DCM D.K. Shivakumar 15 ದಿನಗಳಲ್ಲಿ ಮತ್ತೆ ತಿಹಾರ್ ಜೈಲಿಗೆ: ಯತ್ನಾಳ್
ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ
Team Udayavani, Jul 22, 2024, 6:35 AM IST
ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್ ಸುಪ್ರೀಂ ಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು ಮಾಡಿದ ಕೆಲವರು ಜೈಲಿಗೆ ಹೋದರೆ ಪಕ್ಷ ಸ್ವತ್ಛ ಆಗುತ್ತದೆ. ಎಷ್ಟೇ ಒಳ ಒಪ್ಪಂದ ಮಾಡಿದರೂ ಲಾಲು ಪ್ರಸಾದ್ ಯಾದವ್ ಜೈಲಿಗೆ ಹೋದರು. ಮೋದಿ ನೇತೃತ್ವದಲ್ಲಿ ನಮ್ಮ ಪಕ್ಷ ಸ್ವತ್ಛ ಆಗಬೇಕು. ನಮ್ಮಲ್ಲಿಯ ಕೆಲವು ಹುಳುಗಳು ಜೈಲಿಗೆ ಹೋಗಬೇಕು
ಸೋಮಣ್ಣ ಸೋಲಿಸಲು ಆರು ಕೋಟಿ ರೂ.:
ತುಮಕೂರಿನಲ್ಲಿ ವಿ. ಸೋಮಣ್ಣ ಅವರನ್ನು ಸೋಲಿಸಲು ನಮ್ಮ ಪಕ್ಷದವರೇ ಆರು ಕೋಟಿ ರೂ. ಕಳುಹಿಸಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಳ ಒಪ್ಪಂದದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹಳ ಹಾನಿ ಆಗಿದೆ. 9 ಕಡೆ ಬಿಜೆಪಿ ಸೋಲಲು ಒಳ ಒಪ್ಪಂದವೇ ಕಾರಣ. ಬೀದರ, ದಾವಣಗೆರೆ, ಕಲಬುರಗಿ, ರಾಯಚೂರು, ಚಾಮರಾಜನಗರ ಸೋಲಿಸಲು ಒಪ್ಪಂದ ಆಗಿತ್ತು. ಶಾಮನೂರು ಶಿವಶಂಕರಪ್ಪ ಅವರು ರಾಘವೇಂದ್ರಗೆ ವೋಟ್ ಹಾಕುವಂತೆ ಹೇಳಿದ್ದರು. ರೇಣುಕಾಚಾರ್ಯ ಕಾಂಗ್ರೆಸ್‌ಗೆ ಮತ ಹಾಕುವಂತೆ ಹೇಳಿದ್ದು ಬಯಲಾಗಿದೆ. ಎಲ್ಲ ಕ್ಷೇತ್ರಗಳ ತನಿಖೆ ಆಗಲಿ ಎಂದರು.
ಹಾದಿ ಬೀದಿಯಲ್ಲಿ ಹೋಗುವವರಿಗೆ ಅಪ್ಪಾಜಿ ಎನ್ನುವುದಿಲ್ಲ: ಯತ್ನಾಳ್
ನಾವು ಹುಟ್ಟಿದವರಿಗೆ ಮಾತ್ರ ಅಪ್ಪಾಜಿ ಎನ್ನುತ್ತೇವೆ. ಹಾದಿ ಬೀದಿಯಲ್ಲಿ ಹೋಗುವವರಿಗೆ ಅಪ್ಪಾಜಿ ಎನ್ನುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ನಲ್ಲಿಯ ಅನೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಶಾಸಕಾಂಗ ಪಕ್ಷದಲ್ಲಿ ಸಚಿವರ ಮೇಲೆ ಆರೋಪ ಮಾಡಿದ್ದಾರೆ. ಸಚಿವರು ಗೌರವ ಕೊಡುತ್ತಿಲ್ಲ. ಕೆಲಸಕ್ಕೆ ಹೋದರೆ ಅನುದಾನ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆ ಮೇಲೆ ಜನರಿಗೆ ವಿಶ್ವಾಸ ಇಲ್ಲವಾಗಿದೆ. ಗ್ಯಾರಂಟಿ ಬೆನ್ನು ಹತ್ತದಂತೆ ಶಾಸಕರು ಹೇಳಿದ್ದಾರೆ. ಆ ಪಕ್ಷದಲ್ಲಿ ಜಗಳವಾಗಿದೆ. ಬಹಳ ದಿನಗಳ ಕಾಲ ಸರ್ಕಾರ ಉಳಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.