ವದಂತಿಗೆ ಕ್ರಿಮಿನಲ್‌ ದಾವೆ; ವಿದ್ಯಾರ್ಥಿಗಳೇ ನಡೆಸಿದರೆ ಪರೀಕ್ಷಾ ಅಕ್ರಮಕ್ಕೆ ಸೇರ್ಪಡೆ

ಪರೀಕ್ಷಾ ಊಹಾಪೋಹ ಹಬ್ಬಿಸಿದರೆ ಕ್ರಮ: ಇಲಾಖೆ ಎಚ್ಚರಿಕೆ

Team Udayavani, Feb 8, 2020, 6:15 AM IST

Suresh-Kumar-750

ಬೆಂಗಳೂರು: ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ವೇಳೆ ಯಾವುದೇ ಬಗೆಯ ಸುಳ್ಳು ಸುದ್ದಿ ಹಬ್ಬಿಸಿ ಮಜಾ ಪಡೆಯುವ ಕುಹಕಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿ ಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಶಂಕರ್‌ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಪತ್ರಿಕಾ ಗೋಷ್ಠಿ ನಡೆಸಿ,ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿ ಸುವ ಉದ್ದೇಶದಿಂದ ಪರೀಕ್ಷಾ ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹಬ್ಬಿಸುವವರಿದ್ದಾರೆ. ಈ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಿದಲ್ಲಿ ಅದನ್ನು ಪರೀಕ್ಷಾ ಅಕ್ರಮಕ್ಕೆ ಸೇರಿಸುವ ಸಂಬಂಧ ನಿಯಮದಲ್ಲೂ ಬದಲಾವಣೆ ತರಲು ಯೋಚನೆ ನಡೆಯುತ್ತಿದೆ ಎಂದರು.

ವಿದ್ಯಾರ್ಥಿಗಳಲ್ಲದವರು ವದಂತಿ ಹಬ್ಬಿಸಿದರೆ ಅಂಥವರ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸಲಾಗುತ್ತದೆ. ಸಾಮಾ ಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುವವರ ಮೇಲೂ ನಿಗಾ ವಹಿಸಲಾಗುತ್ತದೆ.ಈ ಬಗ್ಗೆ ಸೈಬರ್‌ ಕ್ರೈಂ ಪೊಲೀಸರೊಂದಿಗೆ ಚರ್ಚಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಹಿಂದೆಯೂ ಪ್ರಕರಣ
ಎಸೆಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇ ಟಿ)ಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸೋರಿಕೆ ಕುರಿತು ವದಂತಿ ಹಬ್ಬಿಸಿರುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸಹಿತ ರಾಜ್ಯಾದ್ಯಂತ ಹಲವಾರು ಪ್ರಕರಣ ದಾಖಲಾಗಿವೆ. ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಇದುವರೆಗೆ ಪ್ರಶ್ನೆಪತ್ರಿಕೆಗಳ ಸೋರಿಕೆ ಮಾಡಿದ ಕಿಂಗ್‌ಪಿನ್‌ಗಳ ಮಾಹಿತಿ ಇದೆ ಮತ್ತು ಅವರ ಮೇಲೆ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಪೊಲೀಸ್‌ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಫೆ.14ಕ್ಕೆ ಡಿಸಿಗಳ ಜತೆ ಸಭೆ
ಈ ಸಂಬಂಧ ಫೆ.14ರಂದು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಿದ್ದೇವೆ. ಈ ವೇಳೆ ಪರೀಕ್ಷೆಗೆ ಸಂಬಂಧಿಸಿದ ಸೂಕ್ತ ನಿರ್ದೇಶನಗಳನ್ನು ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ ಅಚ್ಚುಕಟ್ಟಾಗಿ ನಡೆಸುವ ಸಂಬಂಧ ಸಕಲ ಭದ್ರತಾ ಕ್ರಮ ತೆಗೆದುಕೊಂಡಿದ್ದೇವೆ ಎಂದು ಸಚಿವರು ಹೇಳಿದರು. ಪ್ರತಿವರ್ಷ ಪರೀಕ್ಷೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಿರ್ವಹಣೆ ಮಾಡಲಾಗುತ್ತಿತ್ತು. ಪ್ರಸಕ್ತ ಸಾಲಿನಿಂದ 32 ಶೈಕ್ಷಣಿಕ ಜಿಲ್ಲೆಗಳಲ್ಲೂ ಈ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಲಿದ್ದೇವೆ ಎಂದು ಹೇಳಿದರು.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮರ್‌ ಕುಮಾರ್‌ ಪಾಂಡೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಕೆ.ಜಿ. ಜಗದೀಶ್‌, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ, ಪಿಯು ಇಲಾಖೆ ನಿರ್ದೇಶಕಿ ಕನಕವಲ್ಲಿ ಉಪಸ್ಥಿತರಿದ್ದರು.

