ಕೋವಿಡ್-19: ನಿರಾಶ್ರಿತರಿಗೆ ಪಡಿತರ ವಿತರಿಸಿದ ಡಿಸಿಎಂ ಡಾ. ಅಶ್ವತ್ಥನಾರಾಯಣ

Team Udayavani, Apr 2, 2020, 3:01 PM IST

ಕೋವಿಡ್-19: ನಿರಾಶ್ರಿತರಿಗೆ ಪಡಿತರ ವಿತರಿಸಿದ ಡಿಸಿಎಂ ಡಾ. ಅಶ್ವತ್ಥನಾರಾಯಣ

ಬೆಂಗಳೂರು: ಕೊವಿಡ್‌-19 ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ದಿನಗೂಲಿ ನೌಕರರು, ವಲಸೆ ಕಾರ್ಮಿಕರು ಹಾಗೂ ನಿರಾಶ್ರಿತರಿಗೆ ರಾಜ್ಯ ಸರ್ಕಾರದ ಕಡೆಯಿಂದ ಕಲ್ಪಿಸಿರುವ ಸೌಲಭ್ಯಗಳನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಗುರುವಾರ ಪರಿಶೀಲನೆ ನಡೆಸಿದ್ದಾರೆ.

ನಗರದ ಯಲಹಂಕ, ಬ್ಯಾಟರಾಯನಪುರ, ಅಮೃತಹಳ್ಳಿ ಕಾಲೋನಿ, ಥಣೀಸಂದ್ರ, ರಾಚೇನಹಳ್ಳಿ, ಚೊಕ್ಕನಹಳ್ಳಿ ಸೇರಿದಂತೆ ನಗರದ ಹಲವು ಭಾಗಗಳಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸ್ಥಳೀಯರಿಂದಲೂ ಅಭಿಪ್ರಾಯ ಪಡೆದುಕೊಂಡರು. ಅಲ್ಲದೆ, ಅಗತ್ಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೂ ಸೂಚಿಸಿದರು.

ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಮೊದಲು ಅಧಿಕಾರಿಗಳ ಸಭೆ ನಡೆಸಿದ ಅವರು,ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ನಿರಾಶ್ರಿತರಿಗೆ ಊಟ ವಸತಿ ಮತ್ತು ಇನ್ನಿತರ ವ್ಯವಸ್ಥೆ ಬಗ್ಗೆ ಚರ್ಚಿಸಿದರು.

“ದಿನಗೂಲಿ ನೌಕರರು, ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು ಹಾಗೂ ನಿರಾಶ್ರಿತರಿಗೆ ಕಾರ್ಮಿಕ ಇಲಾಖೆ, ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಇರುವ ಸ್ಥಳದಲ್ಲೇ ಊಟ/ಪಡಿತರ ಕೊಡಲಾಗುತ್ತಿದೆ. ಸಿದ್ಧ ಆಹಾರ ಹಾಗೂ ಪಡಿತರವನ್ನು ಒದಗಿಸಲಾಗುತ್ತಿದೆ. ಎಲ್ಲ ಪ್ರದೇಶಗಳಲ್ಲಿ ಸೋಂಕು ನಿವಾರಕ ಸ್ಪ್ರೇ ಮಾಡಲಾಗುತ್ತಿದೆ. ಮುಖ್ಯವಾಗಿ ಸೋಂಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ,”ಎಂದು ಸಚಿವರು ತಿಳಿಸಿದರು.

“ಯಲಹಂಕ, ಬ್ಯಾಟರಾಯನಪುರ ವ್ಯಾಪ್ತಿಯ 42 ಕಡೆ 10,000 ಜನರಿಗೆ ಆಹಾರ, ಪಡಿತರ, ಆರೋಗ್ಯ ಸೇವೆಯ ವ್ಯವಸ್ಥೆ ಮಾಡಲಾಗಿದೆ.  ನಿರಾಶ್ರಿತರು ಇದ್ದಲ್ಲಿಗೇ ತೆರಳಿ ಆಹಾರ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೂ ಆಹಾರದ ಸಮಸ್ಯೆ ಇದ್ದು, ಅಂಥವರನ್ನು ಗುರುತಿಸಿ ಅವರೊಂದಿಗೆ ಮನೆಗಳಿಗೆ ಊಟ ತಲುಪಿಸುವ ಕೆಲಸ ಮಾಡಲಾಗುತ್ತಿದೆ,” ಎಂದರು.

ಸಹಾಯವಾಣಿ

“ರಾಜ್ಯಮಟ್ಟದ ಸಹಾಯವಾಣಿ 104, ಕಾರ್ಮಿಕ ಇಲಾಖೆಯ ಸಹಾಯವಾಣಿ, ಬಿಬಿಎಂಪಿಯ ಸಹಾಯವಾಣಿಗೂ ಕರೆ ಮಾಡಿ ಜನ ನೆರವು ಪಡೆಯಬಹುದು. ಊಟ ವಸತಿ ಅಷ್ಟೇ ಅಲ್ಲ ಇರುವ ಸ್ಥಳದಿಂದಲೇ ದೂರವಾಣಿ ಮೂಲಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಟೆಲಿ ಕನ್ಸಲ್ಟೇಷನ್‌’ ಸಹ ಮಾಡಲಾಗುತ್ತಿದೆ. ಫೋನ್‌ ವ್ಯವಸ್ಥೆ ಬಳಕೆ ತಿಳಿಯದವರ ಬಳಿಗೆ ಬಿಬಿಎಂಪಿ ಅಧಿಕಾರಿಗಳೇ ತೆರಳಿ, ಅಗತ್ಯ ಸೌಲಭ್ಯ ಕಲ್ಪಿಸುತ್ತಿದ್ದಾರೆ,”ಎಂದು ವಿವರಿಸಿದರು.

ಅಟ್ಟೂರಿನಲ್ಲಿ ತಾತ್ಕಾಲಿಕ ಮಾರುಕಟ್ಟೆ

ತೋಟಗಾರಿಕೆ ಇಲಾಖೆ ವತಿಯಿಂದ ಯಲಹಂಕದ ಅಟ್ಟೂರಿನ ಪೂರ್ವಂಕರ ಅಪಾರ್ಟ್‌ಮೆಂಟ್‌ ಬಳಿ ನಿರ್ಮಿಸಿರುವ ಹಣ್ಣು- ತರಕಾರಿಯ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆಯನ್ನು ಉಪಮುಖ್ಯಮಂತ್ರಿ ಪರಿಶೀಲಿಸಿದರು. ಯಲಹಂಕ ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌. ಆರ್‌. ವಿಶ್ವನಾಥ್‌  ಜತೆ ಇದ್ದರು.

ಆಹಾರ/ಪಡಿತರ ಪೂರೈಕೆ ಆಗುತ್ತಿರುವುದನ್ನು ಖಚಿತಪಡಿಸಿಕೊಂಡರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡ ಮುನೇಂದ್ರ ಅವರು ಸ್ವಂತ ಹಣದಿಂದ ಒದಗಿಸಿರುವ 10,000 ಪಡಿತರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ  ಅಶ್ವತ್ಥನಾರಾಯಣ ಚಾಲನೆ‌‌ ನೀಡಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.