ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಕೋವಿಡ್ ಪಾಸಿಟಿವ್
Team Udayavani, Aug 13, 2020, 7:28 PM IST
ಉಡುಪಿ: ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರಿಗೆ ಗುರುವಾರ ಕೋವಿಡ್ ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಶಾಸಕರ ಆಪ್ತ ಕಾರ್ಯದರ್ಶಿಗೆ ಕಳೆದ ವಾರ ಸೋಂಕು ಧೃಡಪಟ್ಟಿದ್ದು, ಆ ಬಳಿಕ ಶಾಸಕರು ಸ್ವಯಂ ಕ್ವಾರಂಟೈನ್ ನಿಯಮಾವಳಿಗೊಳಗಾಗಿದ್ದರು. ವಾರದ ಬಳಿಕ ಪರೀಕ್ಷೆಗೊಳಗಾದ ಶಾಸಕರಲ್ಲಿ ಸೋಂಕು ಧೃಡಪಟ್ಟಿದ್ದರೂ, ಅವರಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ಕೂಡಾ ಸರಕಾರದ ನಿಯಮಾವಳಿಯಂತೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಶೂಶ್ರುಷೆ ಪಡೆಯಲು ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ವತಃ ಶಾಸಕರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿದ್ದು, ಆಪ್ತ ಕಾರ್ಯದರ್ಶಿಯೋರ್ವರಿಗೆ ಕೋವಿಡ್ 19 ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕಳೆದ 7 ದಿನಗಳಿಂದ ಹೋಂ ಕಾರಂಟೈನ್‌ನಲ್ಲಿದ್ದು ಮುಂಜಾಗೃತಾ ಕ್ರಮವಾಗಿ ಸ್ವಯಂ ಪರೀಕ್ಷೆಗೊಳಗಾದಾಗ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕು ಪತ್ತೆ ಕಾರಣದಿಂದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಶೂಶ್ರುಷೆ ಪಡೆಯುತ್ತಿದ್ದೇನೆ. ಈ ಬಗ್ಗೆ ಕ್ಷೇತ್ರದ ಜನತೆ, ಮತದಾರರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಯಾವುದೇ ಕಾರಣಕ್ಕೂ ಗೊಂದಲಕ್ಕೊಳಗಾಗುವ ಅವಶ್ಯಕತೆಯಿಲ್ಲ. ಮುಂದಿನ ಸೋಮವಾರದಿಂದ ಶಾಸಕರ ಕಚೇರಿ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸುವಂತೆ ಶಾಸಕ ಲಾಲಾಜಿ ಆರ್. ಮೆಂಡನ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.