ಯುವಕರು ಶ್ರದ್ಧೆಯಿಂದ ಬದುಕು ಕಟ್ಟಿಕೊಳ್ಳಬೇಕು: ಡಿಸಿಎಂ ಅಶ್ವತ್ಥನಾರಾಯಣ
Team Udayavani, Sep 15, 2020, 8:25 PM IST
ಚಿಕ್ಕಬಳ್ಳಾಪುರ: ಯುವಕರು ಶ್ರಮ, ಶ್ರದ್ಧೆಯಿಂದ ಬದುಕು ಕಟ್ಟಿಕೊಳ್ಳಬೇಕು. ಉತ್ತಮ ಕೌಶಲ್ಯತೆ ಮೂಲಕ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣುವ ಮೂಲಕ ಕ್ರಾಂತಿಕಾರಿ ಬದಲಾವಣೆ ಮಾಡೋಣ ಎಂದು ಉಪಮುಖ್ಯಮಂತ್ರಿಗಳಾದ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು.
ಜಿಲ್ಲಾಡಳಿತ, ಜಿಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್.ಎಂ.ವಿ ಜನ್ಮದಿನಾಚರಣೆಯ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ತಾಲ್ಲೂಕಿನ ಅಂಗಟ್ಟ ಬಳಿ “ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸೂಪರ್ ಟ್ರೇನರ್ಸ್‍ನ ಸಂಸ್ಥೆ”ಯ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ನೆರವೇರಿಸಿ ಮಾತನಾಡಿದ ಅವರು.
ಶಿಕ್ಷಣ ವ್ಯವಸ್ಥೆಯಲ್ಲಿ ಬಹಳಷ್ಟು ಸುಧಾರಣೆ ತರಲಾಗುತ್ತಿದೆ ಶಿಕ್ಷಣ ಮತ್ತು ಕೌಶಲ್ಯದಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕಂಕಣ ಬದ್ದವಾಗಿ ಕಾರ್ಯನಿರ್ವಹಿಸಲಾಗುವುದು. ಯುವಕರಿಗೆ ಉತ್ತಮ ಗುಣಮಟ್ಟದ ತರಬೇತಿ ಹಾಗೂ ಯುವಕರ ಸಬಲೀಕರಣಕ್ಕೆ ಪೂರಕವಾಗಿ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸೂಪರ್ ಟ್ರೇನರ್ಸ್‍ನ ಸಂಸ್ಥೆ”ಯನ್ನು ತೆರೆಯಲಾಗುತ್ತಿದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯುವಕರು ಶ್ರಮ ಜೀವಿಗಳು ಇದ್ದಾರೆ ಆದ್ದರಿಂದ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸೂಪರ್ ಟ್ರೇನರ್ಸ್‍ನ ಸಂಸ್ಥೆ”ಯ ಕೇಂದ್ರದಲ್ಲಿ ಉತ್ತಮ ತರಭೇತಿ ಪಡೆದುಕೊಳ್ಳುವ ಮೂಲಕ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸರ್.ಎಂ.ವಿ ಜನ್ಮದಿನಾಚರಣೆಯ ಅಂಗವಾಗಿ ಇಂದು ಚಿಕ್ಕಬಳ್ಳಾಪುರ ತಾಲ್ಲೂಕು ಅಂಗಟ್ಟ ಬಳಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ 14 ಕೋಟಿ 90 ಲಕ್ಷ ರೂಪಾಯಿ ವೆಚ್ಚದಲ್ಲಿ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟ್ಯೂಟ್ ಫಾರ್ ಸೂಪರ್ ಟ್ರೇನರ್ಸ್ ಸಂಸ್ಥೆ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು, 10 ಎಕರೆ ಜಾಗದಲ್ಲಿ ಈ ಬೃಹತ್ ಸಂಸ್ಥೆ ತಲೆ ಎತ್ತಲಿದ್ದು, ಕಾಮಗಾರಿ 2 ವರ್ಷದಲ್ಲಿ ಪೂರ್ಣಗೊಳ್ಳಲಿದೆ.
ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ಮಾತನಾಡಿ, ಭಾರತ ರತ್ನ ವಿಶ್ವೇಶ್ವರಯ್ಯ ಜಯಂತಿ ದಿನದಂದು ಅವರ ಹುಟ್ಟೂರಿನಲ್ಲಿ ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟ್ಯೂಟ್ ಫಾರ್ ಸೂಪರ್ ಟ್ರೇನರ್ಸ್ ಸಂಸ್ಥೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರೆವೇರಿಸಿರುವುದು ಸಂತಸದ ವಿಷಯ. ಕರ್ನಾಟಕ ರಾಜ್ಯದಲ್ಲಿ ನಮ್ಮ ಜಿಲ್ಲೆಯ ನಂದಿ ಬೆಟ್ಟದ ತಪ್ಪಲಿನಲ್ಲಿ 10 ಎಕರೆ ಪ್ರದೇಶದಲ್ಲಿ ಈ ಸಂಸ್ಥೆ ಸ್ಥಾಪನೆ ಮಾಡಲಾಗುತ್ತಿದೆ. ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ಮಾನವ ಸಂಪನ್ಮೂಲ ವ್ಯಕ್ತಿಗಳ ಮೂಲಕ ತರಬೇತಿ ನೀಡಲಾಗುತ್ತದೆ ಹಾಗೂ ಶಿಕ್ಷಣ ಕಲಿಯದೆ ಇರುವ ಜನರು ಈ ತರಬೇತಿಯಿಂದ ಉಪಯೋಗ ಪಡೆದು ಕೊಳ್ಳಬಹುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.