ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ
Team Udayavani, Apr 5, 2020, 8:34 AM IST
ನ್ಯೂಯಾರ್ಕ್ : ವಿಶ್ವದೆಲ್ಲೆಡೆ ಕೋವಿಡ್ 19 ಆರ್ಭಟ ಮುಂದುವರೆದಿದ್ದು, ಮರಣ ಮೃದಂಗಕ್ಕೆ ಇಲ್ಲಿವರೆಗೂ 64, 720 ಜನರು ಬಲಿಯಾಗಿದ್ದಾರೆ. ಸೋಂಕಿತರ ಪ್ರ,ಮಾಣ ಕೂಡ ಏರಿಕೆ ಕಂಡಿದ್ದು ಒಟ್ಟಾರೆಯಾಗಿ 12,01,933 ಜನರು ಈ ವೈರಾಣು ದಾಳಿಯಿಂದ ಅಕ್ಷರಶಃ ನಲುಗಿದ್ದಾರೆ ಎಂದು ವರದಿ ತಿಳಿಸಿದೆ.
ಅಮೆರಿಕಾ ಈ ವೈರಸ್ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದು, ಇತರ ದೇಶಗಳಿಗಿಂತ ಇಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ವಿಶ್ವದ ಹಲವು ರಾಷ್ಟ್ರಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, 260 ಕೋಟಿ ಗಿಂತ ಹೆಚ್ಚು ಜನರು ಗೃಹ ಬಂಧನಕ್ಕೆ ಒಳಗಾಗಿದ್ದಾರೆ. ಬ್ರಿಟನ್, ಇಟಲಿ, ಫ್ರಾನ್ಸ್, ಸ್ಪೇನ್, ನ್ಯೂಜಿಲ್ಯಾಂಡ್, ಭಾರತ ಮುಂತಾದ ದೇಶಗಳಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದವುಗಳೆಲ್ಲವನ್ನೂ ಸ್ಥಗಿತಗೊಳಿಸಲಾಗಿದೆ.
ಏತನ್ಮಧ್ಯೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಮಾರಕ ವೈರಸ್ ಗೆ ಮೃತರಾಗುವವರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ ಎಂದಿರುವುದು ಆತಂಕ ಮೂಡಿಸಿದೆ.ಗಮನಾರ್ಹ ಸಂಗತಿಯೆಂದರೇ ಸೋಂಕಿತರಲ್ಲಿ 2,46,634 ಜನರು ಗುಣಮುಖರಾಗಿದ್ದಾರೆ.
ದುರದೃಷ್ಟವೆಂದರೇ ಭಾರತದಲ್ಲಿ ಸೋಂಕಿತರ ಪ್ರಮಾಣ 5 ದಿನಗಳಲ್ಲಿ 120% ರಷ್ಟು ದ್ವಿಗುಣಗೊಂಡಿದೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಪ್ರಮಾಣ 3000 ಗಡಿ ದಾಟಿದ್ದು, ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.