Danger Dengue; ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಅಗತ್ಯವಿಲ್ಲ: ಸಚಿವ ದಿನೇಶ್
ಹೆಚ್ಚು ಡೆಂಗ್ಯೂ ಇರುವಲ್ಲಿ ಫೀವರ್ ಕ್ಲಿನಿಕ್ , ಬೆಡ್, ಔಷಧ ಕೊರತೆಯಿಲ್ಲ
Team Udayavani, Jul 9, 2024, 7:14 AM IST
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ನಿಜ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ನಿರಂತರ ನಿಗಾ ವಹಿಸುತ್ತಿದ್ದು ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಬೆಡ್ ಅಥವಾ ಔಷಧ ಕೊರತೆಯಿಲ್ಲ. ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿ ತಿಳಿಸಿದೆ ಎಂದರು.
ಫೀವರ್ ಕ್ಲಿನಿಕ್
ಮಳೆಗಾಲವಾದ್ದರಿಂದ ಇನ್ನೂ 2 ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸಲಾಗುತ್ತಿದೆ.
ಹೆಚ್ಚು ಡೆಂಗ್ಯೂ ಪ್ರಕರಣ ಕಂಡುಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರು ಹೆಚ್ಚು ಜಾಗೃತರಾಗಿ ಎಚ್ಚರಿಕೆ ವಹಿಸುವುದೇ ಮುಖ್ಯ ಎಂದರು.
ಸೊಳ್ಳೆಗಿಂತ ವಿಪಕ್ಷ ನಾಯಕರ ಸುಳ್ಳುಗಳೇ ಹೆಚ್ಚು ಪ್ರಚಾರ
ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಕೊಳೆಗೇರಿ ಭೇಟಿ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ದಿನೇಶ್, ಅವರು (ಅಶ್ವತ್ಥನಾರಾಯಣ) ಕೊಳೆಗೇರಿಗಳಿಗೆ ಭೇಟಿ ಕೊಡಲಿ ಬೇಡ ಎನ್ನುವುದಿಲ್ಲ. ಆದರೆ ವಿಪಕ್ಷದವರು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆಡಳಿತ ಪಕ್ಷಕ್ಕೆ ಸಹಕರಿಸಬೇಕು. ಆದರೆ ಡೆಂಗ್ಯೂ ಹರಡುವ ಸೊಳ್ಳೆಗಳಿಗಿಂತ ವಿಪಕ್ಷ ನಾಯಕರ ಸುಳ್ಳುಗಳು ಹೆಚ್ಚು ಹರಡುತ್ತಿವೆ ಎಂದು ಬಿಜೆಪಿ ನಾಯಕರ ಹೇಳಿಕೆಗಳನ್ನು ಟೀಕಿಸಿದರು.
” ಸಂಸದ ಡಾ. ಸಿ.ಎನ್. ಮಂಜುನಾಥ್ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ನಾನು ಅವರ ಜತೆ ಮಾತನಾಡಿದ್ದೇನೆ. ಆ ರೀತಿಯ ಸಕಾರಾತ್ಮಕ ಚಿಂತನೆಗಳನ್ನು ವಿಪಕ್ಷಗಳು ಪ್ರದರ್ಶಿಸಲಿ.” – ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.