ಕೋವಿಡ್‌-19 : ಇರಾಕಿನ ಇವರ ಸಮಸ್ಯೆಯೇ ಬೇರೆ


Team Udayavani, Apr 15, 2020, 4:45 PM IST

ಕೋವಿಡ್‌-19 : ಇರಾಕಿನ ಇವರ ಸಮಸ್ಯೆಯೇ ಬೇರೆ

ಇರಾಕ್‌: ಕೋವಿಡ್‌-19 ವಿರುದ್ಧ ಹೋರಾಟದಲ್ಲಿ ವಿಫ‌ಲಗೊಳ್ಳುತ್ತಿದ್ದು, ಸ್ಥಳೀಯ ಜನತೆಯ ಅಸಹಕಾರವೇ ಸರಕಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿದೆ. ಇದೇ ಸಮಸ್ಯೆ ಅಫ್ಘಾನಿಸ್ತಾನಕ್ಕೂ ಹರಡುತ್ತಿರುವುದು ಭಯಕ್ಕೆ ಕಾರಣವಾಗಿದೆ.

ಇರಾಕ್‌ನ ಜನರು ಸಂಪ್ರದಾಯವೇ ಮುಖ್ಯವೆಂದು ಪ್ರತಿಪಾದಿಸುತ್ತಿದ್ದು, ಕೋವಿಡ್‌ 19ಗೆ ಸಂಬಂಧಿಸಿದ ನಿರ್ಬಂಧನೆಗಳನ್ನು ನಿರಾಕರಿಸುತ್ತಿದ್ದಾರೆ. ಇದು ಸೋಂಕಿನ ಪ್ರಕರಣ ಹೆಚ್ಚಲು ಕಾರಣವಾಗುತ್ತಿದೆ. ಅಲ್ಲಿನ ಜನರು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. 40 ರೋಗಿಗಳು ಸಂಪರ್ಕ ಸಿಗದೇ ತಪ್ಪಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಾಂಕ್ರಾಮಿಕ ರೋಗದ ವ್ಯಾಪ್ತಿಯ ನಿಖರವಾದ ಮಾಹಿತಿಯನ್ನು ಒಟ್ಟುಗೂಡಿಸುವ ಪ್ರಯತ್ನದಲ್ಲಿ ಇರಾಕ್‌ ಆರೋಗ್ಯ ಸಂಸ್ಥೆ ಪರೀಕ್ಷೆಗಳನ್ನು ನಡೆಸಿತು. ಆದರೆ ಜನರಿದ ಯಾವುದೇ ಉತ್ತಮ ಸ್ಪಂದನೆ ದೊರೆಯದೇ ಇರುವುದರಿದ ಆರೋಗ್ಯವಂತರನ್ನೂ ಸೋಂಕಿತರಂತೆ ಕಾಣುವಂತಾಗಿದೆ.

ಸರಕಾರವು ಆರೋಗ್ಯ ಕಾರ್ಯಕರ್ತರೊದಿಗೆ ಸಶಸ್ತ್ರ ರಾಷ್ಟ್ರೀಯ ಭದ್ರತಾ ಸಿಬಂದಿಯನ್ನು ನಿಯೋಜಿಸಿದೆ. ಇಲ್ಲಿನ ಸಂಸ್ಕೃತಿ ಪಾಲನೆಯಿಂದ ಎಲ್ಲ ಯೋಜನೆಗಳು ಸಮಸ್ಯೆಯಾಗಿದೆ ಎಂದು ಬಾಗ್ಧಾದ್‌ ಮೆಡಿಕಲ್‌ ಸಿಟಿಯ ಹಿರಿಯ ಶ್ವಾಸಕೋಶ ಶಾಸ್ತ್ರಜ್ಞ ಡಾ| ಮೊಹಮ್ಮದ್‌ ವಹೀಬ್‌ ಹೇಳಿದರು.

