ಕನ್ನಡ ಕಲಿಕೆ ಕಡ್ಡಾಯಕ್ಕೆ ತಡೆ: ಸರಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ವಿಚಾರಣೆ ಜುಲೈ ತಿಂಗಳಿಗೆ ಮುಂದೂಡಿಕೆ
Team Udayavani, Apr 7, 2022, 7:05 AM IST
ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಸೇರಿ ಕೆಲ ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಈ ಆದೇಶ ನೀಡಿತು.
“ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆಗಳನ್ನು ಕಡ್ಡಾಯಗೊಳಿಸಲಾಗಿಲ್ಲ’ ಎಂದು ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರದ ಈ ನಿಲುವು ಆಧರಿಸಿ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಲಾಗುತ್ತಿದೆ. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ನಿಟ್ಟಿನಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸುವಂತಿಲ್ಲ ಎಂದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಆದ್ದರಿಂದ, ಪದವಿ ಹಂತದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2021ರ ಆ.7 ಹಾಗೂ ಸೆ.15ರಂದು ಹೊರಡಿಸಿರುವ ಆದೇಶ ಜಾರಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ತಿಳಿಸಿ, ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್, ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿತು.
ಆದೇಶ ಮರುಪರಿಶೀಲಿಸಲು ಸೂಚಿಸಿತ್ತು:
ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆಗಳನ್ನು ಕಡ್ಡಾಯ ಮಾಡಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹೊರಗಿನಿಂದ ಬಂದ ವಿದ್ಯಾರ್ಥಿಗಳ ಮೇಲೆ ಕನ್ನಡ ಭಾಷೆ ಕಲಿಕೆಯನ್ನು ಏಕೆ ಹೇರುತ್ತೀರಿ?. ಉದ್ಯೋಗ ಪಡೆಯಲು ಕನ್ನಡ ಕಲಿಕೆಯುವಂತೆ ಷರತ್ತು ವಿಧಿಸಿ. ಆದರೆ, ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಹೇರಲಾಗದು. ಸರ್ಕಾರದ ನೀತಿಯಿಂದ ಪದವಿಗೂ ಮೊದಲು ಕನ್ನಡ ಕಲಿಯದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ.
ಹಾಗಾಗಿ ಸರ್ಕಾರವು ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು. ಇಲ್ಲವಾದರೆ ಅರ್ಜಿದಾರರ ಮಧ್ಯಂತರ ಮನವಿ ಪರಿಗಣಿಸಿ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿತ್ತು. ಆದೇಶ ಮರುಪರಿಶೀಲಿಸುವ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಿಳಿಸದ ಕಾರಣ, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಎಸ್. ನಾಗಾನಂದ, ಶ್ರೀಧರ ಪ್ರಭು ಮತ್ತಿತರರು ವಾದ ಮಂಡಿಸಿದ್ದರು. ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದ್ದರು. ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ್ ವಾದ ಮಂಡಿಸಿದ್ದರು.
ಇದನ್ನೂ ಓದಿ:ಉರ್ದು ಮಾತನಾಡದ ಕಾರಣಕ್ಕೇ ಚಂದ್ರು ಕೊಲೆ: ಪುನರುಚ್ಚರಿಸಿದ ಬಿಜೆಪಿ
ಅರ್ಜಿದಾರರ ವಾದ:
ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಲಿಯುವುದನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಸಂವಿಧಾನ ಬಾಹಿರವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಕನ್ನಡ ಕಡ್ಡಾಯ ಎಂದು ಹೇಳಿಲ್ಲ. ಶಾಲಾ ಕಲಿಕೆಯಲ್ಲೂ ಕನ್ನಡ ಕಡ್ಡಾಯವಿಲ್ಲ. ಇಂತಹ ಸನ್ನಿವೇಶದಲ್ಲಿ ಹೀಗಿದ್ದರೂ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಲಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತದೆ ಹಾಗೂ ಪದವಿಯಲ್ಲಿ ಭಾಷೆ ವಿಷಯ ಆಯ್ಕೆಗೂ ಅಡ್ಡಿಯಾಗಿದೆ. ಆದ್ದರಿಂದ ಸರ್ಕಾರದ ಆದೇಶ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ರಾಜ್ಯ ಸರ್ಕಾರದ ವಿವರಣೆ:
ಒಂದು ಭಾಷಾ ವಿಷಯವಾಗಿ ಕಲಿಯಲು ಕನ್ನಡವನ್ನು ಪರಿಚಯಿಸಲಾಗುತ್ತಿದೆ. ಆದರೆ, ಶಾಸ್ತ್ರೀಯವಾಗಿ ಕನ್ನಡ ಕಲಿಸುವ ಉದ್ದೇಶವಿಲ್ಲ . ಸರ್ಕಾರದ ನೀತಿಯ ಭಾಗವಾಗಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯ ಮಾಡಲಾಗಿದೆ. ಇದೊಂದು ಸದುದ್ದೇಶದ ಪ್ರಯತ್ನವಾಗಿದೆ. ಕನ್ನಡ ಕಲಿಯುವುದರಿಂದ ರಾಜ್ಯದಲ್ಲಿ ಉದ್ಯೋಗ ಪಡೆಯುವುದಕ್ಕೆ ಸಹಕಾರಿಯಾಗುತ್ತದೆ. ಸರ್ಕಾರದ ಆದೇಶ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಮಸ್ಯೆಯಾದರೆ ಶಿಕ್ಷಕರು, ವಿದ್ಯಾರ್ಥಿಗಳು ನ್ಯಾಯಾಲಯದ ಮುಂದೆ ಬರಬೇಕು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ರೂಪದಲ್ಲಿ ಪ್ರಶ್ನಿಸಿರುವುದು ಸಮರ್ಥನೀಯವಲ್ಲ.
ಕೇಂದ್ರ ಸರ್ಕಾರದ ನಿಲುವು:
ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಾಗೂ ಅದರ ನಿಯಮಗಳಲ್ಲಿ ಉಲ್ಲೇಖವಿಲ್ಲ. ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಮಹಾತ್ವಾಕಾಂಕ್ಷೆ ಹಾಗೂ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಸುಲಭವಾಗಿ ಸಮಗ್ರ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಎನ್‌ಇಪಿ ಜಾರಿಗೊಳಿಸಲಾಗಿದೆ.
ಎನ್‌ಇಪಿಯ 22ನೇ ಅಧ್ಯಾಯದಲ್ಲಿ ಭಾರತದ ಭಾಷೆಗಳು, ಕಲೆ ಮತ್ತು ಸಂಸ್ಕೃತಿ ಪ್ರಚಾರದ ಬಗ್ಗೆ ಹೇಳಲಾಗಿದೆ. ಇದೇ ಅಧ್ಯಾಯದಲ್ಲಿ ದ್ವಿಭಾಷೆಗೆ ಅವಕಾಶವಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳು ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಬೋಧನಾ ಭಾಷೆಯನ್ನಾಗಿ ಬಳಕೆ ಮಾಡಬಹುದಾಗಿದೆ. ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಯಮಗಳನ್ನು ಪುನರ್ ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.