ದೆಹಲಿ ನಿಜಾಮುದ್ದೀನ್ ಮಸೀದಿ ಸಭೆಗೆ ಕರ್ನಾಟಕದಿಂದ ಎಷ್ಟು ಮಂದಿ ತೆರಳಿದ್ದರು ಗೊತ್ತೇ?
ಆತನ 13 ವರ್ಷದ ಮಗನನ್ನು ಕೂಡಾ ಪರೀಕ್ಷೆಗೊಳಪಡಿಸಲಾಗಿದ್ದು ಪಾಸಿಟಿವ್ ವರದಿ ಬಂದಿದ್ದು ಇದು 84ನೇ ಪ್ರಕರಣವಾಗಿದೆ
Team Udayavani, Mar 31, 2020, 5:28 PM IST
ಬೆಂಗಳೂರು:ಇದೀಗ ದೇಶಾದ್ಯಂತ ಸದ್ದು ಮಾಡುತ್ತಿರುವ ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಕರ್ನಾಟಕದಿಂದ ಸುಮಾರು 45ಮಂದಿ ಭಾಗವಹಿಸಿದ್ದರು ಎಂಬ ಅಂಶ ಬಯಲಾಗಿದ್ದು, ಇವರಲ್ಲಿ ಶಿರಾದ ಕೋವಿಡ್ 19 ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿರುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಾರ್ಚ್ 10ರಂದು ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ರಾಜ್ಯದ 45 ಮಂದಿ ಭಾಗವಹಿಸಿದ್ದರು ಎಂದು ಟ್ವೀಟ್ ಮಾಡಿದ್ದು, ಶಿರಾದ ವ್ಯಕ್ತಿ ರಾಜ್ಯದಲ್ಲಿ ಪತ್ತೆಯಾದ 60ನೇ ಪ್ರಕರಣವಾಗಿತ್ತು. ಆತನ 13 ವರ್ಷದ ಮಗನನ್ನು ಕೂಡಾ ಪರೀಕ್ಷೆಗೊಳಪಡಿಸಲಾಗಿದ್ದು ಪಾಸಿಟಿವ್ ವರದಿ ಬಂದಿದ್ದು ಇದು 84ನೇ ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ.
ತುಮಕೂರು ವ್ಯಕ್ತಿ ದೆಹಲಿಯಿಂದ ರೈಲಿನಲ್ಲಿ ಯಶವಂತಪುರಕ್ಕೆ ಮಾರ್ಚ್ 14ರಂದು ಆಗಮಿಸಿದ್ದರು. ಬೆಂಗಳೂರಿನಿಂದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಶಿರಾಕ್ಕೆ ಬಂದಿರುವುದಾಗಿ ಟ್ರಾವೆಲ್ ಹಿಸ್ಟರಿ ನೀಡಿದ್ದಾರೆ. ದೆಹಲಿ ಮಸೀದಿ ಧಾರ್ಮಿಕ ಸಭೆಗೆ ತೆರಳಿದ್ದ 45 ಮಂದಿಯನ್ನು ಗುರುತಿಸಲಾಗಿದ್ದು, ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಈ ಎಲ್ಲರಿಂದಲೂ ಸೋಂಕು ಹರಡಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.