Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
ತಪ್ಪು ಅಂತ ಸಾಬೀತಾದ ಮೇಲೆ ಯಡಿಯೂರಪ್ಪ ಏನು ಮಾಡಲು ಸಾಧ್ಯ?
Team Udayavani, Nov 11, 2024, 6:30 AM IST
ಹುಬ್ಬಳ್ಳಿ: ಕೋವಿಡ್ ಅವ್ಯವಹಾರ ವರದಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರವಿವಾರ ಸುದ್ದಿಗಾರರ ಜತೆ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ನೀಡಿರುವ ವರದಿಯನ್ನು ಸಂಪುಟ ಉಪ ಸಮಿತಿ ಅಧ್ಯಯನ ಮಾಡುತ್ತಿದೆ. ಅದರ ವರದಿ ಬಂದ ಅನಂತರ ಸಂಪುಟದಲ್ಲಿ ಚರ್ಚಿಸಲಾಗುವುದು. ಇದ್ಯಾವುದೂ ಗೊಡ್ಡು ಬೆದರಿಕೆಯಲ್ಲ. ಮುಂದಿನ ದಿನಗಳಲ್ಲಿ ಕ್ರಿಮಿನಲ್ ವಿಚಾರಣೆ ಆರಂಭವಾದಾಗ ನಿಜಾಂಶ ಗೊತ್ತಾಗಲಿದೆ ಎಂದರು.
ನ್ಯಾಯಾಂಗ ಬಗ್ಗೆ ನಂಬಿಕೆಯಿದೆ ಎನ್ನುವ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನ್ಯಾಯಾಂಗ ಅವರಿಗೆ ಮಾತ್ರ ಇದೆಯೇ? ಅದು ಇರುವುದು ನ್ಯಾಯ ಕೊಡುವುದಕ್ಕೆ. ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಲು. ತಪ್ಪು ಅಂತ ಸಾಬೀತಾದ ಮೇಲೆ ಯಡಿಯೂರಪ್ಪ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರ ಕೊಲೆಗೆ ಸಂಚು ನಡೆದಿದ್ದು ನಿಜವಾಗಿದ್ದರೆ, ಅಂದೇ ಯಾಕೆ ಅವರು ಪ್ರಕರಣ ದಾಖಲಿಸಲಿಲ್ಲ? ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆಯಲ್ಲವೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಡಾ ನಿವೇಶನ ನೋಂದಣಿಗೆ ತಹಶೀಲ್ದಾರ್ ಹಣ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಸುಳ್ಳು. ತಹಶೀಲ್ದಾರ್ ಚೆಕ್ ಮೂಲಕ ಏನಾದರೂ ಹಣ ನೀಡಿದ್ದಾರೆಯೇ? ದಾನಪತ್ರ ಮಾಡಲು ನನ್ನ ಭಾವಮೈದ ಹಣ ಕೊಟ್ಟಿದ್ದಾರೆ. ನಾನು, ನನ್ನ ಪತ್ನಿ ಸಹಿಪತ್ರ ಮಾಡಲು ಹಣ ನೀಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.