3ನೇ ಅಲೆ ಎದುರಿಸಲು ಹಳ್ಳಿ ಹಂತದಲ್ಲೇ 8,105 ಆಕ್ಸಿಜನ್ ಬೆಡ್ ವ್ಯವಸ್ಥೆಗೆ ಸರಕಾರ ನಿರ್ಧಾರ
Team Udayavani, May 10, 2021, 9:05 PM IST
ಬೆಂಗಳೂರು: ಈಗಿನ ಪರಿಸ್ಥಿತಿ ಸೇರಿದಂತೆ ಸಂಭನೀಯ 3ನೇ ಅಲೆಯನ್ನೂ ಎದುರಿಸಲು ಸಾಧ್ಯವಾಗುವಂತೆ ಗ್ರಾಮೀಣ ಭಾಗದಲ್ಲೂ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲು ಹೆಜ್ಜೆ ಇಟ್ಟಿರುವ ಸರಕಾರ, ತಾಲೂಕು ಆಸ್ಪತ್ರೆಗಳೂ ಸೇರಿ ಹಳ್ಳಿಯ ವಿವಿಧ ಹಂತಗಳಲ್ಲೇ 8,105 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಈ ಮಾಹಿತಿ ತಿಳಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಜತೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ 146 ತಾಲೂಕು ಆಸ್ಪತ್ರೆಗಳಲ್ಲಿ ಈಗಾಗಲೇ ತಲಾ 4ರಿಂದ 6 ಐಸಿಯು ಬೆಡ್‌ಗಳಿವೆ. ಇವುಗಳನ್ನು 20ಕ್ಕೆ ಹೆಚ್ಚಿಸಲಾಗುವುದು. ಈ ಮೂಲಕ ಒಟ್ಟು 1,925 ಐಸಿಯು ಬೆಡ್‌ಗಳು ಲಭ್ಯವಾಗುತ್ತವೆ. ಜತೆಗೆ, ರಾಜ್ಯಾದ್ಯಂತ 206 ಸಮುದಾಯ ಆರೋಗ್ಯ ಕೇಂದ್ರಗಳಿದ್ದು, ಅವುಗಳಲ್ಲಿ ಈಗ 30 ಸಾಮಾನ್ಯ ಬೆಡ್‌ಗಳಿವೆ. ಅವೆಲ್ಲವನ್ನೂ ಆಕ್ಸಿಜನ್ ಬೆಡ್‌ಗಳನ್ನಾಗಿ ಪರಿವರ್ತಿಸ ಲಾಗುವುದು. ಆಗ ಒಟ್ಟು 6,180 ಆಕ್ಸಿಜನ್ ಬೆಡ್‌ಗಳು ಸಿಗುತ್ತವೆ. ಪ್ರತಿ ಸಮುದಾಯ ಕೇಂದ್ರದ 30 ಬೆಡ್‌ಗಳ ಫೈಕಿ 5 ಬೆಡ್‌ಗಳನ್ನು ಅಧಿಕ ಆಮ್ಲಜನಕ ಸಾಂದ್ರತೆ (ಹೆಡೆನ್ಸಿಟಿ ಆಕ್ಸಿಜನ್) ಯುಳ್ಳ ಬೆಡ್‌ಗಳನ್ನಾಗಿ ಮಾಡಲಾಗುವುದು. ಜತೆಗೆ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 50 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು. ಈ ಎಲ್ಲ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದು ಡಿಸಿಎಂ ತಿಳಿಸಿದರು.
ಎರಡನೇ ಅಲೆಯಲ್ಲಿ ನಾವು ತತ್ತರಿಸಿದ್ದೇವೆ. 3ನೇ ಅಲೆಯ ಬಗ್ಗೆ ಅಲಕ್ಷ್ಯ ಮಾಡುವುದು ಬೇಡ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡುವುದು ಬೇಡ. ಹಳ್ಳಿ ಮಟ್ಟದಿಂದಲೇ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತಾ ಬರಬೇಕು ಎಂದರು.
ವಾರ್ ರೂಂಗೆ ವ್ಯಾಕ್ಸಿನೇಷನ್ ಲಿಂಕ್:
ಈಗ 18ರಿಂದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಕಾರ್ಯ ಶುರುವಾಗಿದೆ. ಎಲ್ಲರಿಗೂ ತಪ್ಪದೇ ಲಸಿಕೆ ಸಿಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಕೋವಿಡ್ ವಾರ್ ರೂಂಗೆ ಕೋವಿಡ್ ವ್ಯಾಕ್ಸಿನೇಷನ್ ಮಾಹಿತಿಯನ್ನು ಕೂಡ ಅಪ್‌ಲೋಡ್ ಮಾಡಲಾಗುವುದು. ಎಲ್ಲ ಮಾಹಿತಿಯೂ ಅಲ್ಲಿ ಸಿಗಬೇಕು ಎಂದು ಅವರು ಮಾಹಿತಿ ಕೊಟ್ಟರು.
