ಕಾರ್ಕಳ, ಕಾಪು: ಆಡಳಿತದ ಬೆನ್ನಿಗೆ ನಿಂತ ಸಂಘಸಂಸ್ಥೆಗಳು
Team Udayavani, May 20, 2021, 6:40 AM IST
ಕೊರೊನಾ ಸೋಂಕು ಇದೀಗ ಗ್ರಾಮೀಣ ಪ್ರದೇಶಗಳಲ್ಲಿಯೂ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿತರಿಗೆ ಚಿಕಿತ್ಸೆ ಮತ್ತು ಸೋಂಕಿನ ನಿಯಂತ್ರಣಕ್ಕಾಗಿ ಸ್ಥಳೀಯಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದರೆ ದಾನಿಗಳು ಮತ್ತು ವಿವಿಧ ಸಂಘಸಂಸ್ಥೆಗಳು ಈ ಕಾರ್ಯದಲ್ಲಿ ಕೈಜೋಡಿಸಿವೆ ಎನ್ನುತ್ತಾರೆ ಉಭಯ ಕ್ಷೇತ್ರಗಳ ಶಾಸಕರು.
ವಿ. ಸುನಿಲ್ ಕುಮಾರ್, ಶಾಸಕರು, ಕಾರ್ಕಳ ವಿಧಾನಸಭಾ ಕ್ಷೇತ್ರ :
1. ನಿಮ್ಮ ಕ್ಷೇತ್ರದಲ್ಲಿ ಕೋವಿಡ್ 19ರ ವಿಷಮ ಪರಿಸ್ಥಿತಿ ನಿಭಾವಣೆಗೆ ಪೂರ್ವಸಿದ್ಧತೆ ಹೇಗೆ ನಡೆದಿದೆ?
ಕ್ಷೇತ್ರದಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡ ಕೂಡಲೇ ಸೋಂಕು ತಡೆಗೆ ಪ್ರಯತ್ನಿಸಲಾಗಿದೆ. ಕಾರ್ಕಳ, ಹೆಬ್ರಿ, ನಿಟ್ಟೆ ಆಸ್ಪತ್ರೆಗಳಲ್ಲಿ ಕ್ರಮವಾಗಿ 40, 24, 26 ಆಮ್ಲಜನಕ ಹಾಸಿಗೆಗಳನ್ನು ಸಿದ್ಧಪಡಿಸಿದ್ದೇವೆ.
2. ಜಿಲ್ಲಾಡಳಿತ, ತಾಲೂಕು ಆಡಳಿತ ಹೊರತುಪಡಿಸಿ ದಂತೆ ಸ್ಥಳೀಯರನ್ನು ಒಗ್ಗೂಡಿಸಿ ಪರ್ಯಾಯ ವ್ಯವಸ್ಥೆ (ಪ್ಲ್ರಾನ್ ಬಿ) ರೂಪಿಸಿದ್ದೀರಾ?
ಕಾರ್ಕಳ, ನಿಟ್ಟೆ ಮತ್ತು ಹೆಬ್ರಿ ಸರಕಾರಿ ಆಸ್ಪತ್ರೆಗಳಲ್ಲಿ ಒಟ್ಟು 176 ಕೋವಿಡ್ ಬೆಡ್ ವ್ಯವಸ್ಥೆ ಕಲ್ಪಿಸಲಾಗಿದೆ. ಮಿಯ್ನಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ. ಇಲ್ಲಿ ವೈದ್ಯಾಧಿಕಾರಿ ಮತ್ತು ಶುಶ್ರೂಷಕಿಯರು ದಿನದ 24 ತಾಸು ರೋಗಿಗಳ ಶುಶ್ರೂಷೆ ನಡೆಸುತ್ತಿದ್ದಾರೆ.
3. ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿ ಸುವ ಕೆಲಸವನ್ನು ಹೇಗೆ ಮಾಡುತ್ತಿದ್ದೀರಿ? ಖುದ್ದಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದ್ದೀರಾ?
ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ 60 ಬೆಡ್‌ಗಳಿಗೆ ಸಾಕಾಗುವಷ್ಟು 6 ಸಾವಿರ ಲೀ. ಆಮ್ಲಜನಕ ಘಟಕ ಕಾರ್ಯರೂಪಕ್ಕೆ ಬರುತ್ತಿದೆ. ಜಿ. ಶಂಕರ್ ಮತ್ತು ದಾನಿಗಳ ನೆರವಿನಿಂದ 75 ಲಕ್ಷ ರೂ. ವೆಚ್ಚದಲ್ಲಿ ಆಮ್ಲಜನಕ ಘಟಕ ನಿರ್ಮಾಣವಾಗುತ್ತಿದೆ. ಹೆಬ್ರಿ ಸಮುದಾಯ ಕೇಂದ್ರದಲ್ಲಿ ಮಂಗಳೂರು ಎಂಸಿಎಫ್ ವತಿಯಿಂದ 25 ಲಕ್ಷ ರೂ. ವೆಚ್ಚದಲ್ಲಿ ಆಮ್ಲ ಜನಕ ಘಟಕ ಸಿದ್ಧವಾಗುತ್ತಿದೆ. ವಿವಿಧ ದಾನಿಗಳು ಮತ್ತು ಸಂಘಸಂಸ್ಥೆಗಳು ಆರ್ಥಿಕ ನೆರವು ನೀಡಲು ಮುಂದೆ ಬಂದಿದ್ದಾರೆ.
4. ಪ್ರತಿ ಜಿಲ್ಲೆಯಲ್ಲೂ ಸಾಮಾನ್ಯವಾಗಿ ಕೇಳಿ ಬರುತ್ತಿರುವ ಸಮಸ್ಯೆ ಆಕ್ಸಿಜನ್ ಕೊರತೆ, ಹಾಸಿಗೆಗಳ ಕೊರತೆ- ನಿಮ್ಮಲ್ಲಿ
ಯಾವ ಕ್ರಮ ಕೈಗೊಂಡಿದ್ದೀರಿ?
ತಾಲೂಕು ಸರಕಾರಿ ಆಸ್ಪತ್ರೆಯ ಹೊರಗೆ 6 ಬೆಡ್ ಸೌಕರ್ಯವಿರುವ ವಾರ್ಡ್ ಮಾದರಿಯಲ್ಲಿ “ಯೋಗಕ್ಷೇಮ’ ಕೇಂದ್ರ ಕಾರ್ಯನಿರ್ವ ಹಿಸುತ್ತಿದೆ. ಆರಂಭದಲ್ಲಿ ಜನರ ಯೋಗಕ್ಷೇಮ ವಿಚಾರಿಸಿ ಬಳಿಕ ಆವಶ್ಯಕ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಪಕ್ಷದ ವತಿಯಿಂದ ಮತ್ತು ವಿವಿಧ ಸಂಘ ಸಂಸ್ಥೆಗಳ ನೆರವಿನಿಂದ ಆಸ್ಪತ್ರೆಯ ಬಳಿ ಮಾಹಿತಿ ಕೇಂದ್ರ ತೆರೆಯಲಾಗಿದ್ದು ದಿನವಿಡೀ ಸೇವೆ ನೀಡಲಾಗುತ್ತಿದೆ.
5. ಲಾಕ್‌ಡೌನ್ ಹಿನ್ನೆಲೆಯಲ್ಲಿ ನಿಮ್ಮ ಕ್ಷೇತ್ರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡ ಕುಟುಂಬಗಳು/ಕೂಲಿ ಕಾರ್ಮಿಕರ ನೆರವಿಗೆ ಏನು ಮಾಡುತ್ತಿದ್ದೀರಿ?
ಸಾರ್ವಜನಿಕರಿಗೆ ಯಾವುದೇ ವೈದ್ಯಕೀಯ ಸೇವೆಗಳ ಕೊರತೆಯಾಗದಂತೆ ವೈದ್ಯರು, ನರ್ಸ್ ಮತ್ತು ಇತರ ಸಿಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಗ್ರಾ.ಪಂ.ಗಳಲ್ಲಿ ಕೂಡ ಟಾಸ್ಕ್ ಫೋರ್ಸ್ ಸಮಿತಿಗಳು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಿವೆ. ಸಮಿತಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಬಡವರ ಮನೆಗಳಿಗೆ ಅಗತ್ಯ ದಿನಸಿ, ಔಷಧ ಇತ್ಯಾದಿಗಳನ್ನು ಪೂರೈಸುತ್ತಿವೆ.
