ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿ ಹತ್ಯೆ ಪ್ರಕರಣ: ಬೈಕ್‌ ದೂರದಲ್ಲಿಟ್ಟು ಬಂದಿದ್ದ ದುಷ್ಕರ್ಮಿ?

Team Udayavani, Feb 4, 2023, 10:33 PM IST

ಜ್ಯುವೆಲ್ಲರಿ ಅಂಗಡಿ ಸಿಬಂದಿ ಹತ್ಯೆ ಪ್ರಕರಣಬೈಕ್‌ ದೂರದಲ್ಲಿಟ್ಟು ಬಂದಿದ್ದ ದುಷ್ಕರ್ಮಿ?

ಮಂಗಳೂರು: ನಗರದ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಶುಕ್ರವಾರ ಹಾಡಹಗಲೇ ಸಿಬಂದಿಯನ್ನು ಹತ್ಯೆಗೈದ ಆರೋಪಿಯ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ.

ಅಕ್ಕಪಕ್ಕದ ಅಂಗಡಿಗಳು ಸೇರಿದಂತೆ ಹಲವಾರು ಕಟ್ಟಡಗಳ ಸಿಸಿ ಕೆಮರಾ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿ ಕೃತ್ಯ ನಡೆಸಿದ ಬಳಿಕ ತುಂಬಾ ದೂರದವರೆಗೂ ಓಡಿ ಹೋಗಿರುವ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಬೈಕ್‌ನ್ನು ಸಾಕಷ್ಟು ದೂರದಲ್ಲಿ ನಿಲ್ಲಿಸಿ ಓರ್ವ ಮಾತ್ರ ಜುವೆಲರಿ ಅಂಗಡಿಯೊಳಗೆ ನುಗ್ಗಿ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆಯಾದರೂ ದುಷ್ಕಮಿಗಳು ಸಂಚರಿಸಿರುವ ವಾಹನ ಯಾವುದು ಎಂಬುದು ಇನ್ನು ಕೂಡ ಸ್ಪಷ್ಟವಾಗಿ ಗೊತ್ತಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮೊದಲೇ ಯೋಜನೆ ರೂಪಿಸಿದ್ದರು!
ಕೃತ್ಯಕ್ಕೂ ಮೊದಲು ಇಬ್ಬರು ದುಷ್ಕರ್ಮಿಗಳು ಬೈಕ್‌ ಅಥವಾ ಬೇರೆ ವಾಹನದಲ್ಲಿ ಅಂಗಡಿ ಪರಿಸರಕ್ಕೆ ಬಂದು ಸುತ್ತು ಹೊಡೆದು ಹೋಗಿದ್ದರು. ಸಾಕಷ್ಟು ಪೂರ್ವಯೋಜಿತವಾಗಿಯೇ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಅಂಗಡಿ ಮಾಲಕರು ಪ್ರತೀದಿನ ಒಂದೇ ಸಮಯಕ್ಕೆ ಊಟಕ್ಕೆ ಹೋಗುತ್ತಿದ್ದರು. ಆ ವೇಳೆ ಸಿಬಂದಿ ರಾಘವೇಂದ್ರ ಮಾತ್ರ ಇರುತ್ತಿದ್ದರು. ಇದನ್ನು ಕೂಡ ಹಲವು ದಿನಗಳಿಂದ ಗಮನಿಸಿಯೇ ದುಷ್ಕರ್ಮಿಗಳು ಶುಕ್ರವಾರ ಕೃತ್ಯ ಎಸಗಿರುವ ಸಾಧ್ಯತೆ ಇದೆ.

