ಎಲ್‌ಇಡಿ ಬೋರ್ಡ್ ಅಳವಡಿಸಿ ; ಹಾಸಿಗೆ ಲಭ್ಯತೆಯ ವಿವರ ಬಹಿರಂಗಕ್ಕೆ ಸೂಚನೆ
Team Udayavani, Jun 11, 2020, 9:34 AM IST
ಸಾಂದರ್ಭಿಕ ಚಿತ್ರ
ದಿಲ್ಲಿ ಸರಕಾರದ ಆ್ಯಪ್‌ನಲ್ಲೂ ಮಾಹಿತಿ ಲಭ್ಯವಾಗುವಂತೆ ಮಾಡಲು ಕ್ರಮಕ್ಕೆ ಸೂಚನೆ
ಲೆಫ್ಟಿನೆಂಟ್ ಗವರ್ನರ್‌ರಿಂದ ಮುಖ್ಯ ಕಾರ್ಯದರ್ಶಿಗೆ ಆದೇಶ
ಹೊಸದಿಲ್ಲಿ: ದಿಲ್ಲಿಯ ಎಲ್ಲ ಆಸ್ಪತ್ರೆಗಳು ಹಾಗೂ ಪ್ರಮುಖ ಆರೋಗ್ಯ ಕೇಂದ್ರಗಳಲ್ಲಿ ಎಲ್‌ಇಡಿ ಫಲಕಗಳನ್ನು ಅಳವಡಿಸಿ. ಅದರಲ್ಲಿ ಹಾಸಿಗೆಗಳ ಲಭ್ಯತೆ, ಶುಲ್ಕ ಹಾಗೂ ದಾಖಲಾತಿಗೆ ಯಾರನ್ನು ಸಂಪರ್ಕಿಸಬೇಕು ಎಂಬಿತ್ಯಾದಿ ವಿವರಗಳನ್ನು ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಿ ಎಂದು ದಿಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಸೂಚಿಸಿದ್ದಾರೆ. ಜತೆಗೆ, ಆಸ್ಪತ್ರೆಗಳ ಎಲ್‌ಇಡಿ ಫಲಕಗಳಲ್ಲಿ ಪ್ರದರ್ಶಿಸಲ್ಪಡುವ ಮಾಹಿತಿಯು ದಿಲ್ಲಿ ಸರಕಾರದ ಮೊಬೈಲ್ ಆ್ಯಪ್‌ನಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಿ ಎಂದು ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಆಸ್ಪತ್ರೆಗಳ ಹಾಸಿಗೆಗಳ ಲಭ್ಯತೆ ಕುರಿತು ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಸೂಚನೆ ಮಹತ್ವ ಪಡೆದಿದೆ.
ಆಗಾಗ ದಿಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ಕೊಟ್ಟು, ಫಲಕದಲ್ಲಿ ಪ್ರದರ್ಶಿಸಿರುವ ಮಾಹಿತಿ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಯಾವುದೇ ವ್ಯಕ್ತಿಗೂ ದುಬಾರಿ ಶುಲ್ಕ ವಿಧಿಸಬಾರದು, ಪ್ರವೇಶಾತಿಗೆ ನಿರಾಕರಿಸಬಾರದು ಎಂದೂ ಬೈಜಲ್ ಹೇಳಿದ್ದಾರೆ.
ನಾವು ಜಗಳವಾಡಿದರೆ, ಕೋವಿಡ್ ಗೆಲ್ಲುತ್ತದೆ: ಇದಕ್ಕೂ ಮುನ್ನ ಮಾತನಾಡಿದ್ದ ದಿಲ್ಲಿ ಸಿಎಂ ಅರ ವಿಂದ ಕೇಜ್ರಿವಾಲ್, ಕೇಂದ್ರದ ನಿರ್ಧಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಆದೇಶ ಪಾಲಿ ಸುವುದಾಗಿ ಹೇಳಿದ್ದಾರೆ. ಜತೆಗೆ, ಇದು ರಾಜಕೀಯ ಮಾಡುವ, ಪ್ರತಿರೋಧ ಒಡ್ಡುವ ಸಮಯವಲ್ಲ. ಕೋವಿಡ್ ಗೆ ಸಂಬಂಧಿಸಿದ ಎಲ್ಲ ನಿರ್ಧಾರಗಳನ್ನು ಮರುಪ್ರಶ್ನೆ ಹಾಕದೇ ಪಾಲಿಸುತ್ತೇವೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಜಗಳವಾಡಲು ಶುರುಮಾಡಿದರೆ, ಕೋವಿಡ್ ಗೆಲುವು ಸಾಧಿಸುತ್ತದೆ’ ಎಂದಿದ್ದಾರೆ. ಬುಧವಾರ ರಾತ್ರಿ ಸಿಎಂ ಕೇಜ್ರಿವಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.