ಲಸಿಕಾ ಅಭಿಯಾನ 100 ಮೀ. ಓಟ ಸ್ಪರ್ಧೆಯಲ್ಲ. ಇದೊಂದು ಮ್ಯಾರಥಾನ್‌: ಕೇಂದ್ರ

Team Udayavani, Jul 3, 2021, 7:25 AM IST

ಲಸಿಕಾ ಅಭಿಯಾನ 100 ಮೀ. ಓಟ ಸ್ಪರ್ಧೆಯಲ್ಲ. ಇದೊಂದು ಮ್ಯಾರಥಾನ್‌: ಕೇಂದ್ರ

ಹೊಸದಿಲ್ಲಿ: ದೇಶದ ಕೊನೆಯ ಪ್ರಜೆಗೂ ಲಸಿಕೆ ಹಾಕುವುದೇ ಸರಕಾರದ ಗುರಿ. ಜೂ.21ರ ಬಳಿಕ ಪ್ರತೀ ದಿನ ಸರಿ ಸುಮಾರು 50 ಲಕ್ಷ ಮಂದಿಗೆ ಅಂದರೆ ನಾರ್ವೆ ದೇಶದ ಜನಸಂಖ್ಯೆಯಷ್ಟು ಮಂದಿಗೆ ಲಸಿಕೆ ಹಾಕಲಾಗುತ್ತದೆ ಎಂದು ನೀತಿ ಆಯೋಗದ ಸದಸ್ಯ ಡಾ| ವಿ.ಕೆ.ಪೌಲ್‌ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಹಾಕುವುದೆಂದರೆ ಪ್ರತೀ ದಿನದ ಸಾಂಖೀಕ ಗುರಿ ಅಲ್ಲ. ಹೀಗಾಗಿ ಲಸಿಕೆ ಹಾಕುವ ಪ್ರಕ್ರಿಯೆ 100 ಮೀಟರ್‌ ಓಟದಂತೆ ಅಲ್ಲ. ಬದಲಾಗಿ ಅದೊಂದು ಮ್ಯಾರಥಾನ್‌ ಎಂದು ಪೌಲ್‌ ಹೇಳಿ ದ್ದಾರೆ. ಜೂ.21ರ ಬಳಿಕ ಲಸಿಕೆ ಹಾಕುವ ಪ್ರಮಾಣ ಏಕೆ ಕಡಿಮೆಯಾಯಿತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ಈ ಮಾತುಗಳನ್ನು ಪೌಲ್‌ ಹೇಳಿದ್ದಾರೆ. ಕೇವಲ ದೈನಂದಿನ ಗುರಿಯ ಬಗ್ಗೆಯೇ ಯೋಚನೆ ಮಾಡುತ್ತಿದ್ದರೆ, ದೀರ್ಘ‌ ಕಾಲಿಕವಾಗಿರುವ ಈ ಪ್ರಕ್ರಿಯೆ ಪೂರ್ತಿಗೊಳಿಸಲು ಅಡ್ಡಿಯಾದೀತು ಎಂದು ಹೇಳಲು ಪೌಲ್‌ ಮರೆಯಲಿಲ್ಲ.

ಪ್ರಗತಿಯಲ್ಲಿ: ಅಮೆರಿಕದ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಸಿಂಗಲ್‌ ಡೋಸ್‌ ಲಸಿಕೆ ಪಡೆಯುವುದರ ಬಗ್ಗೆ ಇನ್ನೂ ಮಾತುಕತೆಗಳು ಪ್ರಗತಿಯಲ್ಲಿವೆ. ಹೈದರಾಬಾದ್‌ನ ಬಯಲಾಜಿಕಲ್‌ ಇ ಸಂಸ್ಥೆಯಲ್ಲಿ ಅದನ್ನು ಉತ್ಪಾದಿಸುವ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದರು ಪೌಲ್‌.

