ಹಳ್ಳಿಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ವಾಗತಾರ್ಹ


Team Udayavani, May 17, 2021, 6:45 AM IST

ಹಳ್ಳಿಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ವಾಗತಾರ್ಹ

ಕೊರೊನಾ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹಬ್ಬಿರುವುದು ಸರಕಾರಕ್ಕೆ ದೊಡ್ಡ ತಲೆನೋವು ಹಾಗೂ ಸವಾಲಾಗಿ ಪರಿಣಮಿಸಿದೆ. ಗ್ರಾಮೀಣ ಭಾಗದಲ್ಲಿ ನಗರ ಪ್ರದೇಶಗಳಂತೆ ತ್ವರಿತ ತಪಾಸಣೆ, ಚಿಕಿತ್ಸೆ ವ್ಯವಸ್ಥೆ ಹಾಗೂ ಶೇ.95ರಷ್ಟು ಕಡೆ ಹೋಂ ಐಸೊಲೇಶನ್‌ಗೂ ವ್ಯವಸ್ಥೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಪದೇ ಪದೆ ಗ್ರಾಮೀಣ ಭಾಗಕ್ಕೆ ಕೊರೊನಾ ಹಬ್ಬದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಆದರೂ ಕರ್ನಾಟಕದಲ್ಲಿ ಕೊರೊನಾ ಗ್ರಾಮೀಣ ಭಾಗಕ್ಕೆ ಹಬ್ಬಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ.

ಹೀಗಾಗಿ ರಾಜ್ಯ ಸರಕಾರ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕಿತರು, ನಗರ ಮತ್ತು ಪಟ್ಟಣ ಪ್ರದೇಶದ ಕೊಳಗೇರಿಗಳಲ್ಲಿನ ಸೋಂಕಿತರು ಹೋಂ ಐಸೊಲೇಶನ್‌ನಲ್ಲಿ ಇರದಂತೆ ನೋಡಿಕೊಳ್ಳಲು ಮುಂದಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸ್ಥಾಪಿಸಿ ಅಲ್ಲಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಕೆಲಸಕ್ಕೆ ಮುಂದಾಗಿದೆ. ಈ ಕೆಲಸ ಮುಂಚೆಯೇ ಆಗಬೇಕಿತ್ತು. ನಿಧಾನವಾದರೂ ಪರಿಸ್ಥಿತಿಯ ತೀವ್ರತೆ ಅರಿತು ಸರಕಾರ ಅಗತ್ಯ ಹಾಗೂ ಅನಿವಾರ್ಯತೆಯ ನಿರ್ಧಾರ ಕೈಗೊಂಡಿದೆ.

ಆದರೆ ಗ್ರಾಮೀಣ ಭಾಗ ಹಾಗೂ ನಗರ ಪಟ್ಟಣದ ಕೊಳೆಗೇರಿ ಪ್ರದೇಶ ಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ಹಾಗೂ ಅದಕ್ಕೆ ಬೇಕಾದ ಮೂಲಸೌಕರ್ಯ ಕಲ್ಪಿಸುವುದು ಹೇಳಿದಷ್ಟು ಅಥವಾ ಅಂದುಕೊಂಡಷ್ಟು ಸುಲಭವಲ್ಲ. ಮನೆಯಿಂದ ಕಿ.ಲೋ. ಮೀಟರ್‌ಗಟ್ಟಲೆ ದೂರ ಇದ್ದರೆ ಕೊರೊನಾ ಕೇರ್‌ ಸೆಂಟರ್‌ಗೆ ದಾಖಲಾಗಲು ಜನ ಒಪ್ಪುವುದಿಲ್ಲ, ಅವರವರ ಮನೆಯ ಹತ್ತಿರವೇ ಕೊರೊನಾ ಕೇರ್‌ ಸೆಂಟರ್‌ ಸ್ಥಾಪಿಸಲು ಜಾಗದ ಕೊರತೆ ಇದೆ. ಜತೆಗೆ ವೈದ್ಯಕೀಯ ಸಿಬಂದಿ ಮತ್ತು ಮೂಲಸೌಕರ್ಯ ಒದಗಿಸುವುದು ಸವಾಲಿನ ಕೆಲಸ. ಕೊರೊನಾ ಕಾರ್ಯಪಡೆ ಪರಿಣಿತರ ಸಲಹೆಯಂತೆ ಎಲ್ಲ ಸಾಧಕ ಬಾಧಕ ಯೋಚಿ ಸಿಯೇ ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ನ ಸೋಂಕಿ­ತರಿಗೆ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸುವ ಕಾರ್ಯಕ್ಕೆ ಮುಂದಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋ ನ್ಮುಖವಾಗಿರುವುದು ಸ್ವಾಗತಾರ್ಹ.

ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿಗಳ ಹಿನ್ನೆಲೆ ಯಲ್ಲೂ ಇದು ಮಹತ್ವ ಪಡೆದಿದೆ. ಎರಡನೇ ಅಲೆ ಬಗ್ಗೆ ಸ್ವಲ್ಪ ಮಟ್ಟಿಗೆ ಮೈ ಮರೆತ ಸರಕಾರ ಮೂರನೇ ಅಲೆ ವಿಚಾರದಲ್ಲಿ ಈಗಿನಿಂದಲೇ ಎಚ್ಚೆತ್ತು ಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಗ್ರಾಮೀಣ ಭಾಗದಲ್ಲಿ ಸರಕಾರ ಈಗ ಯೋಚಿಸಿರುವಂತೆ ತತ್‌ಕ್ಷಣವೇ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪಂಚಾ ಯತ್‌, ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಶಾಶ್ವತ ವ್ಯವಸ್ಥೆ ಮಾಡ ಬೇಕು. ಇದಕ್ಕಾಗಿ ವಿಶೇಷ ಅನುದಾನ ಸಹ ನಿಗದಿ ಮಾಡಬೇಕು. ವೈದ್ಯಕೀಯ ಸಿಬಂದಿ ಮತ್ತು ಸೌಕರ್ಯದ ಬಗ್ಗೆಯೂ ಗಮನ ಹರಿಸಬೇಕು. ಕೇವಲ ಕೋವಿಡ್‌ ಕೇರ್‌ ಸೆಂಟರ್‌ ಮಾಡಿ ಸವಲತ್ತು ಇಲ್ಲದಿದ್ದರೂ ಉದ್ದೇಶ ಸಾಕಾರವಾಗದು. ಕೊರೊನಾ ಸೋಂಕಿತರು ಮೊದಲಿಗೆ ಆರೈಕೆ ಕೇಂದ್ರದಲ್ಲಿ ದಾಖಲಾದ ಅನಂತರವಷ್ಟೇ ಆಸ್ಪತ್ರೆಯಲ್ಲಿ ಹಾಸಿಗೆ ಅಥವಾ ಇತರ ಚಿಕಿತ್ಸೆ ಬೇಕಾ ಬೇಡವಾ ಎಂಬ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರಕಾರ ಹೇಳಿರುವುದು ಒಂದು ರೀತಿಯಲ್ಲಿ ಅಗತ್ಯ ಇಲ್ಲದವರೂ ಹಾಸಿಗೆ ಪಡೆದು ತುರ್ತು ಇರುವವರು ಹಾಸಿಗೆ ಸಿಗದೆ ಸಾವನ್ನಪ್ಪುವ ಪ್ರಕರಣ ತಡೆಗಟ್ಟಲು ಸಹಕಾರಿಯಾಗಿದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.