6. ಕ್ಷೇತ್ರದ ಯುವ/ಸಮುದಾಯ ಸಂಘಟನೆ ಗಳನ್ನು ಕಠಿನ ಪರಿಸ್ಥಿತಿಗೆ ಸಜ್ಜುಗೊಳಿಸಿದ್ದೀರಾ?
ಕ್ಷೇತ್ರದ ವಿವಿಧ ಸಂಘಟನೆಗಳು, ಪಕ್ಷದ ವಿವಿಧ ಮೋರ್ಚಾಗಳ ವತಿಯಿಂದ ರಕ್ತದಾನ ಶಿಬಿರಗಳು ನಡೆದಿವೆ. ಸೋಂಕಿಗೆ ಒಳಗಾಗಿ ಮೃತಪಟ್ಟವರ ಶವಸಂಸ್ಕಾರವನ್ನು ಕೆಲವೆಡೆ ನಡೆಸಲಾಗಿದೆ. ಉಚಿತ ಆ್ಯಂಬುಲೆನ್ಸ್ ಸೇವೆ ಕೂಡ ಒದಗಿಸಲಾಗಿದೆ. ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಸೇವೆ ಸಹಿತ ಜೀವನಾವಶ್ಯಕ ವಸ್ತುಗಳ ಖರೀದಿ ಸಂದರ್ಭ ಜನರಿಗೆ ತೊಂದರೆಯಾಗದ ರೀತಿ ಕಾನೂನು ಸುವ್ಯವಸ್ಥೆ ಕಾಪಾಡಿ ಕೊಳ್ಳುವಂತೆ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ.
7. ಜನರು ಕೊರೊನಾ ಸಂಕಷ್ಟ ಸಂಬಂಧ ಯಾವು ದೇ ಕ್ಷಣದಲ್ಲಿ ನಿಮ್ಮನ್ನು ಸಂಪರ್ಕಿಸ ಬಹುದೇ?
ಸಹಾಯವಾಣಿ ಸಂಖ್ಯೆ: ಕಾರ್ಕಳ ಆಸ್ಪತ್ರೆ-9880012313, ನಿಟ್ಟೆ ಆಸ್ಪತ್ರೆ-9901723990, ಜಿಲ್ಲಾಸ್ಪತ್ರೆ-9845124879
**
ಲಾಲಾಜಿ ಮೆಂಡನ್ ಶಾಸಕರು, ಕಾಪು ವಿಧಾನಸಭಾ ಕ್ಷೇತ್ರ :
1. ನಿಮ್ಮ ಕ್ಷೇತ್ರದಲ್ಲಿ ಕೋವಿಡ್ 19ರ ವಿಷಮ ಪರಿಸ್ಥಿತಿ ನಿಭಾವಣೆಗೆ ಪೂರ್ವಸಿದ್ಧತೆ ಹೇಗೆ ನಡೆದಿದೆ?
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕು, ಕಾಪು ಪುರಸಭೆ ಮತ್ತು 26 ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮೀಣ ಕಾರ್ಯಪಡೆ ಮತ್ತು ಟಾಸ್ಕ್ ಫೋರ್ಸ್ ತಂಡಗಳನ್ನು ರಚಿಸಲಾಗಿದೆ. ಗ್ರಾಮೀಣ ಕಾರ್ಯಪಡೆ ಮತ್ತು ಕಾರ್ಯಕರ್ತರಿಂದ ಕೊರೊನಾ ಸೋಂಕಿತರ ಮಾಹಿತಿ ಸಂಗ್ರಹಿಸಿ, ಆಯಾಯ ಪ್ರದೇಶಗಳಲ್ಲಿ ಇರುವ ಸೋಂಕಿತರಲ್ಲಿ ಹೋಂ ಕ್ವಾರಂಟೈನ್ ಮತ್ತು ಹೋಂ ಐಸೋಲೇಶನ್‌ನಲ್ಲಿ ಇರಬೇಕಾದವರು ಪಾಲಿಸಬೇಕಾದ ನಿಯಮಗಳ ಬಗ್ಗೆ ಆರೋಗ್ಯ ಕಾರ್ಯ ಕರ್ತರು, ಆಶಾ ಕಾರ್ಯಕರ್ತರ ಮೂಲಕ ಜಾಗೃತಿ ನೀಡಲಾಗುತ್ತಿದೆ.