ವೈಜ್ಞಾನಿಕವಾಗಿ ಸಾಧ್ಯ: ಸೋಂಕು ಪ್ರತಿಬಂಧಕ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಿದರೆ, ಮೂರನೇ ಅಲೆಯನ್ನು ಯಶಸ್ವಿಯಾಗಿ ಎದುರಿಸಲು ಸಾಧ್ಯವಿದೆ. ಇದರ ಹೊರತಾಗಿಯೂ ಸಂಭಾವ್ಯ ಪರಿಸ್ಥಿತಿಗೆ ದೇಶ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ವಿ.ಕೆ. ಪೌಲ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

ಶೇ.86ರಷ್ಟು ಇಳಿಕೆ: ದೇಶದಲ್ಲಿ 2ನೇ ಅಲೆಯ ಸೋಂಕು ಸಂಖ್ಯೆಯ ಗರಿಷ್ಠ ಮಿತಿಯ ದಿನಗಳಿಗೆ ಹೋಲಿಕೆ ಮಾಡಿದರೆ ಸದ್ಯ ಸಕ್ರಿಯ ಸಂಖ್ಯೆಯ ಪ್ರಮಾಣ ಶೇ.86ಕ್ಕೆ ಇಳಿಕೆಯಾಗಿದೆ. ಮೇಯಲ್ಲಿ ಚೇತರಿಕೆ ಪ್ರಮಾಣ ಶೇ.81 ಇದ್ದದ್ದು ಈಗ ಶೇ.97ಕ್ಕೆ ಏರಿಕೆಯಾಗಿದೆ. ಜೂ.23-29ರ ವಾರದಲ್ಲಿ 71 ಜಿಲ್ಲೆಗಳಲ್ಲಿ ವಾರದ ಪಾಸಿಟಿವಿಟಿ ಪ್ರಮಾಣ ಶೇ.100 ದಾಖಲಾಗಿತ್ತು ಎಂದಿದ್ದಾರೆ ಆರೋಗ್ಯ ಖಾತೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌.

34.41 ಕೋಟಿ: ಗುರುವಾರ ರಾತ್ರಿ 7 ಗಂಟೆಯ ವರೆಗೆ ದೇಶಾದ್ಯಂತ 34.41 ಕೋಟಿ ಮಂದಿಗೆ ಲಸಿಕೆ ಹಾಕಲಾಗಿದೆ. 18-44 ವರ್ಷ ಮೇಲ್ಪಟ್ಟವರಿಗೆ ಇದುವರೆಗೆ 9.85 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ವಿಸ್ತರಣೆ: ತಮಿಳುನಾಡಿನಲ್ಲಿ ಕೊರೊನಾ ಲಾಕ್‌ಡೌನ್‌ ಅನ್ನು ಜು.12ರ ವರೆಗೆ ಹಲವು ರಿಯಾಯಿತಿ ಗಳ ಸಹಿತ ವಿಸ್ತರಿಸಲಾಗಿದೆ. ಸೋಮವಾರ ದಿಂದ ಉತ್ತರ ಪ್ರದೇಶದಲ್ಲಿ ಜಿಮ್‌ಗಳು, ಮಲ್ಟಿಪ್ಲೆಕ್ಸ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಚೇತರಿಕೆ ಪ್ರಮಾಣ ಶೇ.97: ದೇಶದಲ್ಲಿ ಸೋಂಕಿ ನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ.97.01ಕ್ಕೆ ಏರಿಕೆಯಾಗಿದೆ. ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ ದೇಶದಲ್ಲಿ 46,617 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿ ಯಲ್ಲಿ 853 ಮಂದಿ ಸೋಂಕಿನಿಂದಾಗಿ ಅಸುನೀಗಿದ್ದಾರೆ.

ಡೆಲ್ಟಾ ರೂಪಾಂತರಿ ಸೋಂಕು ಅಪಾಯಕಾರಿ ಎಂದು ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡೋìಸ್‌ ಅಧೊನಮ್‌ ಘೇಬ್ರಯೋಸಿಸ್‌ ಎಚ್ಚರಿಸಿದ್ದಾರೆ. ಇದರ ಜತೆಗೆ ಸದ್ಯ ನಡೆಯುತ್ತಿರುವ ಯೂರೋ ಕಪ್‌ ಫ‌ುಟ್ಬಾಲ್‌, ವಿಂಬಲ್ಡನ್‌ ಟೆನಿಸ್‌ ಕೂಟವೂ ಸೂಪರ್‌ ಸ್ಪೆಡರ್‌ ಆಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಪ್ಪಿದ ಅನಾಹುತ: ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಗುರುವಾರ ಲಸಿಕೆ ಪಡೆಯಲು ನೂಕು ನುಗ್ಗಲು ಉಂಟಾಗಿದೆ. ಸಣ್ಣ ಹಾಲ್‌ನಲ್ಲಿ ಲಸಿಕೆ ಪಡೆಯಲು ಜನರು ಮುಗಿ ಬಿದ್ದಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಅದರ ವಿಡಿಯೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.