![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 5, 2022, 8:52 PM IST
ಬೆಂಗಳೂರು : ಅಕ್ರಮವಾಗಿ ನಡೆಸುತ್ತಿದ್ದ ಮೂರು ಸ್ಪಾಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಇಬ್ಬರನ್ನು ಬಂಧಿಸಿ, ಇಬ್ಬರು ವಿದೇಶಿಯರು ಸೇರಿ 13 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಉತ್ತರ ಭಾರತ ಮೂಲದ ದೇವೆಂದರ್(36) ಮತ್ತು ಅಭಿಜಿತ್(40) ಬಂಧಿತರು. ಆರೋಪಿಗಳು ಕೆಲಸದ ಆಮಿಷವೊಡ್ಡಿ ಬೇರೆ ಬೇರೆ ರಾಜ್ಯಗಳಿಂದ ಮಹಿಳೆಯರು, ಯುವತಿಯರನ್ನು ಕರೆತಂದು ಅವರನ್ನು ನಗರದ ಸ್ಪಾಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ದೂಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಫೆ.3 ಹಾಗೂ 4ರಂದು ರಾಯಲ್ ಸ್ಪಾ ಆ್ಯಂಡ್ ಸಲೂನ್, ಅಸ್ತೇಟಿಕ್ ಯೂನಿಸೆಕ್ಸ್ ಸೆಲೂನ್ ಆ್ಯಂಡ್ ಸ್ಪಾ, ನಿಸರ್ಗ ಆಯುರ್ವೇದಿಕ್ ಕ್ಲಿನಿಕ್ ಮೇಲೆ ದಾಳಿ ನಡೆಸಿದ್ದರು.
ಆ ವೇಳೆ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ, ಟರ್ಕಿ ದೇಶದ ಇಬ್ಬರು ಮಹಿಳೆಯರು, ನಾಗಾಲ್ಯಾಂಡ್‌ನ ಇಬ್ಬರು, ಅಸ್ಸಾಂನ ಮೂವರು ಮಹಿಳೆಯರು, ದೆಹಲಿಯ ಒಬ್ಬರು, ಪಶ್ಚಿಮ ಬಂಗಾಳದ ಮೂವರು ಹಾಗೂ ಸ್ಥಳೀಯ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಅಲ್ಲದೇ, ಅಕ್ರಮ ಚಟುವಟಿಕೆ ನಡೆಸಲು ಸಹಕಾರ ನೀಡಿ ಪ್ರಕರಣದಲ್ಲಿ ಭಾಗಿಯಾಗಿದ್ದ 9 ಮಂದಿ ವಿರುದ್ಧ ಎಚ್‌ಎಸ್‌ಆರ್ ಲೇಔಟ್, ಅಶೋಕನಗರ ಹಾಗೂ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಇದನ್ನೂ ಓದಿ : ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ವ್ಯಕ್ತಿಗೆ 10 ವರ್ಷ ಸಜೆ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.