ಮಕ್ಕಳ ಸಾವಿನ ಪ್ರಮಾಣ ಹೆಚ್ಚಿಸಲಿದೆಯೇ ಕೋವಿಡ್-19 ?
Team Udayavani, Apr 19, 2020, 2:53 PM IST
ಮಹಾಮಾರಿ ಕೋವಿಡ್-19 ವಿಶ್ವದ ಮಕ್ಕಳನ್ನು ಅಪಾಯಕ್ಕೆ ಸಿಲುಕಿಸಲಿದೆ. ಆದ ಕಾರಣ ಪೋಷಕರು, ಎಲ್ಲಾ ಮಟ್ಟದ ನಾಯಕರು ಮಕ್ಕಳನ್ನು ರಕ್ಷಿಸಬೇಕು ಎಂಬುದು ವಿಶ್ವಸಂಸ್ಥೆಯ ಕಳಕಳಿ.
ನ್ಯೂಯಾರ್ಕ್: ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್-19 ಸೋಂಕಿನಿಂದ ಬಹುದೊಡ್ಡ ಮಟ್ಟದಲ್ಲಿ ಸಾವಿನಿಂದ ಮಕ್ಕಳು ಪರಾರಿಯಾಗಿದ್ದಾರೆ. ಆದರೆ ಇದರ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮ ಕೋಟ್ಯಂತರ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.
ಈ ಬಗ್ಗೆ ವರದಿ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆ, ಕೋವಿಡ್-19 ಮಕ್ಕಳ ಹಕ್ಕುಗಳ ಬಿಕ್ಕಟ್ಟಿಗೆ ಕಾರಣವಾಗಲಿದೆ. ಪ್ರತಿ ದೇಶಗಳಲ್ಲಿನ ಎಲ್ಲ ವಯಸ್ಸಿನ ಮಕ್ಕಳ ಮೇಲೆ ಪರಿಣಾಮ ಬೀರಲಿದ್ದು, ನಿರ್ವಹಣಾ ಖರ್ಚು ಹೆಚ್ಚಾಗಲಿದೆ ಎಂದು ಅಂದಾಜಿಸಿಲಾಗಿದೆ. ನಿರಾಶ್ರಿತ ಕೇಂದ್ರ, ಕೊಳಚೆ ಪ್ರದೇಶಗಳಲ್ಲಿನ ಮಕ್ಕಳು ಹಾಗೂ ಯುವ ವಿಕಲಚೇತನರ ಮೇಲೆ ವ್ಯತಿರಿಕ್ತ ಪರಿಣಾಮವೂ ಬೀರಬಹುದು ಎಂದು ಎಚ್ಚರಿಸಿದೆ.
ಮಹಾಮಾರಿ ಕೋವಿಡ್-19 ವಿಶ್ವದ ಮಕ್ಕಳನ್ನು ಅಪಾಯಕ್ಕೆ ಸಿಲುಕಿಸಲಿದೆ. ಆದ ಕಾರಣ ಪೋಷಕರು, ಎಲ್ಲಾ ಮಟ್ಟದ ನಾಯಕರು ಮಕ್ಕಳನ್ನು ರಕ್ಷಿಸಬೇಕಿದೆ ಎಂದಿದೆ. ಲಾಕ್‌ಡೌನ್‌ನಿಂದ ಶಾಲೆಗಳಿಂದ ಹೊರಗುಳಿದಿರುವ ಬಹುತೇಕ ವಿದ್ಯಾರ್ಥಿಗಳಿಂದ ಕುಟುಂಬದಲ್ಲೂ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ.
