Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
ಯಡಿಯೂರಪ್ಪ ತಾಕತ್ತು ಏನೆಂಬುದು ಕಾಂಗ್ರೆಸ್‌ನವರಿಗಿಂತ ಸಿಎಂ ಸಿದ್ದರಾಮಯ್ಯಗೆ ಗೊತ್ತು
Team Udayavani, Nov 11, 2024, 6:25 AM IST
ಬಳ್ಳಾರಿ: ಕೋವಿಡ್ ಅಕ್ರಮದ ಕುರಿತು ನ್ಯಾ. ಡಿ.ಕುನ್ಹಾ ನೀಡಿರುವ ವರದಿ ಬೆದರಿಕೆ ತಂತ್ರವಾಗಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಬೇಕಾದಾಗ ಈ ರೀತಿ ಸಮಿತಿ ರಚನೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಕೋವಿಡ್ ವೇಳೆ ಪಿಪಿಇ ಕಿಟ್ ಖರೀದಿ ಸೇರಿ ಇತರೆ ವಸ್ತುಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ನ್ಯಾ| ಡಿ.ಕುನ್ಹಾ ಸಮಿತಿ ರಚಿಸಿದ್ದಾರೆ ಎಂದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕೋವಿಡ್‌ನಲ್ಲಿ 15 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎನ್ನುತ್ತಾರೆ. ಕಾಂಗ್ರೆಸ್‌ನವರು ತಮ್ಮ ತಪ್ಪು ಮುಚ್ಚಿಕೊಳ್ಳಲು ಸಮಿತಿ ರಚಿಸೋದು ಮೊದಲಿನಿಂದಲೂ ಮಾಡುತ್ತಿರುವ ತಂತ್ರ ಎಂದರು.
ಕಳೆದ ಮೂರು ದಿನಗಳಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಂಡೂರಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರೊಂದಿಗೆ ಮಾಜಿ ಸಚಿವ ಬಿ. ಶ್ರೀರಾಮುಲು ಸಹ ಇದ್ದು, ಇವರಿಬ್ಬರೂ ಪ್ರಚಾರಕ್ಕೆ ಹೋಗದಂತೆ ಬೆದರಿಸುವ ಹುನ್ನಾರ ಈ ಸಮಿತಿ ವರದಿಯ ಹಿಂದಿದೆ. ಇಂತಹ ಬೆದರಿಕೆಗಳಿಗೆ ಯಡಿಯೂರಪ್ಪನವರು ಹೆದರಲ್ಲ. ಅವರ ತಾಕತ್ತು ಏನೆಂಬುದು ಕಾಂಗ್ರೆಸ್‌ನವರಿಗಿಂತ ಸಿಎಂ ಸಿದ್ದರಾಮಯ್ಯರಿಗೇ ಚೆನ್ನಾಗಿ ಗೊತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.