ಬಿಡುಗಡೆ ಮಾಡಿದರು.
ಅಹಿಂದ ನಾಯಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿಯಿದ್ದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಿಂದ ಹೊರಬಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆದು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು… pic.twitter.com/EOGiNLCWCM
— Office of BY Vijayendra (@OfficeofBYV) December 30, 2024
ಪ್ರಕರಣ ಸಿಬಿಐಗೆ ವಹಿಸಬೇಕೆಂಬುದು ಮೃತ ಸಚಿನ್ ಕುಟುಂಬದವರ ಬೇಡಿಕೆಯಾಗಿದೆ. ಈ ಹಿಂದೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗುತ್ತಿಗೆದಾರರೊಬ್ಬರ ಆತ್ಮಹತ್ಯೆ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು. ಸರ್ಕಾರ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆದು, ಮೃತ ಗುತ್ತಿಗೆದಾರರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.