ಕೇಂದ್ರದ ಜತೆ ಮಾತನಾಡಿ, ಲಸಿಕೆ ಕೊರತೆ ನೀಗಿಸಿ


Team Udayavani, May 12, 2021, 6:30 AM IST

ಕೇಂದ್ರದ ಜತೆ ಮಾತನಾಡಿ, ಲಸಿಕೆ ಕೊರತೆ ನೀಗಿಸಿ

ದಾಖಲೆ ಪ್ರಮಾಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯಾದ್ಯಂತ ಲಸಿಕೆಗಾಗಿ ಬೇಡಿಕೆಯೂ ಹೆಚ್ಚುತ್ತಿದೆ. ಲಸಿಕೆ ಕೊರತೆ ನ‚ಡುವೆಯೂ ರಾಜ್ಯ ಸರಕಾರ 18 ವರ್ಷ ಪೂರೈಸಿರುವವರಿಗೂ ಲಸಿಕೆ ನೀಡುವುದಾಗಿ ಘೋಷಿಸಿದೆ. ಒಂದು ಕಡೆ 45 ವರ್ಷ ತುಂಬಿದವರಿಗೂ ಮೊದಲ ಡೋಸ್‌ ಸಿಗುತ್ತಿಲ್ಲ. ಅತ್ತ ಕೇಂದ್ರ ಸರಕಾರ, ಎರಡನೇ ಡೋಸ್‌ ನೀಡಲು ಕ್ರಮ ವಹಿಸಿ ಎಂದು ಹೇಳಿದೆ. ಈ ಎಲ್ಲ ಗೊಂದಲಗಳ ನಡುವೆ ಎಲ್ಲರಿಗೂ ಲಸಿಕೆ ಎಂದು ಘೋಷಿಸುವ ಅಗತ್ಯವಿತ್ತೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.

ಇವೆಲ್ಲದಕ್ಕಿಂತ ಹೆಚ್ಚಾಗಿ ಲಸಿಕೆ ಕೊರತೆ ಏಕಾಗುತ್ತಿದೆ ಎಂಬ ಪ್ರಶ್ನೆಗೆ ಯಾರೂ ಉತ್ತರ ಕೊಡುತ್ತಿಲ್ಲ. ಒಂದು ಕೇಂದ್ರ ಸರಕಾರ ದಿಂದ ಬರುತ್ತಿಲ್ಲವೇ? ಅಥವಾ ರಾಜ್ಯ ಸರಕಾರವೇ ಲಸಿಕೆ ತಯಾರಿಸುವ ಕಂಪನಿಗಳಿಗೆ ಸರಿಯಾದ ರೀತಿಯಲ್ಲಿ ಆರ್ಡರ್‌ ಕೊಟ್ಟಿಲ್ಲವೇ? ಈಗ ಎಲ್ಲರಿಗೂ ಲಸಿಕೆ ಕೊಡುತ್ತೇವೆ ಎಂದು ಹೇಳಿ ಲಸಿಕೆ ದಾಸ್ತಾನಿಲ್ಲದೇ ಆಸ್ಪತ್ರೆಗಳಿಗೆ ಬಂದ ಜನರನ್ನು ವಾಪಸ್‌ ಕಳುಹಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ?

ಕೊರೊನಾ ಹೆಚ್ಚಳದ ನಡುವೆ ಸರಕಾರ ಮಾಡಬೇಕಾಗಿರುವ ಬಹುಮುಖ್ಯ ಕೆಲಸ, ಜನರಲ್ಲಿ ಭಯ ಹೋಗಲಾಡಿಸುವುದು. ಈ ಕೊರೊನಾ ಹೆಚ್ಚಳವಾಗುತ್ತಿರುವ ವೇಳೆಯಲ್ಲಿ ಲಸಿಕೆ ಜನರ ಭಯವನ್ನು ಹೋಗಿಸುವ ರಾಮಬಾಣವಾಗಬಲ್ಲದು. ಹೀಗಾಗಿ, ಸರಕಾರ ಕೇಂದ್ರ ಸರಕಾರವನ್ನಾಗಲಿ ಅಥವಾ ಲಸಿಕೆ ತಯಾರಿಸುವ ಕಂಪನಿಗಳನ್ನು ಸಂಪರ್ಕಿಸಿ ಆದಷ್ಟು ಬೇಗ ಲಸಿಕೆಯನ್ನು ತರಿಸಿಕೊಳ್ಳಬೇಕು.

ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್‌ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಇದರಲ್ಲಿ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲವೇ ಎಂಬುದು ಅದರ ಪ್ರಶ್ನೆ. ಜತೆಗೆ, ಎರಡನೇ ಡೋಸ್‌ ಕೊಡಲು ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂಬ ಪ್ರಶ್ನೆಯನ್ನೂ ಹಾಕಿದೆ. ಈ ಬಗ್ಗೆ ಸರಕಾರವೇ ಉತ್ತರ ಕೊಡಬೇಕು. ಆದಷ್ಟು ಬೇಗ ಲಸಿಕೆ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು.
ಈ ಎಲ್ಲಾ ಸಂಗತಿಗಳ ನಡುವೆ ಮಂಗಳವಾರ ಉಪ ಮುಖ್ಯಮಂತ್ರಿ ಡಾ|ಸಿ. ಎನ್‌. ಅಶ್ವತ್ಥ ನಾರಾಯಣ ಅವರು. ಲಸಿಕೆ ತರಿಸಿಕೊಳ್ಳುವ ಸಲುವಾಗಿ ಜಾಗತಿಕ ಟೆಂಡರ್‌ ಕರೆಯುವುದಾಗಿ ಹೇಳಿದ್ದಾರೆ. ಇದು ಒಂದು ರೀತಿಯಲ್ಲಿ ಸ್ವಾಗತಾರ್ಹ ನಿರ್ಧಾರ. ಆದರೆ ಈ ಪ್ರಕ್ರಿಯೆ ಒಂದಷ್ಟು ಬೇಗನೇ ಆರಂಭವಾಗಬೇಕಿತ್ತು. ಈಗ ಟೆಂಡರ್‌ ಕರೆದರೂ, ಎಲ್ಲ ಪ್ರಕ್ರಿಯೆ ಮುಗಿಯಲು ಸಾಕಷ್ಟು ದಿನ ಬೇಕಾಗುತ್ತದೆ. ಆದ್ದರಿಂದ ಅಧಿಕಾರಿ ವಲಯಕ್ಕೆ ಸಾಕಷ್ಟು ಬಿಸಿ ಮುಟ್ಟಿಸಿ, ಶೀಘ್ರವಾಗಿ ಪ್ರಕ್ರಿಯೆ ಮುಗಿಯುವಂತೆ ಮಾಡಬೇಕು.

ಈ ಮಧ್ಯೆ, ಬೆಂಗಳೂರಿನಲ್ಲಿ ಲಸಿಕೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ, ಇಲ್ಲಿನ ಯುವಕರು ಗ್ರಾಮಗಳಿಗೆ ತೆರಳಿ ಲಸಿಕೆ ಪಡೆಯುತ್ತಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೆ ತೆರಳುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಜನರಿಗೆ ಲಸಿಕೆ ಸಿಗುತ್ತಿಲ್ಲ. ಬೆಂಗಳೂರಿನ ಯುವಕರೇ ಮೊದಲಿಗೆ ಟೈಂ ಸ್ಲಾಟ್‌ಗಳನ್ನು ಬುಕ್‌ ಮಾಡಿಕೊಳ್ಳುತ್ತಿದ್ದಾರೆ. ಇದು ಸರ್ವಥಾ ಸಲ್ಲದು. ದಯಮಾಡಿ, ಬೆಂಗಳೂರಿನಲ್ಲೇ ನಿಮಗೆ ಲಸಿಕೆ ಸಿಗುವವರೆಗೆ ಕಾಯಿರಿ. ಹಳ್ಳಿಗಳಿಗೆ ಹೋಗಿ ಅಲ್ಲಿನವರಲ್ಲಿ ಭಯ ತುಂಬಬೇಡಿ. ಮೊದಲೇ ಬೆಂಗಳೂರು ಎಂದರೆ ಹೆದರುತ್ತಿರುವ ಗ್ರಾಮೀಣರಿಗೆ ಈ ವರ್ತನೆಯಿಂದ ಮತ್ತಷ್ಟು ಆತಂಕವಾಗುವುದು ಬೇಡ.

ಟಾಪ್ ನ್ಯೂಸ್

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.