BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ
ತಿಥಾಲ್ ಬೀಚ್ ಗೆ ಪ್ರವಾಸಿಗರು ತೆರಳದಂತೆ ಜೂನ್ 14ರವರೆಗೆ ನಿರ್ಬಂಧ
Team Udayavani, Jun 10, 2023, 11:49 AM IST
ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಈ ವರ್ಷದ ಮೊದಲ ಚಂಡಮಾರುತ “ಬಿಪರ್ ಜಾಯ್” ಮುಂದಿನ 24 ಗಂಟೆಗಳಲ್ಲಿ ಭಾರೀ ತೀವ್ರಗತಿಯಲ್ಲಿ ಉತ್ತರ ಈಶಾನ್ಯ ಭಾಗದಲ್ಲಿ ಬಡಿದಪ್ಪಳಿಸುವ ಸಾಧ್ಯತೆ ಇದ್ದಿರುವುದಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು
ಮುಂದಿನ 24ಗಂಟೆಯಲ್ಲಿ ಬಿಪರ್ ಜಾಯ್ ಚಂಡಮಾರುತವು ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು, ಇದರ ಪರಿಣಾಮ ಭಾರೀ ಮಳೆ ಸುರಿಯಲಿದೆ. ಅಲ್ಲದೇ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶದಲ್ಲಿ ಭಾರೀ ಗಾಳಿ ಬೀಸಲಿದೆ ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.
ಪ್ರಬಲ ಚಂಡಮಾರುತ ಬೀಸಲಿರುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯಾಗಿ ಗುಜರಾತ್ ನ ಜನಪ್ರಿಯ ಪ್ರವಾಸಿ ತಾಣವಾದ ವಲ್ಸಾಡ್ ಅರಬ್ಬಿ ಸಮುದ್ರ ಪ್ರದೇಶದಲ್ಲಿನ ತಿಥಾಲ್ ಬೀಚ್ ಗೆ ಪ್ರವಾಸಿಗರು ತೆರಳದಂತೆ ಜೂನ್ 14ರವರೆಗೆ ನಿರ್ಬಂಧ ವಿಧಿಸಲಾಗಿದೆ.
ಕರಾವಳಿ ಪ್ರದೇಶದಲ್ಲಿರುವ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ ಎಂದು ಐಎಂಡಿ ತಿಳಿಸಿದೆ. ಒಂದು ವೇಳೆ ಅಗತ್ಯ ಬಿದ್ದರೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ವಲ್ಸಾಡ್ ತಹಸೀಲ್ದಾರ್ ಟಿಸಿ ಪಟೇಲ್ ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ಕರ್ನಾಟಕ, ಕೇರಳ, ಗುಜರಾತ್ ಮತ್ತು ಲಕ್ಷದ್ವೀಪ ಕರಾವಳಿ ಪ್ರದೇಶದಲ್ಲಿನ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದ್ದು, ಕೇರಳದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.