ಆಕ್ಸಿಜನ್ ಸಾಂದ್ರಕ ಖರೀದಿ:
ಈಗಾಗಲೇ 3,000 ಆಮ್ಲಜನಕ ಸಾಂದ್ರಕಗಳನ್ನು (ಆಕ್ಸಿಜನ್ ಕಾನ್ಸನ್‌ಟ್ರೇಟರ್) ಖರೀದಿಗೆ ಆದೇಶ ಕೊಡಲಾಗಿದೆ. ಇನ್ನು 10,000 ಖರೀದಿಗೆ ಬೇಡಿಕೆ ಸಲ್ಲಿಸುವಂತೆ ಸೂಚಿಸಿದ್ದೇನೆ. ಈಗ ಪ್ರತಿ ದಿನ 40,000 ರಾಟ್ ಕಿಟ್ ದಿನಕ್ಕೆ ಪೂರೈಕೆ ಆಗತ್ತಿವೆ. ಇನ್ನೂ ಹೆಚ್ಚು ಖರೀದಿಗೆ ಟೆಂಡರ್ ಕರೆಯಲಾಗುತ್ತಿದೆ. ಇದೇ ವೇಳೆ 5 ಲಕ್ಷ ಡೋಸ್ ರೆಮಿಡಿಸಿವರ್ ಖರೀದಿಗೆ ಗ್ಲೋಬಲ್ ಟೆಂಡರ್ ಕರೆಯಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಇದನ್ನೂ ಓದಿ :ಕೋವಿಡ್ ಕೇಂದ್ರವಾಗಿ ಐಟಿಐ ಆಸ್ಪತ್ರೆ ಪರಿವರ್ತನೆ : ಕೇಂದ್ರ ಸಚಿವ ಸದಾನಂದ ಗೌಡ
ವೈದ್ಯ ವಿದ್ಯಾರ್ಥಿಗಳ ನಿಯೋಜನೆ:
ಅಂತಿಮ ವರ್ಷದ ವೈದ್ಯಕೀಯ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರು ಅಗತ್ಯವಿದ್ದು, ಕೂಡಲೇ ವೈದ್ಯ ಶಿಕ್ಷಣ ಇಲಾಖೆ ಜತೆ ಮಾತನಾಡುವಂತೆ ಜಾವೇದ್ ಅಖ್ತರ್ ಅವರಿಗೆ ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಈಗಾಗಲೇ ಕೆಲಸ ಮಾಡುತ್ತಿರುವ ವೈದ್ಯರಿಗೆ ಒತ್ತಡ ಹೆಚ್ಚಾಗಿದ್ದು, ಅದನ್ನು ತಗ್ಗಿಸಲು ವೈದ್ಯ ವಿದ್ಯಾರ್ಥಿಗಳ ಸೇವೆ ಅತ್ಯಗತ್ಯವಾಗಿದೆ ಎಂದರು.
ಲ್ಯಾಬ್‌ಗಳಿಗೆ ಸ್ಯಾಂಪಲ್ಸ್ ಕೊಡಬೇಕಾದರೆ 500ಕ್ಕೂ ಸ್ಯಾಂಪಲ್ಸ್‌ಗೆ ಒಂದೇ ಮೊಬೈಲ್ ಸಂಖ್ಯೆ ಕೊಟ್ಟಿರುವ ಅಂಶ ಬೆಳಕಿಗೆ ಬಂದಿದೆ. ಇನ್ಮೇಲೆ ಹಾಗೆ ಮಾಡಬಾರದು. ಸಾಸ್ಟ್ ಪೋರ್ಟಲ್‌ನಲ್ಲಿಯೇ ಐದು ಜನಕ್ಕಿಂತ ಹೆಚ್ಚು ಜನರ ಸ್ಯಾಂಪಲ್ ಒಂದು ಮೊಬೈಲ್ ಸಂಖ್ಯೆಗೆ ಲಿಂಕ್ ಆಗದಂತೆ ಬದಲಾವಣೆ ಮಾಡಲಾಗುತ್ತದೆ. ಇನ್ನು, ಟೆಲಿಫೋನಿಕ್ ಟ್ರಾಯಾಜಿಕ್ ಮಾಡಬಹುದು ಅಂತ ಕೆಲವರು ಹೇಳುತ್ತಿದ್ದಾರೆ. ಅದು ಬೇಡವೆಂದು ತಿಳಿಸಿದ್ದೇನೆ. ಭೌತಿಕ ಪರೀಕ್ಷೆಯೇ ಮಾಡಬೇಕು ಎಂದು ತಿಳಿಸಿದರು.
ತಕ್ಷಣವೇ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ 50 ವೆಂಟಿಲೇಟರ್ ಕೊಡುವಂತೆ ಸೂಚನೆ ಕೊಟ್ಟಿದ್ದೇನೆ. ಆ ಭಾಗದಲ್ಲಿ ಸೋಂಕು ಉಲ್ಬಣವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ಒತ್ತಡ ಕಡಿಮೆ ಮಾಡಲು ಈ ಕೈಗೊಳ್ಳಲಾಗಿದೆ.
ಚಿಕಿತ್ಸೆ ಮತ್ತು ಕೋವಿಡ್ ನಿರ್ವಹಣೆಯಲ್ಲಿ ಸರಕಾರದ ಮಾರ್ಗಸೂಚಿನ್ನೇ ಪಾಲಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಮಾಡುವಂತಿಲ್ಲ. ಐಸಿಎಂಆರ್, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಜಾರಿ ಮಾಡುವ ಮಾರ್ಗಸೂಚಿಯೇ ಅಂತಿಮ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.