ನಡು ರಸ್ತೆಯಲ್ಲೇ ಟೈಲ್ಸ್ ಕಾರ್ಮಿಕನ ಕೊಲೆ : ಎರಡನೇ ಪತ್ನಿಯಿಂದ ಸುಪಾರಿ?
Team Udayavani, Jul 3, 2021, 9:08 PM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಟೈಲ್ಸ್ ಕಾರ್ಮಿಕನನ್ನು ನಡು ರಸ್ತೆಯಲ್ಲೇ ಭೀಕರವಾಗಿ ಹತ್ಯೆಗೈದಿರುವ ಘಟನೆ ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ) ಠಾಣಾ ವ್ಯಾಪ್ತಿಯ ಕಾವಲ್ ಬೈರಸಂದ್ರದ ಅಂಬೇಡ್ಕರ್ ಕಾಲೇಜು ಮುಂಭಾಗ ಶುಕ್ರವಾರ ತಡರಾತ್ರಿ ನಡೆದಿದೆ.
ಕಾವಲ್‌ಬೈರಸಂದ್ರ ನಿವಾಸಿ ಕೃಷ್ಣಮೂರ್ತಿ (35) ಹತ್ಯೆಯಾದ ಕಾರ್ಮಿಕ. ಘಟನೆ ಸಂಬಂಧ ಕೃಷ್ಣಮೂರ್ತಿ ಎರಡನೇ ಪತ್ನಿ ವಿರುದ್ಧ ಮೃತನ ಸಹೋದರ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಕೇರಂ ಆಡಲು ಮನೆಯ ಹತ್ತಿರದಲ್ಲಿರುವ ಸ್ನೇಹಿತರ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಕೃಷ್ಣಮೂರ್ತಿಯನ್ನು ಇದೇ ವೇಳೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾರೆ. ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕೃಷ್ಣಮೂರ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡಿ.ಜೆ.ಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ :ಅಮೀರ್-ಕಿರಣ್ ವಿಚ್ಛೇದನಕ್ಕೆ ಕಾರಣವಾಯ್ತಾ ಆಕೆಯ ನೆರಳು…ಅಷ್ಟಕ್ಕೂ ಯಾರವಳು ?
2ನೇ ಪತ್ನಿ ಮೇಲೆ ಶಂಕೆ?
ಸುಮಾರು ವರ್ಷಗಳಿಂದ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಕೃಷ್ಣಮೂರ್ತಿ ಕೆಲ ವರ್ಷಗಳ ಹಿಂದೆ ಮೊದಲ ಪತ್ನಿ ಬಿಟ್ಟು ಹೋದ ಬಳಿಕ ಕೆ.ಜಿ.ಹಳ್ಳಿಯ ಸಮಾಧಾನ ನಗರ ನಿವಾಸಿ ರುತು ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಂದೂವರೆ ತಿಂಗಳ ಹಿಂದೆ ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ಪತ್ನಿ ಒಂದು ಮಗುವನ್ನು ತನ್ನೊಂದಿಗೆ ತವರು ಮನೆಗೆ ಕರೆದೊಯ್ಯಿದ್ದಳು. ಮತ್ತೂಂದು ಮಗು ಕೃಷ್ಣಮೂರ್ತಿ ಬಳಿಯೇ ಇತ್ತು. ಈ ನಡುವೆ ಕೃಷ್ಣಮೂರ್ತಿ ಮದ್ಯ ಸೇವಿಸಿ ಆಕೆಯ ತವರು ಮನೆಗೆ ಹೋಗಿ ಗಲಾಟೆ ಮಾಡಿದಲ್ಲದೆ, ಮನೆಯೊಳಗೆ ಕಲ್ಲು ಎತ್ತಿಹಾಕಿ ಹಲ್ಲೆ ನಡೆಸಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಅನಂತರವೂ ಪದೇ ಪದೇ ಹೋಗಿ ತನ್ನ ಮಗುವನ್ನು ತನಗೆ ಕೊಡುವಂತೆ ಪತ್ನಿಗೆ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗುತ್ತಿತ್ತು. ಹೀಗಾಗಿ ಎರಡನೇ ಪತ್ನಿಯೇ ಕೊಲೆ ಮಾಡಿಸಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮತ್ತೂಂದೆಡೆ ರುತು ಮತ್ತು ಆಕೆಯ ಮನೆಯವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.