ದಕ್ಷಿಣ ಕನ್ನಡ: ಬೆಳಗ್ಗೆಯೇ ಪ್ರಥಮ ಪಿಯುಸಿ ಪರೀಕ್ಷೆ
Team Udayavani, Feb 14, 2022, 5:20 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷಾ ಸಮಯ ಬದಲಿಸಲು ಪಿಯು ಇಲಾಖೆ ಚಿಂತನೆ ನಡೆಸಿದ್ದು, ಮಧ್ಯಾಹ್ನದ ಬಳಿಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಬೆಳಗ್ಗೆ ನಡೆಸಲು ಸಿದ್ಧತೆ ಆರಂಭವಾಗಿದೆ.
ಪರೀಕ್ಷಾ ವೇಳಾಪಟ್ಟಿ, ಪ್ರಶ್ನೆಪತ್ರಿಕೆ ಸಿದ್ಧತೆ ಸಹಿತ ಪ್ರತಿಯೊಂದು ವಿಚಾರವನ್ನು ಜಿಲ್ಲಾ ಮಟ್ಟದಲ್ಲಿಯೇ ನಿರ್ಧರಿಸುವ ಸ್ವಾತಂತ್ರ್ಯವನ್ನು ಜಿಲ್ಲಾಮಟ್ಟದ ಉಪನಿರ್ದೇಶಕರಿಗೆ ಈ ಬಾರಿ ನೀಡಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆಯನ್ನು ಇಲಾಖೆ ಮೊದಲ ಬಾರಿಗೆ ಮಧ್ಯಾಹ್ನದ ಬಳಿಕ ನಡೆಸಲು ಸೂಚಿಸಿತ್ತು.
ಆದರೆ ದ.ಕ. ಪ್ರಾಂಶುಪಾಲರ ಅಸೋಸಿಯೇಶನ್ ಮತ್ತು ವಿದ್ಯಾರ್ಥಿಗಳ ಹೆತ್ತವರು ಪರೀಕ್ಷೆಯನ್ನು ಬೆಳಗ್ಗೆ ನಡೆಸಲು ಕೋರಿದ್ದರು. ಅದರಲ್ಲೂ ಎಸೆಸೆಲ್ಸಿ ಪರೀಕ್ಷೆಯ ವಿರಾಮದ ಸಮಯದಲ್ಲಿ ನಡೆಸುವಂತೆ ಇಲಾಖೆಗೆ ಮನವಿ ಮಾಡಿದ್ದರು. ಈಗ ಇಲಾಖೆ ನಿರ್ದೇಶಕರು ಕೂಡ ಬೆಳಗ್ಗೆಯೇ ಪರೀಕ್ಷೆ ನಡೆಸುವ ಬಗ್ಗೆ ಸೂಚನೆ ನೀಡಿದ್ದು, ಅಧಿಕೃತ ವೇಳಾಪಟ್ಟಿ ಪ್ರಕಟವಾಗಲಿದೆ.
ದ.ಕ. ಪಿಯು ಇಲಾಖೆ ಉಪ ನಿರ್ದೇಶಕ ಜಯಣ್ಣ ಮಾತನಾಡಿ, ತಾತ್ಕಾಲಿಕ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಎಲ್ಲ ಪರೀಕ್ಷೆಗಳನ್ನು ಎಸೆಸೆಲ್ಸಿ ಪರೀಕ್ಷೆಗಳು ನಡೆಯದ ದಿನಗಳಲ್ಲೇ, ಬೆಳಗ್ಗೆ 9.30ರಿಂದ 12.45ರ ವರೆಗೆ ನಡೆಯುವ ಬಗ್ಗೆ ಚಿಂತಿಸಲಾಗಿದೆ. ಈ ಬಗ್ಗೆ ಅಧಿಕೃತ ತೀರ್ಮಾನ ಶೀಘ್ರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.