Council By Polls: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾದ ರಾಜು ಪೂಜಾರಿ
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆಗೆ ಅಧಿಕೃತ ಅಭ್ಯರ್ಥಿ ಘೋಷಿಸಿದ ಎಐಸಿಸಿ
Team Udayavani, Oct 2, 2024, 8:08 PM IST
ಕುಂದಾಪುರ: ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ಸ್ಥಾನಕ್ಕೆ ಅ. 21ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಲ್ಲವ ಸಮುದಾಯದ ಬೈಂದೂರಿನ ಎಸ್. ರಾಜು ಪೂಜಾರಿ ಅವರನ್ನು ಘೋಷಿಸಲಾಗಿದೆ.
ಉಪಚುನಾವಣೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಎಸ್.ರಾಜು ಪೂಜಾರಿ, ಉಡುಪಿಯ ಭುಜಂಗ ಶೆಟ್ಟಿ, ಕಾರ್ಕಳದ ಡಿ.ಆರ್. ರಾಜು, ಉದಯ ಶೆಟ್ಟಿ ಮುನಿಯಾಲು, ಬಂಟ್ವಾಳದ ಚಂದ್ರಪ್ರಕಾಶ ಶೆಟ್ಟಿ ತುಂಬೆ ಅವರ ಹೆಸರು ಕೇಳಿ ಬಂದಿದ್ದವು. ಕೆಪಿಸಿಸಿ ಸಲ್ಲಿಸಿದ್ದ ಅಭ್ಯರ್ಥಿಗಳ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜು ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಇಂದು ನಾಮಪತ್ರ ಸಲ್ಲಿಕೆ
ರಾಜು ಪೂಜಾರಿ ಅವರು ಅ. 3ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಉಭಯ ಜಿಲ್ಲೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಸಹಕಾರಿ, ರಾಜಕೀಯ ರಂಗದಲ್ಲಿ ಸಕ್ರಿಯ
ಇವರು ಬಿ.ಕಾಂ. ಪದವೀಧರ. ಆಸ್ಕರ್ ಫೆರ್ನಾಂಡಿಸ್ ಮತ್ತು ರಾಜೇಂದ್ರ ಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರಾಜು ಪೂಜಾರಿ ಬೈಂದೂರು ಸಮೀಪದ ಯಡ್ತರೆ ಗ್ರಾಮದವರು. ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷರಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಗ್ರಾ.ಪಂ.ಸದಸ್ಯರಾಗಿ, ತಾ.ಪಂ. ಸದಸ್ಯರಾಗಿ, ಜಿ. ಪಂ.ಸದಸ್ಯರಾಗಿ, ಜಿ.ಪಂ.ಅಧ್ಯಕ್ಷರಾಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವಿ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಮರವಂತೆ – ಬಡಾಕೆರೆ ಸಹಕಾರಿ ಸೇವಾ ಸಂಘದ ಅಧ್ಯಕ್ಷರಾಗಿ 25 ವರ್ಷ ಪೂರೈಸಿದ್ದಾರೆ. ಶ್ರೀರಾಮ ಸೌಹಾರ್ದ ಸೊಸೈಟಿ ಅಧ್ಯಕ್ಷರಾಗಿ, ಸಾಗರ್ ಸೊಸೈಟಿ ನಿರ್ದೇಶಕರಾಗಿದ್ದಾರೆ.
ಉಡುಪಿ ಜಿಲ್ಲೆಗೆ ಪ್ರಾತಿನಿಧ್ಯ
ಬಿಜೆಪಿಯು ದ.ಕ. ಜಿಲ್ಲೆಯ ಕಿಶೋರ್‌ಕುಮಾರ್ ಬೊಟ್ಯಾಡಿಯವರಿಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ ಉಡುಪಿ ಜಿಲ್ಲೆಗೆ ಪ್ರಾತಿನಿಧ್ಯ ನೀಡಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಇಲ್ಲದಿರುವುದು ಕೂಡ ರಾಜು ಪೂಜಾರಿ ಆಯ್ಕೆಗೆ ಒಂದು ಕಾರಣ ಇರಬಹುದು ಎನ್ನಲಾಗಿದೆ.
ಈ ಕ್ಷೇತ್ರವು ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಅವರು ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾರಣ ಈಗ ಉಪಚುನಾವಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.