ಸಿದ್ದು ಮಾತಿಗೆ ಸಿ.ಟಿ.ರವಿ ಆಕ್ರೋಶ
Team Udayavani, Dec 1, 2022, 11:00 PM IST
ಬೆಂಗಳೂರು: ಮೈಸೂರಿನಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಕುರಿತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತುಗಳಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶ ಭಕ್ತರನ್ನು ಹುಟ್ಟುಹಾಕುತ್ತಿರುವ ಸಂಸ್ಥೆ ಆರ್‌ಎಸ್‌ಎಸ್ ಅಲ್ಲ ಎಂದು ಹೇಳುವ ಮೂಲಕ ಅವರು ತಮ್ಮ ಅಜ್ಞಾನವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಮಾತ್ರ ಅಕ್ಷಮ್ಯ. ನಮ್ಮ ಸಾಂಸ್ಕೃತಿಕ ಹಿರಿಮೆ ಮತ್ತು ಭಾರತದ ಶ್ರೀಮಂತ ಪರಂಪರೆಯ ಬಗ್ಗೆ ಇವತ್ತು ದೇಶದ ಜನ ಅರಿತಿದ್ದಾರೆ ಎಂದರೆ ಅದಕ್ಕೆ ಆರ್‌ಎಸ್‌ಎಸ್ ಕಾರಣ ಎಂದು ಹೇಳಿದ್ದಾರೆ.
ಭಾರತೀಯ ಸಂಸ್ಕೃತಿ ಪರಂಪರೆ ಮತ್ತು ಹಿಂದುತ್ವದ ವಿಚಾರದ ಬಗ್ಗೆ ಸದಾ ಭಯಪಡುವ ಸಿದ್ದರಾಮಯ್ಯನವರಿಗೆ ಈಗ ತಮ್ಮ ರಾಜಕೀಯ ಭವಿಷ್ಯ ಅಂತ್ಯವಾಗುತ್ತಾ ಇದೆ ಎಂಬುದು ಗಮನಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿದ್ದಾಗಲೇ ಚುನಾವಣೆ ಗೆಲ್ಲಲಾಗದ ಅವರು ಈಗ ಇಡೀ ರಾಜ್ಯದಲ್ಲೇ ಒಂದು ಕ್ಷೇತ್ರಕ್ಕಾಗಿ ದುರ್ಬೀನು ಹಿಡಿದು ಹುಡುಕುವ ಸ್ಥಿತಿಗೆ ತಲುಪಿದ್ದಾರೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಸಿದ್ದರಾಮಯ್ಯನವರಿಗೆ ಮೂಗುದಾರ ಹಾಕಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ತುಳಿದ ಖರ್ಗೆಯವರೂ ಈಗ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಹಾಗಾಗಿ ಕಾಂಗ್ರೆಸ್‌ನಲ್ಲಿ ಅವರಿಗೆ ಕಾಲಿಟ್ಟಲ್ಲೆಲ್ಲಾ ಮುಳ್ಳೇ ಎಂದು ಹೇಳಿದ್ದಾರೆ.
ಸಮಾಜವಾದದ ಹೆಸರೇಳಿಕೊಂಡು ಮಜಾವಾದಿಯಾಗಿ ಅಧಿಕಾರಕ್ಕಾಗಿ ಗಾಳಿ ಬಂದ ಕಡೆಗೆ ಛತ್ರಿ ಹಿಡಿಯುವ ನಿಮ್ಮಂತ ಜನರಿಗೆ ಆರ್‌ಎಸ್‌ಎಸ್ ಅರ್ಥವಾಗುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.