ದಾವಣಗೆರೆ ಜಿಲ್ಲೆಯಲ್ಲಿ 309 ಮಂದಿ ಗುಣಮುಖ : 174 ಹೊಸ ಪ್ರಕರಣ ಪತ್ತೆ


Team Udayavani, Jun 18, 2021, 8:43 PM IST

ದಾವಣಗೆರೆ ಜಿಲ್ಲೆಯಲ್ಲಿ 309 ಮಂದಿ ಗುಣಮುಖ : 174 ಹೊಸ ಪ್ರಕರಣ ಪತ್ತೆ

ದಾವಣಗೆರೆ: ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ 309 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತರಗಿಂತಲೂ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿರುವುದು ವಿಶೇಷ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 174 , ಹರಿಹರದಲ್ಲಿ 28, ಜಗಳೂರಿನಲ್ಲಿ 17, ಚನ್ನಗಿರಿಯಲ್ಲಿ 42, ಹೊನ್ನಾಳಿಯಲ್ಲಿ 36 ಹಾಗೂ ಹೊರ ಜಿಲ್ಲೆಯ 12 ಜನರು ಒಳಗೊಂಡಂತೆ 309 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ 174 ಜನರಲ್ಲಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 93 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 13, ಜಗಳೂರಿನಲ್ಲಿ 9 , ಚನ್ನಗಿರಿಯಲ್ಲಿ 31, ಹೊನ್ನಾಳಿಯಲ್ಲಿ 20 ಹಾಗೂ ಹೊರ ಜಿಲ್ಲೆಯ 8 ಜನರು ಒಳಗೊಂಡಂತೆ 174 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 25517, ಹರಿಹರದಲ್ಲಿ 6641 , ಜಗಳೂರಿನಲ್ಲಿ 2591, ಚನ್ನಗಿರಿಯಲ್ಲಿ 5962, ಹೊನ್ನಾಳಿಯಲ್ಲಿ 6067, ಹೊರ ಜಿಲ್ಲೆಯ 1424 ಜನರು ಸೇರಿದಂತೆ ಈವರೆಗೆ ಒಟ್ಟು 48,202 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 23937, ಹರಿಹರದಲ್ಲಿ 6318, ಜಗಳೂರಿನಲ್ಲಿ 2529, ಚನ್ನಗಿರಿಯಲ್ಲಿ 5742, ಹೊನ್ನಾಳಿಯಲ್ಲಿ 5495, ಹೊರ ಜಿಲ್ಲೆಯ 1121 ಜನರು ಸೇರಿದಂತೆ 45,142 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2584 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ :ದ.ಕ. ಜಿಲ್ಲೆಯಲ್ಲಿ 1006 ಮಂದಿಗೆ ಕೋವಿಡ್ ದೃಢ; ದಾಖಲೆಯ 15 ಮಂದಿ ಸಾವು

ಜಿಲ್ಲೆಯಲ್ಲಿ ಕೊರೊನಾದಿಂದ ಹತ್ತು ಜನರು ಮೃತಪಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಅಣಬೇರು ಗ್ರಾಮದ 56 ವರ್ಷದ ವೃದ್ಧೆ, ಕೊಳೇನಹಳ್ಳಿ ಗ್ರಾಮದ 38 ವರ್ಷದ ವ್ಯಕ್ತಿ, ದೊಡ್ಡಬಾತಿಯ 62 ವರ್ಷದ ವೃದ್ಧ, ನೇರ್‍ಲಿಗೆ ಗ್ರಾಮದ 47 ವರ್ಷದ ಮಹಿಳೆ, ಆಲೂರು ಗ್ರಾಮದ 60 ವರ್ಷದ ವೃದ್ಧ, ಗೋಪನಾಳ್ ಗ್ರಾಮದ 30 ವರ್ಷದ ಮಹಿಳೆ, ಆನಗೋಡು ಗ್ರಾಮದ 63 ವರ್ಷದ ವೃದ್ಧೆ, ದಾವಣಗೆರೆಯ ಸರಸ್ವತಿ ಬಡಾವಣೆಯ 81 ವರ್ಷದ ವೃದ್ಧೆ, ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದ 60 ವರ್ಷದ ವೃದ್ಧೆ, ಹೊನ್ನಾಳಿ ತಾಲೂಕಿನ ರಾಂಪುರ ಗ್ರಾಮದ 58 ವರ್ಷದ ವ್ಯಕ್ತಿ ಮೃತಪಟ್ಟವರು. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 476 ಜನರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 99 ಸೋಂಕಿತರು ಸಾಮಾನ್ಯ, 475 ಸೋಂಕಿತರು ಆಕ್ಸಿಜನ್, 18 ಸೋಂಕಿತರು ಎನ್‌ಐವಿ, 48 ಸೋಂಕಿತರು ವೆಂಟಿಲೇಟರ್ 28 ಸೋಂಕಿತರು ವೆಂಟಿಲೇಟರ್ ರಹಿತ, 419 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 530 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಶುಕ್ರವಾರ ಜಿಲ್ಲೆಯಲ್ಲಿ ಯಾವುದೇ ಬ್ಯ್ಲಾಕ್ ಫಂಗಸ್ ಪ್ರಕರಣ ಕಂಡು ಬಂದಿಲ್ಲ. ಈವರೆಗೆ ಜಿಲ್ಲೆಯಲ್ಲಿ 91 ಜನರಲ್ಲಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ 23, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ13, ಬಾಪೂಜಿ ಆಸ್ಪತ್ರೆಯಲ್ಲಿ ಒಬ್ಬರು ಒಳಗೊಂಡಂತೆ 37 ಜನರು ಗುಣಮುಖರಾಗಿದ್ದಾರೆ. ಜಿಲ್ಲಾ ಆyಸ್ಪತ್ರೆಯಲ್ಲಿ 31, ಎಸ್.ಎಸ್. ಹೈಟೆಕ್‌ನಲ್ಲಿ 21, ಬಾಪೂಜಿ ಮತ್ತು ಕಾಲೇಜ್ ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ತಲಾ ಒಬ್ಬರು ಒಳಗೊಂಡಂತೆ 54 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.