ಕೋವಿಡ್ 19 ಕಟ್ಟಿಹಾಕಲು ಸೀಲಿಂಗ್ ಸೂತ್ರ
Team Udayavani, Apr 6, 2020, 6:15 AM IST
ಹೊಸದಿಲ್ಲಿ: ಲಾಕ್ಡೌನ್ ರೀತಿಯ ಕ್ರಮಗಳಿಂದ ಕೋವಿಡ್ 19 ವೈರಾಣು ಹೆಚ್ಚು ಜನರಿಗೆ ವ್ಯಾಪಿಸುವುದನ್ನು ತಡೆಯುವಲ್ಲಿ ತಕ್ಕ ಮಟ್ಟಿಗೆ ಯಶಸ್ವಿಯಾಗಿರುವ ಕೇಂದ್ರ ಸರಕಾರ ಈಗ ಮುಂದಿನ ಹಂತದಲ್ಲಿ ರೋಗ ಪ್ರಸಾರವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹೊಸ ಯೋಜನೆ ಹಾಕಿಕೊಂಡಿದೆ.
ಆಯ್ದ ಸ್ಥಳಗಳನ್ನು ಬಫರ್ ಜೋನ್ ಎಂದು ಗುರುತಿಸುವುದು ಮತ್ತು ಕೋವಿಡ್ 19 ಹಾಟ್ ಸ್ಪಾಟ್ಗಳೆಂದು ಗುರುತಿಸಲಾಗಿರುವ ಪ್ರದೇಶಗಳನ್ನು ತಿಂಗಳ ಮಟ್ಟಿಗೆ ಸೀಲ್ ಮಾಡುವುದು ಕೇಂದ್ರದ ಹೊಸ ಯೋಜನೆಯ ಪ್ರಮುಖ ಅಂಶಗಳಾಗಿವೆ.
ಕೋವಿಡ್ 19 ವೈರಾಣು ಪ್ರಸರಣವನ್ನು ಕಟ್ಟಿಹಾಕಜಿಕೈಗೊಳ್ಳಬೇಕಿರುವ ತೀವ್ರಗಾಮಿ ಕ್ರಮಗಳ ಜಾರಿಗೆ ಸೋಂಕು ಹೆಚ್ಚಿರುವ ಕೆಲವು ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದೆ. ಈ ಪ್ರದೇಶಗಳನ್ನು ಸೀಲ್ ಮಾಡಿ, ಜನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ. ಕನಿಷ್ಠ ನಾಲ್ಕು ವಾರದ ವರೆಗೆ ಒಂದೂ ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗದಿದ್ದರೆ ಮಾತ್ರ ನಿರ್ಬಂಧಗಳನ್ನು ಕ್ರಮೇಣ ಸಡಿಲಿಸಲಾಗುತ್ತದೆ.
ಎಲ್ಲವೂ ಬಂದ್
ಸೋಂಕಿನ ಹಾಟ್ಸ್ಪಾಟ್ ಮತ್ತು ಬಫರ್ ಜೋನ್ ಎಂದು ಗುರುತಿಸಿದ ಪ್ರದೇಶಗಳ ಶಾಲೆ, ಕಾಲೇಜು ಮತ್ತು ಎಲ್ಲ ಕಚೇರಿಗಳನ್ನು ಮುಚ್ಚಿಸಲಿದ್ದು, ವಾಹನಗಳ ಸಂಚಾರವನ್ನು ಸಂಪೂರ್ಣ ವಾಗಿ ನಿಷೇಧಿಸಲಾಗುತ್ತದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಮಾತ್ರ ಲಭ್ಯವಿರುತ್ತವೆ. ಹಾಗೆಯೇ ಪರಿಣಾಮಕಾರಿ ಸಾಮಾಜಿಕ ಅಂತರ ನಿಯಮದೊಂದಿಗೆ ಇತರ ಸಾರ್ವ ಜನಿಕ ಆರೋಗ್ಯ ಉಪಕ್ರಮಗಳು ಜಾರಿಯಾದರೆ ಮಾತ್ರ ಸೋಂಕಿನ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಸಚಿವಾಲಯ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.