Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
ಚನ್ನಪಟ್ಟಣಕ್ಕೆ ಯಾರು ಕೂಡ ನನ್ನನ್ನು ಚುನಾವಣೆ ಪ್ರಚಾರಕ್ಕೆ ಬನ್ನಿ ಎಂದು ಕರೆದಿಲ್ಲ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ
Team Udayavani, Nov 17, 2024, 7:15 AM IST
ಮಂಗಳೂರು: ನ್ಯಾಯಾಲಯದ ತೀರ್ಪು ಬಂದು ಯಾರು ತಪ್ಪಿತಸ್ಥ ಎಂದು ತೀರ್ಮಾನ ಆಗುತ್ತದೋ ಆಗ ಅವರು ರಾಜೀನಾಮೆ ನೀಡಬೇಕು, ಅವರನ್ನು ಜೈಲಿಗೆ ಕಳುಹಿಸುವ ಕೆಲಸವೂ ಆಗಬೇಕು. ನ್ಯಾಯಾಲಯದ ತೀರ್ಪು ಬರುವವರೆಗೆ ಯಾರೂ ರಾಜೀನಾಮೆ ಕೊಡಬೇಕಾಗಿಲ್ಲ. ಹಾಗೆ ರಾಜೀನಾಮೆ ನೀಡುತ್ತಾ ಹೋದರೆ, ವಿಧಾನಸೌಧದಲ್ಲಿರುವ ಶೇ. 75 ಮಂದಿ ರಾಜೀನಾಮೆ ನೀಡಬೇಕಾಗುತ್ತದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಹಳಷ್ಟು ಮಂದಿ ಇದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ರಾಜೀನಾಮೆ ಕೊಡಿ ಕಾಂಗ್ರೆಸ್‌ನವರು, ಮುಖ್ಯಮಂತ್ರಿ ರಾಜೀನಾಮೆ ನೀಡಿ ಎಂದು ಬಿಜೆಪಿ, ದಳದವರು ಕೇಳುವುದು ಸರಿಯಲ್ಲ ಎಂದರು.
ಚನ್ನಪಟ್ಟಣ ಉಪಚುನಾವಣೆ ಪ್ರಚಾರದಲ್ಲಿ ಪ್ರಚಾರ ಕಾರ್ಯದಿಂದ ಹೊರಗುಳಿದಿರುವ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಕೂಡ ನನ್ನನ್ನು ಚುನಾವಣೆ ಪ್ರಚಾರಕ್ಕೆ ಬನ್ನಿ ಎಂದು ಕರೆದಿಲ್ಲ. ಕೋರ್ ಕಮಿಟಿ ಅಧ್ಯಕ್ಷನಾಗಿದ್ದರೂ ಪ್ರಚಾರದ ಪಟ್ಟಿಯಿಂದ ನನ್ನ ಹೆಸರನ್ನು ತೆಗೆದಿದ್ದಾರೆ. ಯಾಕಾಗಿ ಈ ರೀತಿ ಮಾಡಿದ್ದಾರೆ ಎಂದು ಅವರೇ ಹೇಳಬೇಕು ಎಂದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶಾಸಕನಾದ ನನ್ನ ಪ್ರಭಾವ ಬಳಸಿ ಸಹೋದರಿಯ ಮಗ ಮಹೇಂದ್ರ 19 ಸೈಟ್ ಪಡೆದಿರುವ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ ಎಂದರು. ಸೈಟ್ ಕೊಡುವ ಪ್ರಕ್ರಿಯೆಯಲ್ಲಿ ತಪ್ಪಾಗಿದ್ದರೆ ಶಿಕ್ಷೆ ಅನುಭವಿಸುತ್ತಾರೆ. ನನ್ನ ಸಂಬಂಧಿ ಯೇ ಆಗಲಿ, ಯಾರೇ ಆಗಲಿ ಶಿಕ್ಷೆಯಾಗಲಿ. ಕಾನೂನಿನ ವಿರುದ್ಧವಾಗಿ ಮಾಡಿದರೆ ಶಿಕ್ಷೆಯಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.