ಸಿದ್ದಕಟ್ಟೆ: ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಅತ್ಯಾಚಾರ, ಕೊಲೆ ಬೆದರಿಕೆ
Team Udayavani, Aug 14, 2021, 4:02 PM IST
ಪುಂಜಾಲಕಟ್ಟೆ: ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ಆ. 11 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸಿದ್ದಕಟ್ಟೆಯ ಅನಿಲ್ ಎಂಬಾತ ಅತ್ಯಾಚಾರ ಆರೋಪಿಯಾಗಿದ್ದು ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ.
ಮಹಿಳೆಯ ಪತಿ ನಿಧನರಾಗಿದ್ದು, ಮಗಳಿಗೆ ವಿವಾಹವಾಗಿದೆ. ಏಕಾಂಗಿಯಾಗಿದ್ದ ಅವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.
ಇದನ್ನೂ ಓದಿ :ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನವಾಗಬಹುದು: ಸಿದ್ದರಾಮಯ್ಯ
ಆರೋಪಿ ಸಂಜೆ ಹೊತ್ತು ಮಹಿಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ,ಅತ್ಯಾಚಾರ ಮಾಡಿ ಬಳಿಕ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಬಳಿಕ ಅತ್ಯಾಚಾರಕ್ಕೊಳಗಾದ ಮಹಿಳೆ ಮಗಳಿಗೆ ಹಾಗೂ ಅಳಿಯನಿಗೆ ಪೋನ್ ಕರೆ ಮಾಡಿ ತಿಳಿಸಿದ್ದು, ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ದೂರು ದಾಖಲಾಗಿದೆ. ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.