ಆಟೋದ ಮೇಲೂ ಸಂಶಯ
ದುಷ್ಕರ್ಮಿ ಬೈಕ್‌ನಲ್ಲಿ ಬಂದಿದ್ದನೆ ಅಥವಾ ಬೇರೆ ಯಾವುದೇ ವಾಹನದಲ್ಲಿ ಬಂದಿದ್ದನೆ ಎಂಬುದು ಸ್ಪಷ್ಟವಾಗಿಲ್ಲ. ಸಿಸಿ ಕೆಮರಾದಲ್ಲಿ ದಾಖಲಾಗಿರುವ ಚಹರೆಯನ್ನು ಹೋಲುವ ಓರ್ವ ವ್ಯಕ್ತಿ ಆಟೋರಿಕ್ಷಾವನ್ನು ಏರಿರುವ ದೃಶ್ಯಗಳು ಕೂಡ ಪೊಲೀಸರಿಗೆ ಲಭಿಸಿದೆ. ವಾಹನ ಪತ್ತೆ ಪೊಲೀಸರಿಗೆ ಸವಾಲಾಗಿದೆ. ಅನುಮಾನಸ್ಪದ ಬೈಕೊಂದು ಸಂಚರಿಸುತ್ತಿರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದ್ದರೂ ಅದರ ನೋಂದಣಿ ಸಂಖ್ಯೆ ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

3 ಸರ ದರೋಡೆ
ಘಟನೆ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಲಾಗಿದೆ ಎಂದು ಮಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ದುಷ್ಕರ್ಮಿ ಮಾಸ್ಕ್, ಕ್ಯಾಪ್‌ ಮತ್ತು ಜರ್ಕಿನ್‌ ಧರಿಸಿದ್ದ. ಆತ ಕೃತ್ಯ ನಡೆಸುವಾಗಲೂ ಅದನ್ನು ತೆಗೆದಿರಲಿಲ್ಲ . ಅಲ್ಲದೆ ಜುವೆಲರಿ ಅಂಗಡಿಯೊಳಗಿನ ಸಿಸಿ ಕೆಮರಾದ ದೃಶ್ಯ ಸಮರ್ಪಕವಾಗಿ ದೊರೆಯದೇ ಇರುವುದು ಕೂಡ ತನಿಖೆಗೆ ತೊಡಕಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬಡಕುಟುಂಬದ ಅಮಾಯಕ
ದುಷ್ಕರ್ಮಿಗಳಿಂದ ಹತ್ಯೆಯಾದ ಜುವೆಲರಿ ಅಂಗಡಿಯ ಸಿಬಂದಿ ರಾಘವ ಆಚಾರ್ಯ (55) ಅವರದ್ದು ಬಡ ಕುಟುಂಬ. ಅತ್ತಾವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಹಲವು ವರ್ಷಗಳಿಂದ ವಿವಿಧೆಡೆ ಚಿನ್ನದ ಅಂಗಡಿಗಳಲ್ಲಿ ಕೆಲಸ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಳೆದ 7 ವರ್ಷಗಳಿಂದ ಕೃತ್ಯ ನಡೆದ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ರಾಘವ ಆಚಾರ್ಯ ಅವರ ಓರ್ವ ಪುತ್ರ ಊರಿನಲ್ಲಿ ಸರಿಯಾದ ಕೆಲಸ ಸಿಗದೆ ಇತ್ತೀಚೆಗಷ್ಟೆ ದುಬಾೖಗೆ ಕೆಲಸ ಹುಡುಕಿಕೊಂಡು ಹೋಗಿದ್ದರು. ಇನ್ನೋರ್ವ ಪುತ್ರ ಕೂಡ ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಪುತ್ರಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ರಾಘವ ಅವರ ಪತ್ನಿ ಬೇಕರಿಯಲ್ಲಿ ಕೆಲಸ ಮಾಡುತ್ತಾ ಕುಟುಂಬಕ್ಕೆ ಹೆಗಲು ಕೊಡುತ್ತಿದ್ದಾರೆ. ಇದೀಗ ರಾಘವ ಅವರ ಹತ್ಯೆಯಿಂದ ಕುಟುಂಬ ಕಂಗಾಲಾಗಿದೆ.

ಇದನ್ನೂ ಓದಿ: 2019ರ ಜಾಮಿಯಾ ಮಿಲಿಯಾ ಗಲಭೆ : ಶರ್ಜೀಲ್‌ ಇಮಾಮ್‌ಗೆ ಜಾಮೀನು

ಟಾಪ್ ನ್ಯೂಸ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.