ಕತ್ತೆಗೊಂದು ಕಾಲ…!ಹುಳಿಯಾರಿನಲ್ಲಿ ಕತ್ತೆ ಹಾಲಿಗೂ ಭಾರೀ ಬೇಡಿಕೆ
Team Udayavani, Sep 21, 2019, 6:07 PM IST
ಹುಳಿಯಾರು: ಕತ್ತೆ ಹಾಲು ಬೇಕಾ ಕತ್ತೆ ಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಕಡಿಮೆಯಾಗುತ್ತೆ ಎಂದು ಕೂಗುತ್ತಿದ್ದಂತೆ ತಾಯಂದಿರು ಓಡೋಡಿ ಬಂದು ಹಾಲು ಖರೀದಿಸಿ ಮಕ್ಕಳಿಗೆ ಕುಡಿಸಿದರು.
ಹೌದು… ಇದು ಹುಳಿಯಾರಿನಲ್ಲಿ ಶನಿವಾರ ಕಂಡು ಬಂದ ದೃಶ್ಯ. ಕತ್ತೆಯನ್ನು ಜನರು ನಿಕೃಷ್ಟವಾಗಿ ಕಾಣುತ್ತಾರೆ. ಆದರೆ ಹುಳಿಯಾರಿನ ಜನರು ಕತ್ತೆ ಹಾಲು ಕುಡಿಯಲು ಆಸಕ್ತಿ ವಹಿಸಿರುವುದು ಅಚ್ಚರಿ ಸೃಷ್ಟಿಸಿದೆ. ಅಂದ ಹಾಗೆ ಕತ್ತೆ ಹಾಲು ಅರ್ಧ ಲೀಟರ್‌ನಷ್ಟು ಸಿಗುವುದಿಲ್ಲ. ಗ್ರಾಹಕರ ಎದುರೆ ಹಾಲು ಕರೆದು ಕೊಡಲಾಗುತ್ತದೆ. ಒಂದು ವಳಲೆ ಹಾಲಿಗೆ 50 ರೂ. ನಿಗದಿ ಮಾಡಿದ್ದಾರೆ.
ಒಂದು ಕತ್ತೆಯು ದಿನವೊಂದಕ್ಕೆ ಸುಮಾರು 300 ಎಂ.ಎಲ್. ನಿಂದ ಅರ್ಧ ಲೀಟರ್ ಹಾಲು ನೀಡುತ್ತದೆ . ಹಳ್ಳಿ ಹಳ್ಳಿ ತಿರುಗಿ ಮಾರಾಟ ಮಾಡಬೇಕು. ಹೆಚ್ಚೆಂದರೆ ದಿನಕ್ಕೆ 600ರಿಂದ 800 ರೂ ಸಂಪಾದಿಸುತ್ತೇವೆ . ಸದಾ ಇದನ್ನೇ ನಂಬುವುದೂ ಕಷ್ಟ. ಹೀಗಾಗಿ ಕೃಷಿ ಕೆಲಸಗಳಿಗೆ ಕೂಲಿ ಮಾಡಿ ಜೀವನ ನಿರ್ವಹಣೆ ಮಾಡುತ್ತೇವೆ ಎನ್ನುತ್ತಾರೆ ಕತ್ತೆ ಮಾಲೀಕ ಹನುಮಂತಪ್ಪ.
ಕೃಷಿ ಕಸುಬು ಇಲ್ಲದಿದ್ದಾಗ ಪಟ್ಟಣಗಳಿಗೆ ತೆರಳಿ ಕತ್ತೆ ಹಾಲು ಮಾರುತ್ತೇವೆ .ಬೆಳಗ್ಗೆ 7ರಿಂದ 10 ರವರೆಗೆ ಕತ್ತೆಯ ಹಾಲು ಎಂದು ಕೂಗುತ್ತಾ ಮಾರಾಟಗಾರರು ಅಡ್ಡಾಡುತ್ತಾರೆ. ಆಸಕ್ತರು ಹಣ ನೀಡಿ ಸ್ಥಳದಲ್ಲಿಯೇ ಕತ್ತೆ ಹಾಲು ಕುಡಿಯುತ್ತಾರೆ. ಒಟ್ಟಾರೆ “ಕತ್ತೆಗೊಂದು ಕಾಲ’ ಎಂಬ ಮಾತು ಈಗ ಹಾಲು ಸೇವನೆಯಿಂದ ನಿಜವಾಗಿದೆ!.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.