Danger Dengue: ಡೆಂಗ್ಯೂವನ್ನು “ಸಾಂಕ್ರಾಮಿಕ ಕಾಯಿಲೆ” ಎಂದು ಘೋಷಿಸಿದ ರಾಜ್ಯ ಸರಕಾರ
ಹುಷಾರ್.. ಇನ್ನು ಮುಂದೆ ಸ್ವಚ್ಛತೆ ಕಾಪಾಡದವರಿಗೆ ಬೀಳುತ್ತೆ ದಂಡದ ಬರೆ, ದಂಡ ಅಸ್ತ್ರ ಪ್ರಯೋಗಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ
Team Udayavani, Sep 3, 2024, 10:04 PM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗಿ ಜನರಲ್ಲಿ ಆತಂಕ ಮೂಡಿಸುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪಣತೊಟ್ಟಿದ್ದು, ರೋಗ ಹತೋಟಿಗೆ ತರಲು ಡೆಂಗ್ಯೂ (Dengue) ವನ್ನು “ಸಾಂಕ್ರಾಮಿಕ ಕಾಯಿಲೆ” (Epidemic) ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಈ ಬಗ್ಗೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆ. 31ರ ಕರ್ನಾಟಕ ಗೆಜೆಟ್ನಲ್ಲಿ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ನೈರ್ಮಲ್ಯ (ಸ್ವಚ್ಛತೆ) ಕಾಪಾಡದವರಿಗೆ ದಂಡ ಬೀಳಲಿದೆ ಎಂದು ತಿಳಿಸಿದೆ. ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಬಹುದಾಗಿದೆ.
ಏನೆಲ್ಲಾ ನಿಯಮಗಳು ಅನ್ವಯ:
* ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.
* ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.
* ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟಿಸ್ ನೀಡಬೇಕು.
24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ.
* ಸ್ವತ್ತಿನ ಮಾಲೀಕರು ನಿಗಾ ವಹಿಸಿದಿದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
ರಾಸಾಯನಿಕ ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರು ನೀಡುವಂತೆ ಕ್ರಮ ವಹಿಸಬೇಕು.
* ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲ್ಲಿ ನಿಂತ ನೀರು ತೆರವುಗೊಳಿಸಲು ಆಯಾ ಮಾಲೀಕರೇ ಹೊಣೆ.
Due to the surge in dengue cases, the Government of Karnataka has declared dengue an epidemic disease in the state. To enhance prevention efforts, the following regulations are being enforced:
•All landowners, occupiers and builders must take necessary measures to prevent… pic.twitter.com/cr58bbroZb— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 3, 2024
ಸ್ವಚ್ಛತೆ ಕಾಪಾಡದವರಿಗೆ ದಂಡದ ಬರೆ:
ಮನೆಗಳಿಗೆ ಹೊರಾಂಗಣ ಹಾಗೂ ಒಳಾಂಗಣದಲ್ಲಿ ನಿಯಮ ಉಲ್ಲಂಘಿಸಿದರೆ – 400 ರೂ. ದಂಡ – ನಗರ ಪ್ರದೇಶ ಗ್ರಾಮಾಂತರದಲ್ಲಿ ಓಳಾಂಗಣ ಹಾಗೂ ಹೊರಾಂಗಣಕ್ಕೆ 200 ರೂಪಾಯಿ ದಂಡ.
ರೆಸ್ಟೋರೆಂಟ್ , ಹೋಟೆಲ್, ತಿನಿಸುಗಳು, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ, ಮಾರ್ಕೆಟ್, ಪಾರ್ಕ್, ಮಾಲ್, ಸೂಪರ್ ಮಾರ್ಕೆಟ್ , ತೆಂಗಿನಕಾಯಿ ಮಾರಾಟಗಾರರು, ಕಾರ್ಖಾನೆ, ಕೈಗಾರಿಕೆ, ಥಿಯೇಟರ್, ಶಾಲೆಗಳು, ವಾಣಿಜ್ಯ ಸಂಸ್ಥೆಗಳು, ಕನ್ವೆಷನ್ ಹಾಲ್, ಇವುಗಳಲ್ಲಿ ನಿಯಮ ಪಾಲಿಸದಿದ್ದರೆ ನಗರ ಪ್ರದೇಶದಲ್ಲಿ 1 ಸಾವಿರ ರೂ. ದಂಡ.
ಗ್ರಾಮಾಂತರ ಭಾಗದಲ್ಲಿ 500 ರೂಪಾಯಿ ದಂಡ. ತೆರೆದ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿದರೆ – ನಗರದ ಪ್ರದೇಶದಲ್ಲಿ 2 ಸಾವಿರ ರೂಪಾಯಿ ದಂಡ, ಗ್ರಾಮಾಂತರದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.
ಡೆಂಗ್ಯೂ ಹತೋಟಿಗೆ ತರಲು ಕಾನೂನು ಅಸ್ತ್ರ : ಸಚಿವ ದಿನೇಶ್
ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಡೆಂಗ್ಯೂ ಸಾಂಕ್ರಾ ಮಿಕ ರೋಗವನ್ನಾಗಿ ಘೋಷಿಸುವುದರ ಜತೆಗೆ ನಿಯಂತ್ರಣ ಮಾರ್ಗಸೂಚಿ ಪಾಲಿಸದವರಿಗೆ ದಂಡ ವಿಧಿಸಲಾಗುವುದು.
ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸೊಳ್ಳೆ ಉತ್ಪತ್ತಿ ತಾಣಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕಾನೂ ನಿನ ಅಸ್ತ್ರ ಬಳಸಬಹುದಾಗಿದೆ. ದಂಡ ವಿಧಿಸುವುದಕ್ಕಿಂತ ಜನರು ಡೆಂಗ್ಯೂ ವಿಚಾರದಲ್ಲಿ ಜವಾ ಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿ ಸಲಿ ಎಂಬ ಉದ್ದೇಶದಿಂದ ರಾಜ್ಯ ಸರಕಾರ ಈ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಜಿಲ್ಲಾಧಿಕಾರಿಗಳಿಗೆ ನಿಯಮ ಜಾರಿಗೊಳಿಸುವ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.
“ಈ ಹಿಂದೆ ಬೆಂಗಳೂರು, ಮಂಗಳೂರು ಬಿಟ್ಟರೆ ರಾಜ್ಯದ ಬೇರೆ ಪ್ರದೇಶಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇರಲಿಲ್ಲ. ಆದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರು ಡೆಂಗ್ಯೂ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಮುನ್ನೆಚ್ಚರಿಕೆ ವಹಿಸಲಿ ಎಂಬ ಉದ್ದೇಶ ನಮ್ಮದು.” -ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.