ಕೋವಿಡ್ ಎದುರಿಸಲು ಬಂಟ್ವಾಳ, ಮಂಗಳೂರು ಉತ್ತರ: ಸರ್ವ ಸನ್ನದ್ಧ
Team Udayavani, May 18, 2021, 6:45 AM IST
ಬಂಟ್ವಾಳ ಮತ್ತು ಮಂಗಳೂರು ಉತ್ತರ ಕ್ಷೇತ್ರಗಳು ಕೊರೊನಾ ಎದುರಿಸಲು ಸರ್ವಸನ್ನದ್ಧವಾಗಿವೆ. ಆರೋಗ್ಯ ಸೇವೆಗಳ ಅಭಾವ ತಲೆದೋರದಂತೆ ಸಾಕಷ್ಟು ಮುಂದಾಲೋಚನೆಯೊಂದಿಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ಆತಂಕ ಬೇಡ ಎಂದು ಉಭಯ ಕ್ಷೇತ್ರಗಳ ಶಾಸಕರು ಆತ್ಮವಿಶ್ವಾಸದಿಂದ ಜನರಿಗೆ ಧೈರ್ಯ ತುಂಬಿದ್ದಾರೆ.
ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಶಾಸಕರು, ಬಂಟ್ವಾಳ ವಿಧಾನಸಭಾ ಕ್ಷೇತ್ರ :
1. ನಿಮ್ಮ ಕ್ಷೇತ್ರದಲ್ಲಿ ಕೋವಿಡ್ 19ರ ವಿಷಮ ಪರಿಸ್ಥಿತಿ ನಿಭಾವಣೆಗೆ ಪೂರ್ವಸಿದ್ಧತೆ ಹೇಗೆ ನಡೆದಿದೆ?
ಕೋವಿಡ್-19ನ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಈಗಾಗಲೇ ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನನ್ನ ಕಚೇರಿಯಲ್ಲಿ ಸಹಾಯವಾಣಿ (ವಾರ್ ರೂಮ್) ಕಾರ್ಯ ನಿರ್ವಹಿಸುತ್ತಿದ್ದು, ಆಸ್ಪತ್ರೆಯ ದಾಖಲಾತಿ, ಆಕ್ಸಿಜನ್, ವೆಂಟಿಲೇಟರ್, ಅಂತ್ಯಸಂಸ್ಕಾರ, ಔಷಧ ವಿತರಣೆ, ಆಹಾರ ವಿತರಣೆ, ವ್ಯಾಕ್ಸಿನೇಶನ್ ಹೀಗೆ 8 ವಿಭಾಗಗಳನ್ನು 31 ಮಂದಿಯ ತಂಡ ನಿರ್ವಹಿಸುತ್ತಿದೆ. ಪ್ರತಿಯೊಬ್ಬರೂ ತಮಗೆ ಬಂದ ಕರೆಯ ಆಧಾರದಲ್ಲಿ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.
2. ಜಿಲ್ಲಾಡಳಿತ, ತಾಲೂಕು ಆಡಳಿತ ಹೊರತುಪಡಿಸಿ ದಂತೆ ಸ್ಥಳೀಯರನ್ನು ಒಗ್ಗೂಡಿಸಿ ಪರ್ಯಾಯ ವ್ಯವಸ್ಥೆ (ಪ್ಲ್ರಾನ್ ಬಿ) ರೂಪಿಸಿದ್ದೀರಾ?
ಪ್ರತೀ ಗ್ರಾಮ ಮಟ್ಟದಲ್ಲಿ ಅಲ್ಲಿನ ಪಂಚಾಯತ್ ಸದಸ್ಯರ ಜತೆ ಗ್ರಾಮದ ಪ್ರಮುಖರು ಸೇರಿಕೊಂಡು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಅವರು ಏನಾದರೂ ಸಮಸ್ಯೆಗಳಿದ್ದರೆ ಅದನ್ನು ನಮ್ಮ ಗಮನಕ್ಕೆ ತಂದಾಗ ತತ್‌ಕ್ಷಣ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತದೆ.
3. ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿ ಸುವ ಕೆಲಸವನ್ನು ಹೇಗೆ ಮಾಡುತ್ತಿದ್ದೀರಿ? ಖುದ್ದಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದ್ದೀರಾ?
ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಜನರ ಮನವೊಲಿಸಲಾಗುತ್ತಿದೆ. ಅನಿವಾರ್ಯ ಕಾರ್ಯಕ್ರಮಗಳನ್ನು ಮನೆಗಷ್ಟೇ ಸೀಮಿತಗೊಳಿಸುವಂತೆ ಮನವಿ ಮಾಡಲಾಗುತ್ತಿದೆ. ಹೊರ ರಾಜ್ಯ, ಜಿಲ್ಲೆಗಳಿಂದ ಬಂದವರ ಕುರಿತು ನಿಗಾ ಇಟ್ಟು ಅವರನ್ನು ಸ್ವಲ್ಪ ದಿನಗಳ ಕಾಲ ಬೇರೆಲ್ಲೂ ತಿರುಗಾಡದಂತೆ ಮನವರಿಕೆ ಮಾಡಲಾಗುತ್ತಿದೆ.
4. ಪ್ರತಿ ಜಿಲ್ಲೆಯಲ್ಲೂ ಸಾಮಾನ್ಯವಾಗಿ ಕೇಳಿ ಬರು ತ್ತಿರುವ ಸಮಸ್ಯೆ ಆಕ್ಸಿಜನ್ ಕೊರತೆ, ಹಾಸಿಗೆಗಳ ಕೊರತೆ- ನಿಮ್ಮಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ?
ತಾಲೂಕು ಮಟ್ಟದಲ್ಲಿ ತಾಲೂಕು ಆಡಳಿತ ಮತ್ತು ವಿವಿಧ ಆಸ್ಪತ್ರೆಗಳ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಹೆಚ್ಚುವರಿ ಆಕ್ಸಿಜನ್ ಬೆಡ್, ಇತರ ಬೆಡ್ ವ್ಯವಸ್ಥೆ ಮಾಡಲಾಗಿದೆ. ತಾಲೂಕಿನ 10 ಕಡೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 238 ಬೆಡ್ ವ್ಯವಸ್ಥೆ ಮಾಡಲಾಗಿದೆ.
5. ಲಾಕ್‌ಡೌನ್ ಹಿನ್ನೆಲೆಯಲ್ಲಿ ನಿಮ್ಮ ಕ್ಷೇತ್ರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡ ಕುಟುಂಬ ಗಳು/ಕೂಲಿ ಕಾರ್ಮಿಕರ ನೆರವಿಗೆ ಏನು ಮಾಡುತ್ತಿದ್ದೀರಿ?
ಕೋವಿಡ್-19 ಸೋಂಕಿಗೆ ತುತ್ತಾಗಿ ಮನೆಯಲ್ಲೇ ಇರುವ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಔಷಧ ವಿತರಿಸಲಾಗುತ್ತಿದೆ. ಬಡ-ಮಧ್ಯಮ ವರ್ಗ ಮತ್ತು ಬೀಡಿ ಕಾರ್ಮಿಕರ ಸಮಸ್ಯೆ ನನ್ನ ಗಮನಕ್ಕೆ ಬಂದಾಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರ ಜತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಪರಿಹರಿಸಲಾಗಿದೆ.
6. ಕ್ಷೇತ್ರದ ಯುವ/ಸಮುದಾಯ ಸಂಘಟನೆ ಗಳನ್ನು ಕಠಿನ ಪರಿಸ್ಥಿತಿಗೆ ಸಜ್ಜುಗೊಳಿಸಿದ್ದೀರಾ?
ಶಾಸಕರ ಸಹಾಯವಾಣಿ, ಸೇವಾ ಭಾರತಿಯ ಮೂಲಕ ಪ್ರತೀ ಗ್ರಾಮ ಮಟ್ಟದಲ್ಲಿ ಸಂಪರ್ಕ ಹೊಂದಿದ್ದು, ಯಾವುದೇ ಕಠಿನ ಪರಿಸ್ಥಿತಿಯನ್ನು ಎದುರಿಸಲು ತಂಡ ಸಜ್ಜಾಗಿದೆ.
7. ಜನರು ಕೊರೊನಾ ಸಂಕಷ್ಟ ಸಂಬಂಧ ಯಾವು ದೇ ಕ್ಷಣದಲ್ಲಿ ನಿಮ್ಮನ್ನು ಸಂಪರ್ಕಿಸ ಬಹುದೇ?
