Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
ಯಡಿಯೂರಪ್ಪ ಅಭಿಮಾನಿಗಳ ಬಳಗದ ಹೆಸರಿನಲ್ಲಿ ಬಿ.ವೈ.ವಿಜಯೇಂದ್ರ ಬೆಂಬಲಿಗರಿಂದ ಶಕ್ತಿ ಪ್ರದರ್ಶನಕ್ಕೆ ಸಜ್ಜು
Team Udayavani, Dec 15, 2024, 7:23 PM IST
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನವನ್ನು 2025ರ ಫೆ. 27ರಂದು ದಾವಣಗೆರೆಯಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲು ಯಡಿಯೂರಪ್ಪ ಅಭಿಮಾನಿಗಳ ಬಳಗ ನಿರ್ಧರಿಸಿದೆ.
ರವಿವಾರ ನಗರದ ಹಳೆ ಪಿ.ಬಿ.ರಸ್ತೆಯ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದಾವಣಗೆರೆಯಲ್ಲಿ ಯಡಿಯೂರಪ್ಪ ಅವರ ಜನ್ಮದಿನ ಆಚರಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು, ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಜನ್ಮದಿನೋತ್ಸವ ಕಾರ್ಯಕ್ರಮಕ್ಕೆ ಸಮಿತಿ ರಚನೆ
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಫೆ.27ರಂದು ದಾವಣಗೆರೆಯಲ್ಲಿ ಯಡಿಯೂರಪ್ಪ ಜನ್ಮದಿನ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಯಡಿಯೂರಪ್ಪ ಅಭಿಮಾನಿಗಳ ಬಳಗದ ಹೆಸರಿನಲ್ಲಿ ಈ ಜನ್ಮದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತೆ. ಸಭೆ ಸೇರಿದ ಹತ್ತು ಜನರ ಒಂದು ಸಮಿತಿ ಮಾಡಲಾಗಿದೆ. ಈ ಸಮಿತಿ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ. ನಮ್ಮಲ್ಲಿ ಭಿನ್ನಮತವಿಲ್ಲ, ಮುಂದಿನ ಚುನಾವಣೆಯಲ್ಲಿ 140 ಸ್ಥಾನ ಗೆಲ್ತೇವೆ. ಸಭೆಯಲ್ಲಿ ದೆಹಲಿಗೆ ಹೋಗುವ ಬಗ್ಗೆ ಅಭಿಪ್ರಾಯ ತಿಳಿಸಲಾಗಿದೆ ಎಂದು ತಿಳಿಸಿದರು.
ವಿಜಯೇಂದ್ರ ಹೆಸರಲ್ಲಿ ಪೂಜೆ:
ಸಭೆಗೂ ಮೊದಲು ಮಾಜಿ ಶಾಸಕರು, ಮಾಜಿ ಸಚಿವರು ನಗರದ ಶ್ರೀ ದುಗ್ಗಮ್ಮ ದೇವಿ ದೇವಸ್ಥಾನಕ್ಕೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹರತಾಳು ಹಾಲಪ್ಪ ಇತರ ಮುಖಂಡರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಅನ್ವರ್ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.