Bengaluru: ಕಲುಷಿತ ನೀರು ಸೇವಿಸಿ ಸಾವು:ವರದಿ ಕೇಳಿದ ಹೈಕೋರ್ಟ್
Team Udayavani, Aug 9, 2024, 8:21 PM IST
ಬೆಂಗಳೂರು: ಕಳೆದ 1 ತಿಂಗಳಲ್ಲಿ ಕಲುಷಿತ ನೀರು ಸೇವಿಸಿ ತುಮಕೂರು ಜಿಲ್ಲೆಯಲ್ಲಿ 6 ಮಂದಿ ಮತ್ತು ಕೋಲಾರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿರುವ ಘಟನೆ ಸಂಬಂಧ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಂಪೂರ್ಣ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ತುಮಕೂರು ಮೂಲದ ವಕೀಲ ರಮೇಶ್ ಎಲ್. ನಾಯಕ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠವು, 1 ತಿಂಗಳಲ್ಲಿ ಕಲುಷಿತ ನೀರಿನ ಸೇವನೆಯಿಂದ ಮೃತಪಟ್ಟ ಬಗ್ಗೆ ಈವರೆಗೆ ಕೈಗೊಂಡ ಕ್ರಮಗಳ ಜತೆಗೆ, ಶುದ್ಧ ಕುಡಿಯುವ ನೀರಿನ ಲಭ್ಯತೆ, ಶೇಖರಣಾ ಸೌಲಭ್ಯ ಹಾಗೂ ಜಲ ಮೂಲಗಳ ಸಂರಕ್ಷಣೆ ಕುರಿತಂತೆ ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಆಗಸ್ಟ್ 28ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.