Danger Dengue: ಡೆಂಗ್ಯೂ ಪ್ರಕರಣಗಳ ಹೆಚ್ಚಳ; ಸ್ವಯಂ ಅರ್ಜಿ ದಾಖಲು
Team Udayavani, Jul 11, 2024, 12:27 AM IST
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಬುಧವಾರ ಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಈ ವಿಷಯ ಪ್ರಸ್ತಾವಿಸಿದರು.
ರಾಜಧಾನಿ ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿ ಸಾವುಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ಆಂಗ್ಲ ದಿನಪತ್ರಿಕೆಯೊಂದಕ್ಕೆ ರಾಯಚೂರಿನ ನಿವಾಸಿ ಎಚ್.ಕೆ. ವಿಜಯಕುಮಾರ್ ಜುಲೈ 9ರಂದು ಬರೆದಿರುವ ಸಂಪಾದಕರಿಗೆ ಪತ್ರ ಅಂಕಣ ಹಾಗೂ ಇತರ ಪತ್ರಿಕಾ ವರದಿಗಳನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು.
ಒಂದೇ ದಿನ 293 ಡೆಂಗ್ಯೂ ಪ್ರಕರಣ
ಬೆಂಗಳೂರು: ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಬುಧವಾರ 293 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ಡೆಂಗ್ಯೂ ಪತ್ತೆ ಸಂಬಂಧ 24 ಗಂಟೆಗಳ ಅವಧಿಯಲ್ಲಿ 1,874 ಪರೀಕ್ಷೆಗಳನ್ನು ನಡೆಸಲಾಗಿತ್ತು. ಹೊಸದಾಗಿ ಡೆಂಗ್ಯೂ ಪೀಡಿತರಾದವರಲ್ಲಿ ಇಬ್ಬರು ಒಂದು ವರ್ಷದೊಳಗಿನವರಾದರೆ, 101 ಮಂದಿ ಒಂದರಿಂದ 18 ವರ್ಷದೊಳಗಿನವರಾಗಿದ್ದಾರೆ. 190 ಮಂದಿ 18 ವರ್ಷ ಮೇಲ್ಪಟ್ಟವರಾಗಿದ್ದಾರೆ. ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 358 ಡೆಂಗ್ಯೂ ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗ್ಯೂಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ. ಡೆಂಗ್ಯೂ ಪೀಡಿತರಲ್ಲಿ ಈವರೆಗೆ 7 ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.