Controversy: ಎಚ್‌ಡಿಕೆಗೆ “ಕರಿಯ” ಹೇಳಿಕೆ ವಿವಾದ; ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್
ಯಾರಾದರೂ ದೇವೇಗೌಡರ ಕುಟುಂಬ ಕೊಂಡುಕೊಳ್ಳಲು ಸಾಧ್ಯವಾ? ಎಂದು ಕುಟುಂಬ ಖರೀದಿ ಹೇಳಿಕೆಗೂ ಸ್ಪಷ್ಟನೆ
Team Udayavani, Nov 12, 2024, 5:43 PM IST
ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಎಲ್ಲೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ವಸತಿ ಹಾಗೂ ವಕ್ಫ್ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನ ಕರಿಯಣ್ಣ ಅಂತಿದ್ದೆ. ನನ್ನನ್ನ ಕುಳ್ಳ ಅಂತಿದ್ದರು. ಈ ಹೇಳಿಕೆಯಿಂದ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದರು.
ಎಚ್‌ಡಿಡಿ ಕುಟುಂಬ ಕೊಂಡುಕೊಳ್ಳಲು ಸಾಧ್ಯವಾ?
ದೇವೇಗೌಡರ ಕುಟುಂಬ ಕೊಂಡುಕೊಳ್ಳುತ್ತೇನೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರಾದರೂ ದೇವೇಗೌಡರ ಕುಟುಂಬ ಕೊಂಡುಕೊಳ್ಳಲು ಸಾಧ್ಯವಾ? ನನಗೆ ದೇವೇಗೌಡರ ಮೇಲೆ ಬಹಳ ಗೌರವವಿದೆ. ಈ ಹಿಂದೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಸ್ಲಿಂ ಮತಗಳು ಬೇಡ ಎಂದಿದ್ದರು. ಈಗ ದುಡ್ಡು ಕೊಟ್ಟು ಖರೀದಿಸಲು ಮುಂದಾಗಿದ್ದಾರೆ. ಅದನ್ನು ಉಲ್ಲೇಖಸಿ ನಾನು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
Addressing the Media in Mysore City of Karnataka 2/2 pic.twitter.com/3r6IY1x8x2
— B Z Zameer Ahmed Khan (@BZZameerAhmedK) November 12, 2024
ಜಮೀರ್ ಅಹ್ಮದ್ ಖಾನ್ ಕರಿಯ ಕುಮಾರಸ್ವಾಮಿ ಹೇಳಿಕೆಗೆ ಜೆಡಿಎಸ್ -ಬಿಜೆಪಿ “ಜನಾಂಗೀಯ” ನಿಂದನೆ ಎಂದು ಟೀಕಿಸಿತ್ತು. ವಸತಿ ಮತ್ತು ವಕ್ಫ್ ಸಚಿವರು ಜಮೀರ್ ಅಹ್ಮದ್ ಖಾನ್ ಈ ಹಿಂದೆ ಜೆಡಿಎಸ್‌ನಲ್ಲಿದ್ದರು ಮತ್ತು ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಕುಮಾರಸ್ವಾಮಿಯವರಿಗೆ ಅತ್ಯಂತ ಆಪ್ತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.