Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

ಕುರಿಗಾಹಿಗಳಿಂದ ಪ್ರಕರಣ ಬೆಳಕಿಗೆ, ಪೊಲೀಸರು ಶವದ ಗುರುತು ಪತ್ತೆ ಹಚ್ಚಿದ್ದು ಹೇಗೆ?

Team Udayavani, Oct 22, 2024, 10:30 PM IST

DVG-1

ದಾವಣಗೆರೆ: ತಾಲೂಕಿನ ಕಡ್ಲೇಬಾಳು ಗ್ರಾಮದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಅಣಜಿ ಕೆರೆ ಬಳಿ ಅಸ್ಥಿಪಂಜರದ ರೂಪದಲ್ಲಿ ಪತ್ತೆಯಾಗಿದ್ದಾನೆ. ಕಡ್ಲೇಬಾಳು ಗ್ರಾಮದ ತಿಪ್ಪೇಶ(42) ಮೃತಪಟ್ಟವನು ಎಂಬುದನ್ನು ಗುರುತಿಸಲಾಗಿದೆ.

ತಿಪ್ಪೇಶ ಕಳೆದ 15 ದಿನದಿಂದ ನಾಪತ್ತೆಯಾಗಿದ್ದನು.‌ ಆ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ನಾಪತ್ತೆಯಾಗಿದ್ದ ದಿನ ತಿಪ್ಪೇಶ್ ತೆಗೆದುಕೊಂಡು ಹೋಗಿದ್ದ ಬೈಕ್‌ ಅಣಜಿ ಕೆರೆ ಏರಿಯ ಬದಿ ಪೊದೆಗಳ ಮಧ್ಯೆ ಪತ್ತೆಯಾಗಿದ್ದು, ತಿಪ್ಪೇಶ ಅಸ್ಥಿಪಂಜರದ ರೂಪದಲ್ಲಿ ಪತ್ತೆಯಾಗಿದ್ದಾನೆ. ಅಪಘಾತವೋ ಅಥವಾ ಯಾರಾದರೂ ಏನಾದರೂ ಮಾಡಿರಬಹುದಾ ಎಂಬುದು ತನಿಖೆ ನಂತರವೇ ಗೊತ್ತಾಗಲಿದೆ. ಕುರಿಗಾಹಿಗಳು ಅಸ್ಥಿಪಂಜರ ನೋಡಿದ ನಂತರವೇ ತಿಪ್ಪೇಶ ಮೃತಪಟ್ಟಿರುವುದು ತಿಳಿದು ಬಂದಿದೆ.

ಪೊಲೀಸರು ಶವ ಗುರುತಿಸಿದ್ದು ಹೇಗೆ ? 
ದಾವಣಗೆರೆ ಗ್ರಾಮಾಂತರ ವೃತ್ತ ನಿರೀಕ್ಷಕ ಕಿರಣಕುಮಾರ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಬೈಕ್ ನಂಬರ್ ಪರಿಶೀಲಿಸಿದಾಗ ಅದು ಕಡ್ಲೇಬಾಳು ವಿಳಾಸ ತೋರಿಸಿದೆ. ಗ್ರಾಮಸ್ಥರಿಗೆ ವಿಚಾರಿಸಿದಾಗ, ಕಡ್ಲೆಬಾಳು ಗ್ರಾಮದ ನಾಪತ್ತೆಯಾಗಿದ್ದ ತಿಪ್ಪೇಶನ ವಿಚಾರ ಗೊತ್ತಾಗಿದೆ. ಗ್ರಾಮಸ್ಥರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಶವವನ್ನು ಗುರುತಿಸಿದ್ದಾರೆ. ಸದ್ಯಕ್ಕೆ ಕಡ್ಡೇಬಾಳು ಗ್ರಾಮದ ತಿಪ್ಪೇಶ ಸಾವಿನ ವಿಚಾರ ನಿಗೂಢವಾಗಿದೆ. ಇದು ಅಪಘಾತದಿಂದವಾದ ಸಾವೇ ಅಥವಾ ಯಾರಾದರೂ ಕೊಲೆ ಮಾಡಿ, ಇಲ್ಲಿ ಹಾಕಿದ್ದಾರಾ ಎಂಬ ಬಗ್ಗೆಯೂ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ.‌ ಮಂಜುನಾಥ್, ವಿಜಯ್ ಕುಮಾರ್ ಎಂ‌. ಸಂತೋಷ್, ದಾವಣಗೆರೆ ಗ್ರಾಮಾಂತರ ಉಪಾಧೀಕ್ಷಕ ಬಿ.ಎಸ್. ಬಸವರಾಜ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.