ಗ್ರಾಮಗಳ ಕಡೆ ಮಕ್ಕಳ ತಜ್ಞರ ನಡೆ : ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯ ಸಾಧ್ಯತೆ
Team Udayavani, Jun 17, 2021, 7:20 AM IST
ಬೆಂಗಳೂರು / ದೇವನಹಳ್ಳಿ : ಕೊರೊನಾ ಎರಡನೇ ಅಲೆಯ ಅಬ್ಬರ ಮುಗಿಯುತ್ತಾ ಬಂದಿದ್ದು, ಇಡೀ ದೇಶವೇ ನಿಟ್ಟುಸಿರು ಬಿಡುತ್ತಿದೆ. ಈ ನಡುವೆಯೇ 3ನೇ ಅಲೆಯ ಅಪಾಯದ ಬಗ್ಗೆಯೂ ತಜ್ಞರು ಎಚ್ಚರಿಕೆ ನೀಡಿದ್ದು, ಮಕ್ಕಳೇ ಹೆಚ್ಚು ಬಾಧಿತರಾಗುತ್ತಾರೆ ಎಂದಿರುವುದು ಆತಂಕಕ್ಕೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ “ಮಕ್ಕಳ ತಜ್ಞ ವೈದ್ಯರ ನಡೆ ಹಳ್ಳಿ ಕಡೆ’ ಎಂಬ ವಿನೂತನ ಯೋಜನೆ ಜಾರಿ ಮಾಡಿದೆ.
ಕಂದಾಯ ಸಚಿವ ಆರ್. ಅಶೋಕ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಿದರು.
ಏನಿದು ಯೋಜನೆ?
– ಹಳ್ಳಿ ಹಳ್ಳಿಗಳಲ್ಲಿ ಮಕ್ಕಳ ತಪಾಸಣೆ ಮಾಡುವುದು
– ಸಮಸ್ಯೆ ಇರುವ ಮಕ್ಕಳಿಗೆ ಚಿಕಿತ್ಸೆ
– ಅಪೌಷ್ಟಿಕತೆ ಸಮಸ್ಯೆ ಇರುವ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್
ಹೇಗೆ ತಪಾಸಣೆ?
ಪ್ರತೀ ತಾಲೂಕಿನಲ್ಲಿ ಐವರು ತಜ್ಞ ವೈದ್ಯರಂತೆ 20 ತಂಡಗಳು ಕಾರ್ಯನಿರ್ವಹಿಸಲಿವೆ. ಅವರು ಹಳ್ಳಿಗಳಿಗೆ ಭೇಟಿ ನೀಡಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಕ್ಕಳ ಮನೆ, ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ.
3ನೇ ಅಲೆ ತಡೆಯಲು ಸರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, “ಮಕ್ಕಳ ತಜ್ಞ ವೈದ್ಯರ ನಡೆ’ ಯೋಜನೆಯನ್ನು ಎಲ್ಲ ಜಿಲ್ಲೆಗಳಲ್ಲೂ ನಡೆಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-ಆರ್. ಅಶೋಕ್, ಕಂದಾಯ ಸಚಿವ
ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದ್ದು ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯಲ್ಲೂ ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
-ಶಶಿಕಲಾ ಅಣ್ಣಾಸಾಹೇಬ್ ಜೊÇÉೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.