Costal: ಡ್ರಗ್ಸ್ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ
ಕರಾವಳಿ ಪ್ರದೇಶಕ್ಕೆ ಮಕ್ಕಳ ಕಳುಹಿಸಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣ
Team Udayavani, Oct 23, 2024, 2:09 AM IST
ಮಂಗಳೂರು: ಕರಾವಳಿಯಲ್ಲಿ ವ್ಯಾಪಕವಾಗುತ್ತಿರುವ ಡ್ರಗ್ಸ್ ಜಾಲವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಾನೂನನ್ನು ಬಿಗಿಗೊಳಿಸುವ ಅಗತ್ಯ ಇದೆ. ಈ ಕುರಿತಂತೆ ಕಾನೂನಿನಲ್ಲಿ ಕೆಲವು ಬದಲಾವಣೆ ತರುವ ನಿಟ್ಟಿನಲ್ಲಿ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ವ್ಯಸನಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿರುವ ಕಾರಣ ಕರಾವಳಿಗೆ ಮಕ್ಕಳನ್ನು ಕಳುಹಿಸಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಡ್ರಗ್ಸ್ ಜಾಲದ ಆರೋಪಿಗಳು ಸಿಕ್ಕಿಬಿದ್ದರೂ ಅವರು ಕೆಲವೇ ದಿನದ ಅಂತರದಲ್ಲಿ ಜಾಮೀನಿನಲ್ಲಿ ಹೊರಬಂದು ಮತ್ತೆ ಕೃತ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಕಾನೂನಿಗೆ ತಿದ್ದುಪಡಿ ತಂದು ಕಠಿನ ನಿಯಮ ರೂಪಿಸಬೇಕಾಗಿದೆ ಎಂದರು.
“ಎಚ್‌ಡಿಕೆಗೆ ಅಭಿವೃದ್ಧಿ ಬೇಡ, ರಾಜಕೀಯ ಮಾತ್ರ’
ಎಚ್.ಡಿ. ಕುಮಾರಸ್ವಾಮಿ ಬಿಜೆಪಿಗೆ ಈ ಹಿಂದೆ ಯಾವ ರೀತಿ ಮೋಸ ಮಾಡಿದ್ದರು ಹಾಗೂ ಈಗ ಯಾರ ಜತೆ ಇದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಜೈಲಿಗೆ ಕಳುಹಿಸುತ್ತೇನೆ ಎಂದು ಪದೇಪದೆ ಹೇಳುತ್ತಾರೆ. ಅವರನ್ನು ತಡೆದವರಾರು? ಯಾವ ಕ್ರಮ ಬೇಕಾದರೂ ಕೈಗೊಳ್ಳಿ ಎಂದು ಭಂಡಾರಿ ಹೇಳಿದರು.
ಸಿ.ಪಿ. ಯೋಗೇಶ್ವರ್ ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದವರು. ಪಕ್ಷದ ತತ್ವ-ಸಿದ್ಧಾಂತ ನಂಬಿ ಬರುವುದಾದರೆ ಸ್ವಾಗತ. ನಮಗೇನೂ ಅವರ ಅನಿವಾರ್ಯತೆ ಇಲ್ಲ. ಬರುತ್ತೇವೆ ಎಂದವರಿಗೆ ಬೇಡ ಎನ್ನಲ್ಲ ಎಂದರು.
ಕಸ್ತೂರಿ ರಂಗನ್ ವರದಿ ವಿಚಾರವಾಗಿ ಕೆರಾಡಿ, ಜಡ್ಕಲ್ ಪ್ರದೇಶದ ಜನರು ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದಾಗ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಮನವೊಲಿಕೆ ಮಾಡಿದ್ದೇವೆ. ಕಸ್ತೂರಿ ರಂಗನ್ ವರದಿ ಶಿಫಾರಸು ಕಾಂಗ್ರೆಸ್ ಅನುಷ್ಠಾನ ಮಾಡಲ್ಲ ಎಂಬುದು ನಮ್ಮ ನಿಲುವು. ಈ ಪ್ರದೇಶ ಗಳಲ್ಲಿ ಕಾಂಗ್ರೆಸ್ ಬಲವಾಗಿದೆ. ಬಹಿಷ್ಕಾರದಿಂದ ಕೊಂಚ ಹಿನ್ನಡೆ ಆಗಿದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಿಧಾನ ಪರಿಷತ್‌ನ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಕಿಶನ್ ಹೆಗ್ಡೆ, ವಿಕಾಸ್ ಶೆಟ್ಟಿ, ಲಾರೆನ್ಸ್ ಡಿ’ ಸೋಜಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.