ಗುಂಡ್ಲುಪೇಟೆ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಂಡದಿಂದ ಗಣಿಗಾರಿಕೆ ಸ್ಥಳಗಳ ತಪಾಸಣೆ
Team Udayavani, Mar 6, 2022, 12:34 PM IST
ಗುಂಡ್ಲುಪೇಟೆ(ಚಾಮರಾಜನಗರ): ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಅಧಿಕಾರಿಗಳ ತಂಡ ತಾಲೂಕಿನಲ್ಲಿ ನಡೆಯುತ್ತಿರುವ ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ತಾಲೂಕಿನ ಮಡಹಳ್ಳಿ ವ್ಯಾಪ್ತಿಯ 10ಕ್ಕು ಹೆಚ್ಚು ಗಣಿಗಾರಿಕೆ ಸ್ಥಳಗಳು, ಕೂತನೂರು, ಮಲ್ಲಯ್ಯನಪುರ, ಬೆಳಚಲವಾಡಿ, ಹಸಗೂಲಿ, ಹಿರೀಕಾಟಿ, ತೊಂಡವಾಡಿ, ಅರೇಪುರ, ರಂಗೂಪುರ, ಬೆಟ್ಟದಮಾದಹಳ್ಳಿ ಸೇರಿದಂತೆ ಬೇಗೂರು ಹೋಬಳಿಯ ಹಲವು ಗಣಿಗಾರಿಕೆ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ, ಸಂಬಂಧಪಟ್ಟ ಕ್ವಾರೆಯ ಸ್ಥಳದ ಗಣಿ ಮಾಲೀಕರಿಂದ ದಾಖಲಾತಿ ತರಿಸಿಕೊಂಡು ಪರಿಶೀಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಕ್ವಾರಿಯ ವಿಸ್ತೀರ್ಣ, ಗಣಿಗಾರಿಕೆ ನಡೆದಿರುವ ಪರಿಮಿತಿ, ಒತ್ತುವರಿ, ಕೊರೆದಿರುವ ಆಳ ಸೇರಿದಂತೆ ಇನ್ನಿತರ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ :ಬೆಳೆಯುತ್ತಿರುವುದು ಸಹಿಸಲಾಗದೇ ಕೆಲ ಕಿಡಿಗೇಡಿಗಳಿಂದ ಕೊಲೆ : ಹರ್ಷ ನಿವಾಸದಲ್ಲಿ ಬಿಎಸ್ ವೈ
ತಂಡದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡಿಡಿ ನಾಗಭೂಷಣ್, ಎಎಸ್ಪಿ ಸುಂದರ್ ರಾಜ್, ಉಪ ವಿಭಾಗ ಅಧಿಕಾರಿ ಗಿರೀಶ್, ಡಿವೈಎಸ್ಪಿ ಪ್ರಿಯದರ್ಶಿಣಿ ಸಾಣೆಕೊಪ್ಪ, ತಹಸೀಲ್ದಾರ್ ರವಿಶಂಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.