Crackers Effect: 3 ದಿನಗಳಲ್ಲಿ ಪಟಾಕಿ ಸಿಡಿದು ಕಣ್ಣಿಗೆ ಗಾಯವಾದವರ ಸಂಖ್ಯೆ 200ಕ್ಕೇರಿಕೆ
30 ಮಂದಿಯ ಕಣ್ಣಿಗೆ ಗಂಭೀರ ಗಾಯ, ಕೆಲವರಿಗೆ ದೃಷ್ಟಿ ಕಳೆದುಕೊಳ್ಳುವ ಭೀತಿ
Team Udayavani, Nov 4, 2024, 6:45 AM IST
ಬೆಂಗಳೂರು: ದೀಪಾವಳಿ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಪಟಾಕಿ ಸಿಡಿದು ಕಣ್ಣಿನ ಗಾಯ ಮಾಡಿಕೊಂಡವರ ಸಂಖ್ಯೆ 200ಕ್ಕೆ ಏರಿಕೆ ಆಗಿದೆ. 30 ಮಂದಿಯ ಕಣ್ಣಿಗೆ ಗಂಭೀರ ಗಾಯವಾಗಿದೆ.
ಮಿಂಟೋ, ನಾರಾಯಣ ನೇತ್ರಾಲಯ, ಶಂಕರ್ ಸೇರಿದಂತೆ ನಗರದ ಕಣ್ಣಾಸ್ಪತ್ರೆಗಳಲ್ಲಿ ಪಟಾಕಿ ಸಿಡಿದು ಕಣ್ಣಿಗೆ ಗಾಯಗೊಂಡವರು ದಾಖಲಾಗಿದ್ದಾರೆ. ಕಳೆದ 3 ದಿನಗಳಿಂದ ನಾರಾಯಣ ನೇತ್ರಾಲಯದಲ್ಲಿ 73, ಮಿಂಟೋದಲ್ಲಿ 54, ಶಂಕರ್ ಆಸ್ಪತ್ರೆಯಲ್ಲಿ 18, ಉಳಿದ ಆಸ್ಪತ್ರೆಗಳಲ್ಲಿ 55 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಹಲವರಿಗೆ ದೃಷ್ಟಿ ಕಳೆದುಕೊಳ್ಳುವ ಆತಂಕವಿದ್ದು, ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.
ಮಿಂಟೋ ಆಸತ್ರೆಯಲ್ಲಿ ಇಲ್ಲಿಯವರೆಗೆ 54 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 32 ಮಕ್ಕಳು ಕಣ್ಣಿನ ತೊಂದರೆಗೆ ಒಳಗಾಗಿದ್ದಾರೆ. 23 ಮಂದಿಗೆ ಗಂಭೀರ, 31 ಮಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. 4 ಮಂದಿಗೆ ಸರ್ಜರಿ ಮಾಡಲಾಗಿದೆ. 30 ಮಂದಿ ಪಟಾಕಿ ಸಿಡಿಸುವಾಗ ಗಾಯ ಮಾಡಿಕೊಂಡಿದ್ದು, 24 ಮಂದಿಗೆ ಅಕ್ಕಪಕ್ಕದವರು ಸಿಡಿಸಿದ ಪಟಾಕಿಯಿಂದ ಗಾಯಗೊಂಡಿದ್ದಾರೆ. ಪಟಾಕಿ ಅವಘಢದಿಂದ 40 ಮಂದಿ ಚಿಕಿತ್ಸೆ ಪಡೆದು ಹೋಗಿದ್ದರೆ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಒಂದೇ ದಿನ 20 ಪಟಾಕಿ ಅವಗಢ ಪ್ರಕರಣ ದಾಖಲಾಗಿದೆ.
ಇನ್ನು ನಾರಾಯಣ ನೇತ್ರಾಲಯ, ಶಂಕರ್, ಮಂಜುನಾಥ, ವಿನಾಯಕ ಹಾಗೂ ಆರ್ಗವಾಲ್, ವಾಸನ್ ಐಕೇರ್ ಸೇರಿ ವಿವಿಧ ಕಣ್ಣಿನ ಆಸ್ಪತ್ರೆಗಲ್ಲಿ ಒಟ್ಟಾರೆ 146ಕ್ಕೂ ಅಧಿಕ ಮಂದಿಗೆ ಚಿಕಿತ್ಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.