ಎಣಿಕೆ ನಿಧಾನ-ಫಲಿತಾಂಶ ವಿಳಂಬ
ಇವಿಎಂ-ವಿವಿಪ್ಯಾಟ್ ಮತ ತಾಳೆ
Team Udayavani, May 14, 2019, 6:00 AM IST
ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆ ಮತ ಎಣಿಕೆ ಸಂದರ್ಭ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕುವಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿರುವುದರಿಂದ ಮತ ಎಣಿಕೆ ನಿಧಾನವಾಗಲಿದ್ದು, ಫಲಿತಾಂಶವೂ ವಿಳಂಬವಾಗಲಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಇವಿಎಂ- ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕಾಗಿದ್ದು, ಇದಕ್ಕೆ ಸಾಕಷ್ಟು ಸಮಯ ಹಿಡಿಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಬೇಕು. ಒಂದು ವಿವಿಪ್ಯಾಟ್‌ನ ಚೀಟಿ ಎಣಿಕೆಗೆ ಕನಿಷ್ಠ 45 ನಿಮಿಷ ಬೇಕು.
ಎಲ್ಲ 5 ವಿವಿಪ್ಯಾಟ್ ಎಣಿಕೆಗೆ ಕನಿಷ್ಠ 3ರಿಂದ 4 ತಾಸು ಬೇಕು. ಇದು ಅಂತಿಮ ಫಲಿತಾಂಶ ವಿಳಂಬವಾಗಲು ಪ್ರಮುಖ ಕಾರಣ. ಇದರಿಂದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಸ್ಪಷ್ಟ ಚಿತ್ರಣ ಹೊರಬೀಳುವಾಗ ಸಂಜೆ ಆಗಬಹುದು.
ಈ ಬಾರಿ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕಬೇಕಾಗಿರುವುದರಿಂದ ಮತ ಎಣಿಕೆಯ ಕೊನೆಯಲ್ಲಿ ಕೇಂದ್ರದಲ್ಲಿರುವ 14 ಟೇಬಲ್ಗಳ ಪೈಕಿ ಕೊನೆಯ ಟೇಬಲ್ನ ವಿವಿಪ್ಯಾಟ್‌ನಲ್ಲಿನ ಮುದ್ರಿತ ಚೀಟಿಗಳನ್ನು ತಾಳೆ ಮಾಡಲಾಗುತ್ತದೆ. ಇದು ಮುಗಿದ ಬಳಿಕವಷ್ಟೇ ಅಂತಿಮ ಫಲಿತಾಂಶ ಘೋಷಿಸಲಾಗುತ್ತದೆ. ಹೀಗಾಗಿ ಅಂತಿಮ ಫಲಿತಾಂಶ ಪ್ರಕಟ ರಾತ್ರಿ 8 ಗಂಟೆ ಆಗಬಹುದು ಎಂದು ಆಯೋಗದ ಅಧಿಕಾರಿಗಳು ಹೇಳುತ್ತಾರೆ.
ಈ ಹಿಂದೆ ಒಂದು ವಿಧಾನಸಭಾ ಕ್ಷೇತ್ರದ ಯಾವುದಾದರೂ ಒಂದು ಮತಗಟ್ಟೆಯ ಇವಿಎಂ-ವಿವಿಪ್ಯಾಟ್ ಮತಗಳನ್ನು ತಾಳೆ ಹಾಕಲಾಗುತ್ತಿತ್ತು. ಈಗ ಪ್ರತಿ ವಿಧಾನಸಭಾ ಕ್ಷೇತ್ರದ5 ಮತಗಟ್ಟೆಗಳಲ್ಲಿ ಇವಿಎಂ-ವಿವಿಪ್ಯಾಟ್ ಮತಗಳನ್ನು ತಾಳೆ ಹಾಕುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಜತೆಗೆ ಎಣಿಕೆ ಆರಂಭವಾದ ಬಳಿಕ ಕೆಲವು ತಾಂತ್ರಿಕ ಕಾರಣಗಳು ಎದುರಾಗುತ್ತವೆ. ಕೆಲವು ಕಡೆ ಅಭ್ಯರ್ಥಿಗಳು ಹೆಚ್ಚಿರುತ್ತಾರೆ. ಈ ಎಲ್ಲ ಅಂಶಗಳಿಂದಾಗಿ ಫಲಿತಾಂಶ ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಬಂದಿಗೆಬೇಕಾದ ಅಗತ್ಯ ತರಬೇತಿ ಕೊಡಲಾಗಿದ್ದು, ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣ ಆಯೋಗದ ಅಧಿಕಾರಿಗಳು ಹೇಳುತ್ತಾರೆ.
1,120 ಮತಗಟ್ಟೆಗಳಲ್ಲಿ ‘ಮತ ತಾಳೆ’
ರಾಜ್ಯದ 28 ಲೋಕಸಭಾ ಕ್ಷೇತ್ರಗಳವ್ಯಾಪ್ತಿಯಲ್ಲಿ 224 ವಿಧಾನಸಭಾ ಕ್ಷೇತ್ರಗಳಿದ್ದು, 58,186 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಈಗ ಸುಪ್ರೀಂ ಆದೇಶದಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ;28 ಲೋಕಸಭಾ ಕ್ಷೇತ್ರಗಳಲ್ಲಿ ತಲಾ 40ರಂತೆ ಒಟ್ಟು 1,120 ಮತಗಟ್ಟೆಗಳಲ್ಲಿ ಇವಿಎಂ-ವಿವಿಪ್ಯಾಟ್ ಮತ ತಾಳೆ ಮಾಡಬೇಕಾಗಿದೆ. ಇದಕ್ಕಾಗಿ ಹೆಚ್ಚುವರಿ 5 ಸಾವಿರ ಸಿಬಂದಿ ಮತ್ತು 3 ತಾಸು ಹೆಚ್ಚುವರಿ ಸಮಯ ಬೇಕಾಗುತ್ತದೆ.
ಸುಪ್ರೀಂಕೋರ್ಟ್ ಆದೇಶದ ಅನುಸಾರ ಮತ ಎಣಿಕೆಗೆ ಸಾಕಷ್ಟು ಸಮಯ ಹಿಡಿಯಲಿದೆ. ಒಂದು ವಿವಿಪ್ಯಾಟ್‌ನ ಚೀಟಿಗಳ ಎಣಿಕೆಗೆ ಕನಿಷ್ಠ 45 ನಿಮಿಷ ಬೇಕು. ಹೀಗಾಗಿ ಈ ಬಾರಿ ಒಟ್ಟಾರೆ ಅಂತಿಮ ಫಲಿತಾಂಶ ಹೊರಬರಲು ರಾತ್ರಿ 8 ಗಂಟೆ ಆಗಬಹುದು.
-ಸಂಜೀವ್ ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ
-ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.