ಬೆಳೆನಷ್ಟಕ್ಕೆ ಪ್ರತಿ ಎಕರೆಗೆ 10 ಸಾವಿರ ರೂ. ಪರಿಹಾರಕ್ಕೆ ಡಿಕೆಶಿ ಆಗ್ರಹ
Team Udayavani, Nov 24, 2021, 11:30 PM IST
ಬೆಂಗಳೂರು : ಮಳೆಹಾನಿಯಿಂದ ಉಂಟಾಗಿರುವ ಬೆಳೆನಷ್ಟಕ್ಕೆ ಪ್ರತಿ ಎಕರೆಗೆ ಹತ್ತು ಸಾವಿರ ರೂ. ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಅನ್ನದಾತ ಅನಾಥನಾಗಿದ್ದಾನೆ. ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರ ಬೆಳೆ ಜಮೀನಿನಲ್ಲೇ ನೀರು ಪಾಲಾಗಿದೆ. ಸರ್ಕಾರ ಪರಿಹಾರ ವಿಚಾರದಲ್ಲಿ ಮೀನಾ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.
ಲಕ್ಷಾಂತರ ಹೆಕ್ಟೇರ್ ನಲ್ಲಿ ಬೆಳೆದ ಭತ್ತ, ರಾಗಿ, ಮೆಕ್ಕೆಜೋಳ, ತರಕಾರಿ, ಹಣ್ಣು, ಕಾಫಿ ಮತ್ತಿತರ ಬೆಳೆಗಳು ಕಟಾವಿನ ಸಮಯದಲ್ಲಿ ಮಳೆಯಿಂದಾಗಿ ಕೊಳೆಯುತ್ತಿವೆ. ಈ ವರ್ಷದ ಮುಂಗಾರು ವೇಳೆ ಬಂದ ನೆರೆಗೆ ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಪರಿಹಾರ ಇನ್ನೂ ರೈತರಿಗೆ ಸಿಕ್ಕಿಲ್ಲ ಎಂದು ದೂರಿದರು.
ಕೋವಿಡ್ ಸಮಯದಲ್ಲಿ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಬಿಜೆಪಿ ಸರ್ಕಾರ ರೈತರನ್ನು ನಡುನೀರಲ್ಲಿ ಕೈಬಿಟ್ಟಿತ್ತು.ಕಳೆದ ಮೂರು ವಷರಗಳಿಂದ ನಿರಂತರ ನೆರೆ ಬಂದರೂ ಸರಿಯಾಗಿ ಪರಿಹಾರ ನೀಡದೆ ರೈತರ ಜೀವ ಹಿಂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರಿಗೆ ಅನ್ಯಾಯ
ಪ್ರಕೃತಿ ವಿಕೋಪದಿಂದ ಬೆಳೆ ಹಾನಿಯಾದರೆ ರೈತರಿಗೆ ನೆರವಾಗಲು ಫಸಲ್ ಭಿಮಾ ಯೋಜನೆ ಜಾರಿಗೆ ತಂದಿದ್ದು, ಅದು ರೈತರಿಗೆ ನ್ಯಾಯ ಒದಗಿಸುವ ಬದಲು ಅನ್ಯಾಯ ಮಾಡುತ್ತಿದೆ.ಈ ಯೋಜನೆಯಲ್ಲಿ ರೈತ ಬೆಳೆ ವಿಮೆ ನೋಂದಣಿಗೆ ಕಾಲಮಿತಿ ನಿಗದಿ ಮಾಡಲಾಗಿದೆ. 45 ದಿನಗಳ ಒಳಗೆ ಪರಿಹಾರ ಸಿಗಬೇಕು. ಆದರೆ ಬೆಳೆ, ಪಹಣಿ, ಆಧಾರ್ ಸಂಖ್ಯೆ ಹೊಂದಾಣಿಕೆ ಇಲ್ಲ ಎಂಬ ತಾಂತ್ರಿಕ ಅಂಶಗಳ ನೆಪವೊಡ್ಡಿ ಪರಿಹಾರ ನಿರಾಕರಿಸಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ ; ಯುನೈಟೆಡ್ ಕಿಂಗ್‌ಡಮ್ ಸಂಸತ್ತಿನ ಒಳಗೆ ಮಕ್ಕಳಿಗೆ ನಿಷೇಧಕ್ಕೆ ಭಾರೀ ಆಕ್ರೋಶ
ಸರ್ಕಾರ ಬೆಳೆ ನಾಶ ಸಮೀಕ್ಷೆ, ಅಧ್ಯಯನ, ಸಭೆ ನಂತರ ಪರಿಹಾರ ಅಂತ ಕಾಲಹರಣ ಮಾಡಬಾರದು.ಬೆಳೆ ಹಾನಿ ಬಗ್ಗೆ ತಕ್ಷಣ ರೈತರಿಂದ ಅರ್ಜಿ ಆಹ್ವಾನಿಸಬೇಕು. ತಹಶೀಲ್ದಾರ್ ಮೂಲಕ ಸ್ವೀಕರಿಸಬೇಕು. ಅಧಿಕಾರಿಗಳನ್ನು ಕೂಡಲೇ ಸ್ಥಳಕ್ಕೆ ಕಳುಹಿಸಿ, ವಿಡಿಯೋ, ಫೋಟೋ ತೆಗೆಸಿ, 30 ದಿನದೊಳಗೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಮುಗಿಸಲು ಸಿ.ಟಿ. ರವಿ ಸಾಕು
ಸಿ.ಟಿ. ರವಿ ದೇಶದ ಇಮೇಜ್ ಗೆ ಧಕ್ಕೆ ತರುತ್ತಿದ್ದಾರೆ. ಅವರನ್ನು ಬಿಜೆಪಿ ಯಾಕೆ ಇಟ್ಟುಕೊಂಡಿದೆಯೋ ಗೊತ್ತಿಲ್ಲ. ಬಿಜೆಪಿ ಮುಗಿಸೋಕೆ ಅವರೊಬ್ಬರೇ ಸಾಕು. ಅವರು ಬಹಳ ಒಳ್ಳೊಳ್ಳೆ ದೇಶಪ್ರೇಮಿ ಸ್ಟೇಟ್ ಮೆಂಟ್ ಕೊಡ್ತಿದ್ದಾರೆ. ಅದರಿಂದ ಬಿಜೆಪಿಗೂ ಡ್ಯಾಮೇಜ್ ಆಗ್ತಿದೆ. ಅದಕ್ಕೆ ನಾವೂ ಸುಮ್ಮನೆ ಇದ್ದೇವೆ.
– ಡಿ.ಕೆ.ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ
Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
ICC ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.