Council: ‘ನಗರಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅಧಿಕಾರಿಗಳ ಮಾತೇ ಅಂತಿಮ ಎನ್ನುವಂತಿದೆ’.’
'ಉದಯವಾಣಿ ವರದಿ' ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ
Team Udayavani, Jul 19, 2024, 7:20 AM IST
ಬೆಂಗಳೂರು: ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ನಡೆಯದೆ ಹಲವು ತಿಂಗಳು ಕಳೆದಿರುವುದು ಹಾಗೂ ಚುನಾಯಿತ ಸದಸ್ಯರಿಗೆ ಅಧಿಕಾರವಿಲ್ಲದ ಬಗ್ಗೆ ಉದಯವಾಣಿ ಸುದಿನ ಜೂ. 30ರಂದು ಪ್ರಕಟಿಸಿದ “ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅಧಿಕಾರ ಇದ್ದೂ ಇಲ್ಲದಂತಾದ ಚುನಾಯಿತ ಸದಸ್ಯರು’ ಎನ್ನುವ ವರದಿ ಜು. 18ರಂದು ವಿಧಾನಪರಿಷತ್‌ನಲ್ಲಿ ಗಮನಸೆಳೆಯಿತು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಸಾಲಿಗ್ರಾಮ ಪ.ಪಂ., ಉಡುಪಿ ನಗರಸಭೆ ಸೇರಿದಂತೆ ರಾಜ್ಯದ ಎಲ್ಲ ಪ.ಪಂ. ಹಾಗೂ ನಗರಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಇಲ್ಲಿ ಆಡಳಿತಾಧಿಕಾರಿಗಳ ಆಡಳಿತವಿದ್ದು ಅಧಿಕಾರಿಗಳ ಮಾತೇ ಅಂತಿಮ ಎನ್ನುವಂತಾಗಿದೆ.
ಇದರಿಂದಾಗಿ ಜನರ ಕೆಲಸಗಳು ಸರಿಯಾಗಿ ಆಗುತ್ತಿಲ್ಲ, ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿದೆ. ಚುನಾಯಿತ ಸದಸ್ಯರಿಗೆ ನೇರ ಅಧಿಕಾರವಿಲ್ಲದ ಕಾರಣ ಹೆಸರಿಗಷ್ಟೇ ಸದಸ್ಯರು ಎನ್ನುವಂತಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ. ಜನಪ್ರನಿಧಿಗಳ ಹಿತದೃಷ್ಟಿಯಿಂದ ಕಾನೂನು ತೊಡಕುಗಳನ್ನು ನಿವಾರಿಸಿ ಆದಷ್ಟು ಬೇಗ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಸೂಕ್ತ ಕ್ರಮದ ಭರವಸೆ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.