![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Mar 12, 2020, 8:58 PM IST
ಬೆಂಗಳೂರು: ಅನೇಕ ತಾಂತ್ರಿಕ ಸಮಸ್ಯೆಗಳಿಂದಾಗಿ ರೈತರಿಗೆ ಕೃಷಿ ಚುಟವಟಿಕೆಗಳಿಗಾಗಿ ನಿತ್ಯ 9 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮೇಲ್ಮನೆಯಲ್ಲಿ ಕಾಂಗ್ರೆಸ್ ಸದಸ್ಯ ಮಾನೆ ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪ ಅವರು, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳು ಅಧಿಕ ವಿದ್ಯುತ್ ಹೊರೆ ಮತ್ತು ಇತರ ಕಾರಣಗಳಿಂದ ವಿಫಲವಾಗುತ್ತಿರುವುದು ವಿದ್ಯುತ್ ಸರಬರಾಜು ಕಂಪೆನಿಗಳ ಗಮನಕ್ಕೆ ಬಂದಿದೆ. ಅಲ್ಲದೆ ಕೆಲವರು 7ಎಚ್‌ಪಿ ಬದಲು 15 ಎಚ್‌ಪಿ ಪಂಪ್‌ಸೆಟ್‌ಗಳನ್ನು ಬಳಕೆ ಮಾಡುತ್ತಿರುವುದು ಟ್ರಾನ್ಸ್‌ಫಾರ್ಮರ್ ಸಮಸ್ಯೆಗೆ ಒಂದು ಕಾರಣವಾಗಿದೆ ಎಂದರು.
ಸರಕಾರ ಪ್ರತಿ ದಿನ 7 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಲ್ಪಿಸಲಿದೆ. ಆದರೆ 120 ಕಡೆ ವಿದ್ಯುತ್ ಸಮಸ್ಯೆ ಇರುವುದು ನಿಜ. ಈ ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.