Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
ಮುಷ್ಕರ ನಿರತರಿಗೆ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಬೆಂಬಲ
Team Udayavani, Jan 9, 2025, 7:15 AM IST
ಬೆಂಗಳೂರು: ಕನಿಷ್ಠ ಮಾಸಿಕ ಗೌರವಧನ 15 ಸಾವಿರ ರೂ. ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಕೈಗೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ ಎರಡನೇ ದಿನಕ್ಕೆ ಮುಂದುವರಿದಿದೆ.
ಎಐಯುಟಿಯುಸಿ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ರಾತ್ರಿ ಕೊರೆಯುವ ಚಳಿಯ ನಡುವೆಯೂ ಸಾವಿರಾರು ಆಶಾಕಾರ್ಯಕರ್ತೆಯರು ತಮ್ಮ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ಲೋಕಾಯುಕ್ತ ನಿವೃತ್ತ ನ್ಯಾ| ಎನ್. ಸಂತೋಷ್ ಹೆಗ್ಡೆ ಅವರು ಪಾಲ್ಗೊಂಡು ಪ್ರತಿಭಟನೆ ಬೆಂಬಲಿಸಿ ನೈತಿಕ ಬಲ ತುಂಬಿದರು.
ಆ ಬಳಿಕ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ದುಡಿಯುವ ಯಾವುದೇ ವ್ಯಕ್ತಿಯಾದರೂ ತನ್ನ ಜೀವನಕ್ಕೆ ಬೇಕಾದ ಕನಿಷ್ಠ ಮೌಲ್ಯ ಪಡೆಯುವುದು ಸಂವಿಧಾನ ಬದ್ಧವಾದ ಮಾನವ ಹಕ್ಕು. ಅದು ವೇತನ, ಗೌರವಧನ ಅಥವಾ ಇನ್ನಾವುದೇ ರೂಪದಲ್ಲಿರಬಹುದು ಅದನ್ನು ನೀಡಬೇಕಿರುವುದು ಸರಕಾರದ ಕರ್ತವ್ಯ ಎಂದರು.
ಗೌರವಧನ ಹೆಚ್ಚಿಸಲು ಪ್ರಯತ್ನ : ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು. ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದರು.
9500 ರೂ. ನೀಡಲು ಸಿದ್ಧ: ದಿನೇಶ್
ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂ. ಮುಂಗಡವಾಗಿ ನೀಡಲು ರಾಜ್ಯ ಸರಕಾರ ಸಿದ್ಧವಾಗಿ ದೆ. ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಿ. -ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.