ಅಕ್ರಮ ತಡೆಗೆ ನಿಗಾ
ಪರೀಕ್ಷಾ ಅಕ್ರಮ ತಡೆ ಯುವ ನಿಟ್ಟಿನಲ್ಲಿ ಸೈಬರ್‌, ಟ್ಯೂಷನ್‌ ಕೇಂದ್ರ ಮತ್ತು ಜೆರಾಕ್ಸ್‌ ಮಳಿಗೆಗಳ ಮೇಲೆ ವಿಶೇಷ ನಿಗಾ ಇರಿಸ ಲಾಗುತ್ತದೆ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ. ಪರೀಕ್ಷಾ ಭದ್ರತೆ ಸಂಬಂಧಿಸಿದಂತೆ ಶುಕ್ರವಾರ ಸಭೆ ನಡೆಸಿದ ಅವರು, ಈ ಹಿಂದಿನ ಪ್ರಕರಣಗಳನ್ನು ಆಧರಿಸಿ ಈಗಾಗಲೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ವದಂತಿ ಹಬ್ಬಿಸುವವರ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ಪೊಲೀಸ್‌ ಇಲಾಖೆಯ ಜತೆ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳಲಾಗುತ್ತದೆ ಎಂದರು.ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರ ಸಹಿತ ಯಾರೂ ಪರೀಕ್ಷಾ ಕೇಂದ್ರ ವ್ಯಾಪ್ತಿ ಯಲ್ಲಿ ಮೊಬೈಲ್‌ ಬಳಸುವಂತಿಲ್ಲ ಎಂದರು.

6.80 ಲಕ್ಷ ವಿದ್ಯಾರ್ಥಿಗಳು
ಪ್ರಸಕ್ತ ಸಾಲಿನಲ್ಲಿ 6,80,498 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಎದು ರಿಸ ಲಿದ್ದಾರೆ. ಇದರಲ್ಲಿ 5,61,530 ಹೊಸಬರು, 90,992 ಪುನರಾವರ್ತಿತ ಅಭ್ಯರ್ಥಿ ಗಳು ಮತ್ತು 27,976 ಖಾಸಗಿ ಅಭ್ಯರ್ಥಿಗಳು. ರಾಜ್ಯದ 1,016 ಕೇಂದ್ರಗಳಲ್ಲಿ ಪರೀಕ್ಷೆ ನಡೆಯ ಲಿದೆ. ಪರೀಕ್ಷೆಗೆ ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಸರಕಾರದಿಂದ ಕ್ರಮ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳ ಹಿತ ಕಾಪಾಡಲು ಸರಕಾರ ಬದ್ಧವಾಗಿದೆ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ಹಿಂದಿನ ಪ್ರಶ್ನೆ ಪತ್ರಿಕೆಗಳಿಗೆ 2020 ಎಂದು ವರ್ಷ ಬದ ಲಾವಣೆ ಮಾಡಿ ಸಾಮಾ ಜಿಕ ಜಾಲತಾಣ ಮೊದಲಾದ ಕಡೆ ಹರಿಬಿಟ್ಟು, ವಿದ್ಯಾರ್ಥಿ ಗಳಲ್ಲಿ ಭಯ ಹುಟ್ಟಿಸುವವರ ವಿರುದ್ಧ ಕಠಿನ ಕ್ರಮಕ್ಕೆ ಸೈಬರ್‌ ಪೊಲೀಸ್‌ ವಿಭಾಗದೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದೇವೆ.
– ಎಸ್‌. ಸುರೇಶ್‌ ಕುಮಾರ್‌
ಪ್ರಾ., ಪ್ರೌಢ ಶಿಕ್ಷಣ ಸಚಿವ

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.