ನನ್ನ ಸಂಪರ್ಕ ಸಂಖ್ಯೆ: 9845083470
**
ಡಾ| ವೈ.ಭರತ್ ಶೆಟ್ಟಿ, ಶಾಸಕರು, ಮಂಗಳೂರು ಉತ್ತರ ವಿ.ಸಭಾ ಕ್ಷೇತ್ರ :
1. ನಿಮ್ಮ ಕ್ಷೇತ್ರದಲ್ಲಿ ಕೋವಿಡ್ 19ರ ವಿಷಮ ಪರಿಸ್ಥಿತಿ ನಿಭಾವಣೆಗೆ ಪೂರ್ವಸಿದ್ಧತೆ ಹೇಗೆ ನಡೆದಿದೆ?
ಮಂಗಳೂರು ಪಾಲಿಕೆ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಕಾರ್ಪೋ ರೆಟರ್ ಅಧ್ಯಕ್ಷತೆಯಲ್ಲಿ ಹಾಗೂ 13 ಪಂಚಾಯತ್ ವ್ಯಾಪ್ತಿಯಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ಪೋರ್ಸ್ ರಚಿಸಲಾಗಿದೆ. ಪಾಸಿಟಿವ್ ಬಂದ ಮನೆಯವರನ್ನು ಕ್ವಾರಂಟೈನ್ ಮಾಡುವಲ್ಲಿ ಈ ತಂಡವು ಕ್ರಮ ವಹಿಸುತ್ತದೆ. ಕಾವೂರು ಬಿಜೆಪಿ ಕಚೇರಿಯಲ್ಲಿ ವಾರ್ ರೂಂ ಆಗಿ ಸ್ಪಂದನ ಕೇಂದ್ರವನ್ನು ತೆರೆಯಲಾಗಿದೆ. ಎಲ್ಲ ರೀತಿಯ ಸಮಸ್ಯೆಗೆ ಸ್ಪಂದಿಸಲು 24 ಮಂದಿಯ ತಂಡ ಸಿದ್ಧವಿದೆ.
2. ಜಿಲ್ಲಾಡಳಿತ, ತಾಲೂಕು ಆಡಳಿತ ಹೊರತುಪಡಿಸಿ ದಂತೆ ಸ್ಥಳೀಯರನ್ನು ಒಗ್ಗೂಡಿಸಿ ಪರ್ಯಾಯ ವ್ಯವಸ್ಥೆ (ಪ್ಲ್ರಾನ್ ಬಿ) ರೂಪಿಸಿದ್ದೀರಾ?
ಆ್ಯಂಬುಲೆನ್ಸ್ ಸೇವೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಸ್ಥಳೀ ಯರು ಸಹಕಾರ ನೀಡುತ್ತಿದ್ದಾರೆ. ಸದ್ಯಕ್ಕೆ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಟಾಸ್ಕ್ಪೋರ್ಸ್, ಸ್ಪಂದನ ಕೇಂದ್ರದ ಮೂಲಕ ಎಲ್ಲ ವ್ಯವಸ್ಥೆಯನ್ನು ಜೋಡಿಸಲಾಗುತ್ತಿದೆ.
3. ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿ ಸುವ ಕೆಲಸವನ್ನು ಹೇಗೆ ಮಾಡುತ್ತಿದ್ದೀರಿ? ಖುದ್ದಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದ್ದೀರಾ?
ಪಾಲಿಕೆ ವ್ಯಾಪ್ತಿಯ 4, ಗ್ರಾಮಾಂತರದಲ್ಲಿ 4 ಸೇರಿದಂತೆ ಒಟ್ಟು 8 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆಯೇ ಹೆಚ್ಚು ಗಮನ ನೀಡಿ ದ್ದೇನೆ. ಎರಡು ದಿನಗಳಿಗೊಮ್ಮೆ ಒಂದೊಂದು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಸೋಂಕು ತೀವ್ರವಾದ ಅನಂತರ ಆಸ್ಪತ್ರೆಗೆ ದಾಖಲಿಸುವವರ ಸಂಖ್ಯೆ ಅಧಿಕವಿರುವ ಕಾರಣದಿಂದ ಪ್ರತೀ ಆಶಾ ಕಾರ್ಯಕರ್ತರಿಗೆ ಆಕ್ಸಿಮೀಟರ್ ಒದಗಿಸಲಾಗಿದೆ.
4. ಪ್ರತಿ ಜಿಲ್ಲೆಯಲ್ಲೂ ಸಾಮಾನ್ಯವಾಗಿ ಕೇಳಿ ಬರು ತ್ತಿರುವ ಸಮಸ್ಯೆ ಆಕ್ಸಿಜನ್ ಕೊರತೆ, ಹಾಸಿಗೆಗಳ ಕೊರತೆ- ನಿಮ್ಮಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ?
ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಯಾರಿಗೂ ಬೆಡ್, ಆಕ್ಸಿಜನ್ ಸಮಸ್ಯೆ ಆಗಿಲ್ಲ. ವೆನಾÉಕ್‌ನಲ್ಲಿ ಸೂಕ್ತ ಬೆಡ್ ವ್ಯವಸ್ಥೆ ಇದೆ. ಶ್ರೀನಿವಾಸ್, ಎ.ಜೆ. ಆಸ್ಪತ್ರೆ ಸಹಿತ ಇತರ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ ಲಭ್ಯವಿದೆ. ಜತೆಗೆ ಎನ್‌ಐಟಿಕೆಯಲ್ಲಿ 500 ಬೆಡ್‌ಗಳ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್ ತೆರೆಯಲು ಅವಕಾಶವಿದ್ದು, ಸದ್ಯ 200 ಬೆಡ್ ಸಿದ್ಧವಿದೆ. ಎಸ್.ಗಣೇಶ್ ರಾವ್ ಅವರು ನೀರು ಮಾರ್ಗದಲ್ಲಿನ ಕರಾವಳಿ ಮೆಡಿಕಲ್ ಕಾಲೇಜು ಅನ್ನು ಕೇರ್ ಸೆಂಟರ್ ಆಗಿ ಬಳಸಲು ಸಮ್ಮತಿಸಿದ್ದಾರೆ. ಇಲ್ಲಿ ಆಕ್ಸಿಜನ್ ಸ್ಟೋರೇಜ್ ವ್ಯವಸ್ಥೆಯಿದ್ದು, 80 ಐಸಿಯು, 250 ಬೆಡ್ ವ್ಯವಸ್ಥೆ ದೊರೆಯಲಿದೆ. ಅಗತ್ಯವಿದ್ದರೆ ಮುಚ್ಚಾರು ಮೊರಾರ್ಜಿ ದೇಸಾಯಿ ಶಾಲೆಯನ್ನು ಕೇರ್ ಸೆಂಟರ್ ಮಾಡಲಾಗುವುದು.
5. ಲಾಕ್‌ಡೌನ್ ಹಿನ್ನೆಲೆಯಲ್ಲಿ ನಿಮ್ಮ ಕ್ಷೇತ್ರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡ ಕುಟುಂಬ ಗಳು/ಕೂಲಿ ಕಾರ್ಮಿಕರ ನೆರವಿಗೆ ಏನು ಮಾಡುತ್ತಿದ್ದೀರಿ?
ಸದ್ಯ ಸ್ಪಂದನ ಕೇಂದ್ರದ ಮೂಲಕ ಅಗತ್ಯವಿರುವವರಿಗೆ ನೆರವು ನೀಡಲಾಗುತ್ತಿದೆ.
6. ಕ್ಷೇತ್ರದ ಯುವ/ಸಮುದಾಯ ಸಂಘಟನೆ ಗಳನ್ನು ಕಠಿನ ಪರಿಸ್ಥಿತಿಗೆ ಸಜ್ಜುಗೊಳಿಸಿದ್ದೀರಾ?
ಎಲ್ಲ ಸಂಘಟನೆಗಳು ನೆರವು ನೀಡಲು ಮುಂದೆ ಬಂದಿವೆ. ಪಕ್ಷದ ಪ್ರತೀ ಬೂತ್ ಮಟ್ಟದಲ್ಲಿರುವ 10 ಜನರ ತಂಡದ ಮೂಲಕ ಅಂಗಡಿಯಲ್ಲಿ ಸಾಮಾಜಿಕ ಅಂತರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಲಸಿಕೆ ಬಂದ ಅನಂತರ ಅದರ ವಿತರಣೆಗೆ ಸಂಘಟನೆಗಳನ್ನು ಬಳಸಲು ಚಿಂತನೆ ನಡೆಸಲಾಗಿದೆ.
7. ಜನರು ಕೊರೊನಾ ಸಂಕಷ್ಟ ಸಂಬಂಧ ಯಾವು ದೇ ಕ್ಷಣದಲ್ಲಿ ನಿಮ್ಮನ್ನು ಸಂಪರ್ಕಿಸ ಬಹುದೇ?
ನನ್ನ ಸಂಪರ್ಕ ಸಂಖ್ಯೆ 9845488411.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.