ಮಕ್ಕಳ ಸಾವಿನ ಸಂಖ್ಯೆ
ಮನೆಯ ಆದಾಯ ಪ್ರಮಾಣ ಕಡಿಮೆಯಾಗಿರುವುದರಿಂದ ಬಡ ಕುಟುಂಬಗಳ ಸಂಖ್ಯೆ ಹೆಚ್ಚಾಗಲಿದೆ. ಅಗತ್ಯ ಆರೋಗ್ಯ ಮತ್ತು ಆಹಾರ ಪದಾರ್ಥಗಳ ಕೊರತೆಯಿಂದ ವಿಶೇಷವಾಗಿ ಮಕ್ಕಳ ಬೆಳವಣಿಗೆಯ ಮೇಲೆ ಅಡ್ಡ ಪರಿಣಾಮ ಬೀರಲಿದೆ. ಈ ಮಹಾಮಾರಿಯಿಂದ ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಕುಸಿತ ಕಂಡಿದ್ದು, ಇದು 2020ರಲ್ಲಿ ಸಾವಿರಾರು ಮಕ್ಕಳ ಸಾವಿಗೆ ಕಾರಣವಾಗಬಹುದು. ಮಾತ್ರವಲ್ಲದೇ ಹಿಂದಿನ ಎರಡು ಮೂರು ವರ್ಷಗಳಲ್ಲಿ ಕಡಿಮೆ ಪ್ರಮಾಣದಲ್ಲಿದ್ದ ಮಕ್ಕಳ ಸಾವಿನ ಸಂಖ್ಯೆ ಇದೊಂದೇ ವರ್ಷದಲ್ಲಿ ಹೆಚ್ಚಲಿದೆ. 2021ರಲ್ಲಿ ಹೆಚ್ಚುವರಿಯಾಗಿ ಸಾವಿರಾರು ಮಕ್ಕಳು ಸಾವನ್ನಪ್ಪಲಿದ್ದಾರೆ ಎಂದು ವರದಿ ಹೇಳಿದೆ.
1.5 ಬಿಲಿಯನ್ ಮಕ್ಕಳ ಮೇಲೆ ಪರಿಣಾಮ
ಈಗಾಗಲೇ 188 ದೇಶಗಳು ಕೋವಿಡ್-19ನಿಂದ ಶಾಲೆಗಳನ್ನು ಮುಚ್ಚಿವೆ. ಈ ಬೆಳವಣಿಗೆ 1.5 ಬಿಲಿಯನ್ ಮಕ್ಕಳ ಮತ್ತು ಯುವಜನರ ಮೇಲೆ ಪರಿಣಾಮ ಬೀರಿದ್ದು, 143 ದೇಶಗಳ 369 ಮಿಲಿಯನ್ ಶಾಲಾ ಮಕ್ಕಳು ಶಾಲೆಯಲ್ಲಿ ನೀಡುತ್ತಿದ್ದ ಪೌಷ್ಠಿಕಾಂಶದ ಊಟ ಇಲ್ಲದೆ ಅನ್ಯ ಮಾರ್ಗವನ್ನು ಅವಲಂಬಿಸುವಂತಾಗಿದೆ ಎಂದು ಮತ್ತೂಂದು ವರದಿ ತಿಳಿಸಿದೆ. ಆರ್ಥಿಕ ಹಿಂಜರಿತ ಮತ್ತು ಆದಾಯ ಬಗ್ಗೆ ಪರಿಶೀಲನೆ ನಡೆಸಿರುವ ಸಂಸ್ಥೆಯೊಂದರ ವರದಿಯು, ಅತ್ಯಂತ ಹೀನಾಯ ಸ್ಥಿತಿಯಲ್ಲಿರುವ ಮಕ್ಕಳು ಮತ್ತು ಯುವಕರಿಗೆ ಆರ್ಥಿಕ ನೆರವು ನೀಡುವ ಮೂಲಕ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಗುಟೆರೆಸ್ ಎಲ್ಲಾ ರಾಷ್ಟ್ರಗಳನ್ನು ಒತ್ತಾಯಿಸಿದೆ.ಅತಿ ಕಡಿಮೆ ಆದಾಯ ಇರುವ ಕುಟುಂಬಗಳಿಗೆ ಹಣದ ಸಹಾಯ ಮಾಡುವಂತೆಯೂ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.