Danger Dengue ಹೆಚ್ಚಿದ ಹಾವಳಿ: ಒಂದೇ ದಿನ 197 ಕೇಸು, 1 ಸಾವು
ಒಟ್ಟು ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆ, 1 ವರ್ಷದೊಳಗಿನ ಮಗುವಿನಲ್ಲೂ ಪತ್ತೆ, ಬೆಂಗಳೂರಿನಲ್ಲಿ 2,083ಕ್ಕೆ ತಲುಪಿದ ಪ್ರಕರಣ
Team Udayavani, Jul 9, 2024, 7:35 AM IST
ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಒಂದೇ ದಿನ 197 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು ಮೈಸೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಆ ಮೂಲಕ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಜು. 8ರಂದು 892 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ ಹೊಸದಾಗಿ ಡೆಂಗ್ಯೂ ಪೀಡಿತರಾದವರಲ್ಲಿ 1 ವರ್ಷದೊಳಗಿನ ಒಂದು ಮಗುವಿನಲ್ಲಿ, 18 ವರ್ಷದೊಳಗಿನ 63 ಮಂದಿ, 18 ವರ್ಷ ಮೇಲ್ಪಟ್ಟ 133 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 46 ಡೆಂಗ್ಯೂ ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 95 ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 2083ಕ್ಕೆ ತಲುಪಿದೆ. ಉಳಿದಂತೆ ಚಿಕ್ಕಮಗಳೂರಿನಲ್ಲಿ 563, ಮೈಸೂರಿನಲ್ಲಿ 496, ಹಾವೇರಿಯಲ್ಲಿ 481, ಶಿವಮೊಗ್ಗದಲ್ಲಿ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಸನದಲ್ಲಿ 2, ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಹಾವೇರಿಯಲ್ಲಿ ತಲಾ ಒಬ್ಬರು ಡೆಂಗ್ಯೂಯಿಂದ ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 55712 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.