2. ಜಿಲ್ಲಾಡಳಿತ, ತಾಲೂಕು ಆಡಳಿತ ಹೊರತುಪಡಿಸಿ ದಂತೆ ಸ್ಥಳೀಯರನ್ನು ಒಗ್ಗೂಡಿಸಿ ಪರ್ಯಾಯ ವ್ಯವಸ್ಥೆ (ಪ್ಲ್ರಾನ್ ಬಿ) ರೂಪಿಸಿದ್ದೀರಾ?
ಕೊರೊನಾ ಸೋಂಕಿತರ ಪೈಕಿ ತುರ್ತು ಅಗತ್ಯ ಇರುವವರನ್ನು ಉಡುಪಿ ಜಿಲ್ಲಾಸ್ಪತ್ರೆ ಸಹಿತವಾಗಿ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಲು ವ್ಯವಸ್ಥೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 20 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸಿದ್ಧತೆ ನಡೆಸಿದ್ದೇವೆ. ಕ್ಷೇತ್ರದಲ್ಲಿರುವ ಮೂರು ಹಾಸ್ಟೆಲ್‌ಗಳಲ್ಲಿ 100 ಬೆಡ್‌ಗಳ ಕ್ವಾರಂಟೈನ್ ಸೆಂಟರ್ ಪ್ರಾರಂಭಿಸಲು ಯೋಜನೆ ಹಾಕಿಕೊಳ್ಳಲಾಗುವುದು.
3. ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿ ಸುವ ಕೆಲಸವನ್ನು ಹೇಗೆ ಮಾಡುತ್ತಿದ್ದೀರಿ? ಖುದ್ದಾಗಿ ವಿಶೇಷ ಕ್ರಮಗಳನ್ನು ಕೈಗೊಂಡಿದ್ದೀರಾ?
ಸೋಂಕು ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಸರಕಾರ ಮತ್ತು ಜಿಲ್ಲಾಡಳಿತದ ನಿರ್ದೇಶನಗಳ ಪಾಲನೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜೀವನಾವಶ್ಯಕ ವಸ್ತುಗಳ ಖರೀದಿಗೆ ಬರುವವರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಗ್ರಾಮ ಮಟ್ಟದಲ್ಲೇ ಎಚ್ಚರಿಸಲಾಗುತ್ತಿದೆ. ಬಲಪ್ರಯೋಗದ ಬದಲಾಗಿ ಮನವೊಲಿಸಿ ಜನರನ್ನು ಜಾಗೃತರನ್ನಾಗಿಸುವಂತೆ ಪೊಲೀಸರಿಗೂ ಸೂಚನೆ ನೀಡಲಾಗಿದೆ.
4. ಪ್ರತಿ ಜಿಲ್ಲೆಯಲ್ಲೂ ಸಾಮಾನ್ಯವಾಗಿ ಕೇಳಿ ಬರುತ್ತಿರುವ ಸಮಸ್ಯೆ ಆಕ್ಸಿಜನ್ ಕೊರತೆ, ಹಾಸಿಗೆಗಳ ಕೊರತೆ- ನಿಮ್ಮಲ್ಲಿ
ಯಾವ ಕ್ರಮ ಕೈಗೊಂಡಿದ್ದೀರಿ?
ಉಡುಪಿ ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್‌ಗಳ ಕೊರತೆಯಿಲ್ಲ. 20 ಬೆಡ್ ವ್ಯವಸ್ಥೆಯ ಶಿರ್ವ ಸಮುದಾಯ ಆರೋಗ್ಯದಲ್ಲಿ ಆಕ್ಸಿಜನ್ ಸೆಂಟರ್ ಇದೆ. ಉಡುಪಿ ಜಿಲ್ಲೆಗೆ ಬೇಕಾಗುವಷ್ಟು ಆಕ್ಸಿಜನ್ ಪೂರೈಸುವ ಆಕ್ಸಿಜನ್ ಫ್ಲಾಂಟ್ ಬೆಳಪುವಿನಲ್ಲೇ ಇದ್ದು, ಆಕ್ಸಿಜನ್‌ಗಾಗಿ ಪರದಾಡವಂಥ ಪರಿಸ್ಥಿತಿ ಎದುರಾಗದು.
