Council; ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಶೀಘ್ರ ಮಂಡಳಿ: ಸಚಿವ ಡಿ. ಸುಧಾಕರ್
ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಐವನ್ ಡಿ'ಸೋಜಾ ಪ್ರಶ್ನೆಗೆ ಉತ್ತರ
Team Udayavani, Jul 20, 2024, 7:20 AM IST
ಬೆಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಶೀಘ್ರ ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಪರಿವರ್ತಿಸಲು ನಿರ್ಧರಿಸಿದ್ದು ಈ ಸಂಬಂಧ ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ. ಶೀಘ್ರ ಮಂಡಳಿ ಅಸ್ತಿತ್ವಕ್ಕೆ ಬರಲಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ವಿಧಾನ ಪರಿಷತ್‌ನಲ್ಲಿ ತಿಳಿಸಿದರು.
ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಐವನ್ ಡಿ’ಸೋಜಾ ಪ್ರಾಧಿಕಾರವನ್ನು ಮಂಡಳಿಯನ್ನಾಗಿ ಪರಿವರ್ತಿಸಲು ಸರಕಾರ ಕೈಗೊಂಡ ಕ್ರಮಗಳೇನು ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಎಲ್ಲ ಶಾಸಕರನ್ನು ಸದಸ್ಯರನ್ನಾಗಿ ಹೊಂದಿಲ್ಲದಿರುವುದರಿಂದ ಹಾಗೂ ಎಲ್ಲ ಶಾಸಕರ ಸದಸ್ಯತ್ವದೊಂದಿಗೆ ಕರಾವಳಿ ವ್ಯಾಪ್ತಿಯ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ರಚಿಸಲು ಸರಕಾರ ನಿರ್ಧರಿಸಿದೆ ಎಂದರು.
ಈ ಸಂಬಂಧದ ಮಸೂದೆಗೆ ಕಳೆದ ಡಿಸೆಂಬರ್‌ನಲ್ಲೇ ವಿಧಾನ ಮಂಡಲದಲ್ಲಿ ಅನುಮೋದನೆ ಪಡೆಯಲಾಗಿದ್ದು ರಾಜ್ಯಪಾಲರ ಒಪ್ಪಿಗೆಯೂ ದೊರಕಿದೆ. ಅಷ್ಟೇ ಅಲ್ಲ, ಅಧಿಸೂಚನೆ ಕೂಡ ಹೊರಡಿಸಲಾಗಿದೆ. ಈ ಸಂಬಂಧ ಸರಕಾರದಿಂದ ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರ ಇದು ಅಸ್ತಿತ್ವಕ್ಕೆ ಬರಲಿದೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತರಷ್ಟೇ ಸಾಧನೆ ಸಾಧ್ಯ ಎಂಬುದು ಭ್ರಮೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.