ರೋಗಿಯನ್ನು ಕರೆತರಲು ಆ್ಯಂಬುಲೆನ್ಸ್‌ ಕಳುಹಿಸಿದರೆ ಬೇರೆಯವರು ನೋಡುವವರೆದು ಅಸಮಾಧಾನಗೊಂಡು ನಿರಾಕರಿಸುತ್ತಿದ್ದಾರೆ. ಈ ಬದಲಾವಣೆಯಿಂದ ಸೋಂಕು ಪ್ರಕರಣಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ ಜನರನ್ನು ಮನವೊಲಿಸಿ ಮತ್ತು ತೊಂದರೆಯನ್ನು ನಿವಾರಿಸಲು ಭದ್ರತಾ ಸಿಬಂದಿಯನ್ನು ಬಳಸುವುದು ಏಕೈಕ ಮಾರ್ಗ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ವೈದ್ಯಕೀಯ ವ್ಯವಸ್ಥೆಯ ಮೇಲೆ ಇಲ್ಲಿನ ಜನತೆಗೆ ನಂಬಿಕೆ ಇಲ್ಲದಿರುವುದೇ ಈ ಎಲ್ಲ ಸಮಸ್ಯೆಗೆ ಕಾರಣವಾಗಿದೆ. 38 ದಶಲಕ್ಷ ಜನ ಸಂಖ್ಯೆ ಹೊಂದಿರುವ ಇರಾಕ್‌ನಲ್ಲಿ ಸೋಮವಾರ 1,352 ಸೋಂಕಿತ ಪ್ರಕರಣ ದೃಢಪಟ್ಟಿದೆ.  ಇರಾಕ್‌ಗಿಂತ ಕಡಿಮೆ ಜನ ಸಂಖ್ಯೆ ಹೊಂದಿರುವ ಸೌದಿ ಅರೇಬಿಯಾದಲ್ಲಿ ಅತೀ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ನಮ್ಮಲ್ಲಿ ಪ್ರಕರಣಗಳನ್ನು ಮರೆಮಾಚಲಾಗಿದೆ. ಇಲ್ಲಿನ ಜನರು ಪರೀಕ್ಷೆಗೆ ಒಳಗಾಗಲು ಒಪ್ಪುವುದಿಲ್ಲ, ಸಂಪರ್ಕ ತಡೆ, ಮತ್ತು ಪ್ರತ್ಯೇಕತೆಗೆ ಹೆದರುತ್ತಾರೆ ಎಂದು ಉಪ ಆರೋಗ್ಯ ಸಚಿವ ಡಾ| ಹಜೀವ್‌ ಅಲ್‌ ಜುಮೇಲಿ ಹೇಳಿದರು.

ಬಾಸ್ರಾ ಆಸ್ಪತ್ರೆಯಲ್ಲಿ ಮಹಿಳಾ ರೋಗಿಗಳು ಮಾಸ್ಕ್ ಇಲ್ಲದೆ ಮಲಗಿರುವ ಮತ್ತು ಒಬ್ಬರು ಸಾವನ್ನಪ್ಪಿರುವ ವೀಡಿಯೋ ವ್ಯಾಪಕವಾಗಿ ಹರಿದಾಡುತ್ತಿರುವುದರಿಂದ ಜನರು ಭಯಗೊಂಡಿದ್ದಾರೆ ಎನ್ನಲಾಗಿದೆ.

32 ವರ್ಷದ ಮಹಿಳಾ ರೋಗಿಯ ಪ್ರಕರಣವನ್ನು ಅವರು ಪ್ರಸ್ತಾಪಿಸುತ್ತಾ, ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಈಕೆಯನ್ನು ಕೋವಿಡ್‌-19 ಪರೀಕ್ಷೆಗೆ ಹೋಗುವಂತೆ ಶಿಫಾರಸು ಮಾಡಲಾಗುತ್ತದೆ. ಆದರೆ ಆಕೆಯ ತಂದೆ ಮತ್ತು ಸಹೋದರರು ಪರೀಕ್ಷೆಗೆ ಹೋಗುವುದನ್ನು ನಿರಾಕರಿಸುತ್ತಾರೆ.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.