5. ಲಾಕ್‌ಡೌನ್ ಹಿನ್ನೆಲೆಯಲ್ಲಿ ನಿಮ್ಮ ಕ್ಷೇತ್ರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡ ಕುಟುಂಬಗಳು/ಕೂಲಿ ಕಾರ್ಮಿಕರ ನೆರವಿಗೆ ಏನು ಮಾಡುತ್ತಿದ್ದೀರಿ?
ವಿವಿಧೆಡೆ ದಾನಿಗಳು, ಪಕ್ಷದ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಮೂಲಕ ವಾಗಿ ಸಿದ್ಧ ಪಡಿಸಿದ ಆಹಾರ ಕಿಟ್‌ಗಳನ್ನು ನೀಡಲಾಗುತ್ತಿದೆ. ಔಷಧ ವಿತರಣೆ, ಆ್ಯಂಬುಲೆನ್ಸ್ ಸಹಿತ ಎಲ್ಲ ರೀತಿಯ ನೆರವು ಒದಗಿಸಲಾಗುತ್ತಿದೆ.
6. ಕ್ಷೇತ್ರದ ಯುವ/ಸಮುದಾಯ ಸಂಘಟನೆ ಗಳನ್ನು ಕಠಿನ ಪರಿಸ್ಥಿತಿಗೆ ಸಜ್ಜುಗೊಳಿಸಿದ್ದೀರಾ?
ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಸಲಾಗಿದೆ. ಸೇವಾ ಭಾರತಿಯ ಸಹಕಾರದೊಂದಿಗೆ 100 ಆಕ್ಸಿ ಮೀಟರ್ ವಿತರಿಸಲಾಗಿದೆ. ಮೂಳೂರು ಪರಿಸರದಲ್ಲಿ ಸಂಘಟನೆಯೊಂದು ಆ್ಯಂಬುಲೆನ್ಸ್ ಸೇವೆ ಆರಂಭಿಸಿದೆ. ಬೆಳ್ಳೆಯಲ್ಲಿ ದಾನಿಗಳ ನೆರವಿನೊಂದಿಗೆ ಆಂಬ್ಯುಲೆನ್ಸ್ ವ್ಯವಸ್ಥೆ, ಪಡುಬಿದ್ರಿಯಲ್ಲಿ ದಾನಿಗಳ ನೆರವಿನೊಂದಿಗೆ 20 ಲಕ್ಷ ರೂ. ವೆಚ್ಚದಲ್ಲಿ ಶೀಥಲೀಕೃತ ಶವಾಗಾರ ನಿರ್ಮಾಣ, ಶಾಸಕರ ನಿಧಿ ಬಳಸಿಕೊಂಡು ಆಶಾ ಕಾರ್ಯಕರ್ತರಿಗೆ ಆಕ್ಸಿಮೀಟರ್ ಹಾಗೂ ಉಪ ಆರೋಗ್ಯ ಕೇಂದ್ರಗಳಿಗೆ ತೆರಳುವ ಸಿಬಂದಿ, ಆಶಾ ಕಾರ್ಯಕರ್ತರ ಉಪ ಯೋಗಕ್ಕಾಗಿ 5 ಸೆಂಟರ್‌ಗಳಿಗೆ ಮಿನಿ ಆ್ಯಂಬುಲೆನ್ಸ್ ಒದಗಿಸಲು ಯೋಜನೆ.
7. ಜನರು ಕೊರೊನಾ ಸಂಕಷ್ಟ ಸಂಬಂಧ ಯಾವು ದೇ ಕ್ಷಣದಲ್ಲಿ ನಿಮ್ಮನ್ನು ಸಂಪರ್ಕಿಸ ಬಹುದೇ?
ಸಂಪರ್ಕ ಸಂಖ್ಯೆಗಳು: 9845667301, 9632434460, 9480546301, 9844708181, 0820 2591001 (ಕಚೇರಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.